Tata: ಕಡಿಮೆ ಬೆಲೆಗೆ ಹೊಸ ಟಾಟಾ ಕಾರು ಮಾರಾಟಕ್ಕೆ.. ನೀವು ಶೋರೂಂಗೆ ಓಡುತ್ತೀರಿ, ಪ್ರಮುಖಾಂಶಗಳಿವು!

ನಿನ್ನೆ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತು. ಈ ಕಾರು ನಾನಾ ಬಗೆಯ ಹೊಸತನಗಳಿಗೂ ಹೆಸರುವಾಸಿಯಾಗಿದೆ. ಬುಕ್ಕಿಂಗ್‌ನ್ನು ಕೂಡ ಪ್ರಾರಂಭಿಸಲಾಗಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಪಂಚ್ ಫೇಸ್‌ಲಿಫ್ಟ್' ಚೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ನೂತನ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಹೊಸ 'ಟಾಟಾ ಪಂಚ್ ಫೇಸ್‌ಲಿಫ್ಟ್' ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಎಲ್ಲ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಕಾಂಪ್ಲಿಶ್ಡ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Tata Punch Facelift Suv Top Things You Should Must Know

ವಿನ್ಯಾಸ & ಬಣ್ಣಗಳು (Design & Colors):

ಇದು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 16-ಇಂಚಿನ ಅಲಾಯ್‌ ವೀಲ್‌ಗಳನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಡೇಟೋನ್ ಗ್ರೇ, ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಸೈಂಟಿಫಿಕ್ ಬ್ಲೂ ಹಾಗೂ ಕ್ಯಾರಮೆಲ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ಈ ಕಾರು ಸಣ್ಣ ಎಸ್‌ಯುವಿಯಾಗಿದೆ. ಆದರೂ ವಿಶಾಲವಾಗಿದೆ. 3,827 ಎಂಎಂ ಉದ್ದ, 1,742 ಎಂಎಂ ಅಗಲ ಮತ್ತು 1,615 ಎಂಎಂ ಎತ್ತರವಿದೆ. 193 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,445 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Tata Punch Facelift Suv Top Things You Should Must Know

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ನೂತನ 'ಟಾಟಾ ಪಂಚ್ ಫೇಸ್‌ಲಿಫ್ಟ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ಪೆಟ್ರೋಲ್ ರೂಪಾಂತರಗಳು, 366 ಲೀಟರ್ ಹಾಗೂ ಸಿಎನ್‌ಜಿ ರೂಪಾಂತರಗಳು 210 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿವೆ.

ಕಾರ್ಯಕ್ಷಮತೆ (Performance):

ಇದು ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.

Tata Punch Facelift Suv Top Things You Should Must Know

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ದೊಡ್ಡ ಗಾತ್ರದ 8 ಅಥವಾ 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್‌, ಟೈಪ್-ಸಿ ಫಾಸ್ಟ್ ಚಾರ್ಜರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಡಿಫಾಗರ್, ರೈನ್ ಸೆನ್ಸಿಂಗ್ ವೈಪರ್‌ಗಳು, ಸನ್‌ರೂಫ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಹೊಸ 'ಪಂಚ್ ಫೇಸ್‌ಲಿಫ್ಟ್' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ರಿವರ್ಸ್ ಕ್ಯಾಮೆರಾ, ಕ್ರೂಸ್ ಕಂಟ್ರೋಲ್, ಬ್ಲೈಂಡ್ ವ್ಯೂ ಮಾನಿಟರ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, January 14, 2026, 8:40 [IST]
English summary
Tata punch facelift suv top things you should must know
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+