Tata: ಟಾಟಾ ಬ್ರ್ಯಾಂಡ್‌ಗೆ ಜೈಕಾರ ಹಾಕಿದ ಜನ.. ಈ ಕಮ್ಮಿ ಬೆಲೆಯ ಕಾರು ಭಾರೀ ಸಂಖ್ಯೆಯಲ್ಲಿ ಸೇಲ್ಸ್.. ನಂ.1 ಆಗುತ್ತಾ?
ಟಾಟಾ ಪಂಚ್ (Tata Punch) ವಿಶ್ವಾಸಾರ್ಹ ಮೈಕ್ರೋ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಫೆಬ್ರವರಿ - 2026) ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 18,748 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 14,559 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 28.77% ಬೆಳವಣಿಗೆಯಾಗಿದೆ.
ಇದರೊಂದಿಗೆ ಜನವರಿಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ 'ಟಾಟಾ ಪಂಚ್' 3ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಟಾಟಾ ನೆಕ್ಸಾನ್ (19,430 ಯುನಿಟ್) ಇದ್ದು, ಎರಡನೇ ಸ್ಥಾನವನ್ನು ಮಾರುತಿ ಸುಜುಕಿ ಡಿಜೈರ್ (19,326 ಯುನಿಟ್) ಭದ್ರಪಡಿಸಿಕೊಂಡಿದೆ.

ಸ್ಟ್ಯಾಂಡರ್ಡ್ ಟಾಟಾ ಪಂಚ್ ವಿಶೇಷತೆಗಳೇನು:
ಇದು ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿಸಬಹುದು. ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಕಾಂಪ್ಲಿಶ್ಡ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಎಸ್‌ಯುವಿಯು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸೆಂಟಿಫಿಕ್ ಬ್ಲ್ಯೂ, ಸಿಲ್ವರ್, ರೆಡ್, ಕ್ಯಾರಮೆಲ್, ಡೇಟೋನಾ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 193 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ 'ಪಂಚ್' ಎಸ್‌ಯುವಿಯು 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 19 ರಿಂದ 27 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 150 ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 11.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಇದು 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪುಶ್-ಬಟನ್ ಸ್ಟಾರ್ಟ್, ಟೈಪ್-ಸಿ ಫಾಸ್ಟ್ ಚಾರ್ಜರ್, ರೈನ್ ಸೆನ್ಸಿಂಗ್ ವೈಪರ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಕ್ರೂಸ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
'ಟಾಟಾ ಪಂಚ್ ಇವಿ' ಕೂಡ ಖರೀದಿಗೆ ಲಭ್ಯ:
ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.9.69 ಲಕ್ಷದಿಂದ ರೂ.12.59 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 365 ರಿಂದ 468 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.
ಹೊಸ ಪಂಚ್ ಇವಿಯೂ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. 10.2-ಇಂಚಿನ ಸೆಂಟ್ರಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 2-ಸ್ಪೋಕ್ ಸ್ಟೀರಿಂಗ್ ವೀಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸಿಂಗಲ್-ಪೇನ್ ಸನ್‌ರೂಫ್‌ಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಸ್ಟಾರ್ಟ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








