TATA: 600 Km ಓಡುತ್ತೆ! ಅತಿ ಶೀಘ್ರದಲ್ಲೇ ಈ ಹೊಸ ಟಾಟಾ ಕಾರು ಮಾರಾಟಕ್ಕೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಟಾಟಾ ಸಫಾರಿ (Tata Safari) ಜನಪ್ರಿಯ ಫ್ಯಾಮಿಲಿ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದ್ದು, ಪೆಟ್ರೋಲ್/ಡೀಸೆಲ್ ಎಂಜಿನ್ ಆಯ್ಕೆಯಲ್ಲಿಯೂ ಸಿಗುತ್ತದೆ. ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) 1,446 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಡಿಸೆಂಬರ್‌ನಲ್ಲಿ 1,385 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 4% ಪ್ರಗತಿಯಾಗಿದೆ. ಸದ್ಯ 'ಟಾಟಾ' ಇದೇ ಕಾರನ್ನು ಎಲೆಕ್ಟ್ರಿಕ್ ರೂಪದಲ್ಲೂ ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ 'ಟಾಟಾ ಸಫಾರಿ' ಎಲೆಕ್ಟ್ರಿಕ್ ಎಸ್‌ಯುವಿಯು ಈ ವರ್ಷದ ಮೇ ತಿಂಗಳಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಆದರೆ, ಈ ಕುರಿತಂತೆ ಕಂಪನಿಯು ಯಾವುದೇ ಅಧಿಕೃತ ವಿವರಗಳನ್ನು ಬಹಿರಂಗಪಡಿಸಿಲ್ಲ. ಇದು ಕನಿಷ್ಠ ರೂ.26 ಲಕ್ಷ ಹಾಗೂ ಗರಿಷ್ಠ ರೂ.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

Tata Safari Electric Suv Launch Soon Expected Price Details

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿರಲಿದೆ. ಸ್ಟ್ಯಾಂಡರ್ಡ್ ಸಫಾರಿಗೂ ಹೋಲಿಕೆಯಾಗಲಿದೆ ಎನ್ನಲಾಗಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು ಮತ್ತು ದೊಡ್ಡ ಗಾತ್ರದ ಅಲಾಯ್ ವೀಲ್‌ಗಳನ್ನು ಪಡೆದಿರಲಿದೆ. ಜೊತೆಗೆ ನಾನಾ ಬಗೆಯ ಬಣ್ಣಗಳೊಂದಿಗೂ ಲಭ್ಯವಾಗುವ ನಿರೀಕ್ಷೆಯಿದೆ.

ಹೊಸ ಸಫಾರಿ ಇವಿ ಹೆಚ್ಚು ವಿಶಾಲವಾಗಿರಲಿದೆ. 4,668 ಮಿ.ಮೀ ಉದ್ದ, 1,922 ಮಿ.ಮೀ ಅಗಲ ಮತ್ತು 1,795 ಮಿ.ಮೀ ಎತ್ತರವಿರಲಿದೆ. ಜೊತೆಗೆ 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಇದು 'ಟಾಟಾ ಹ್ಯಾರಿಯರ್ ಇವಿ'ಯಂತೆಯೇ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿರಲಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

ಈ ಎಲೆಕ್ಟ್ರಿಕ್ ಎಸ್‌ಯುವಿಯು 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸುಲಭವಾಗಿ ಸಂಚಾರ ಮಾಡಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, 4-ಸ್ಪೋಕ್ ಸ್ಟೀರಿಂಗ್ ವೀಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಂಬಿಯೆಂಟ್ ಲೈಟಿಂಗ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎನ್ನಲಾಗಿದೆ.

ನೂತನ ಟಾಟಾ ಸಫಾರಿ ಇವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್​​ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿರುವ ನಿರೀಕ್ಷೆಯಿದೆ.

ಇತ್ತೀಚೆಗೆ ಬಿಡುಗಡೆಗೊಂಡ 'ಟಾಟಾ ಸಫಾರಿ ಪೆಟ್ರೋಲ್' ವಿಶೇಷತೆಗಳೇನು:

ಈ ಎಸ್‌ಯುವಿಯು ರೂ.13.29 ಲಕ್ಷದಿಂದ ರೂ.25.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸೂಪರ್ನೋವಾ ಕಾಪರ್, ಫ್ರಾಸ್ಟ್ ವೈಟ್, ರಾಯಲ್ ಬ್ಲೂ, ಪ್ಯೂರ್ ಗ್ರೇ, ಡೇಟೋನಾ ಗ್ರೇ, ಕಾರ್ಬನ್ ಬ್ಲ್ಯಾಕ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 6/ 7 ಆಸನಗಳನ್ನು ಒಳಗೊಂಡಿದೆ.

ಇದು 1.5-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 14 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, 4-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು ಸನ್‌ರೂಫ್‌ನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Saturday, January 17, 2026, 21:46 [IST]
English summary
Tata safari electric suv launch soon expected price details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+