TATA: 7-ಸೀಟರ್.. ಸದ್ದಿಲ್ಲದೇ ಆನೆ ಗಾತ್ರದ ಟಾಟಾ ಸಫಾರಿ ಪೆಟ್ರೋಲ್ ಕಾರು ಬಿಡುಗಡೆ, ಬೆಲೆ ಎಷ್ಟು.. ವಿಶೇಷತೆಗಳೇನು?

ಬಹುನಿರೀಕ್ಷಿತ ಟಾಟಾ ಸಫಾರಿ ಪೆಟ್ರೋಲ್ (Tata Safari Petrol) ಎಸ್‌ಯುವಿ, ಬುಧವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಈವರೆಗೆ ಕೆಲವೇ ಡೀಸೆಲ್ ಪವರ್‌ಟ್ರೇನ್‌ ಆಯ್ಕೆಯಲ್ಲಿ ಮಾತ್ರ ಗ್ರಾಹಕರ ದೊರೆಯುತ್ತಿತ್ತು. ನೂತನ ಕಾರು ಅತ್ಯುತ್ತಮವಾದ ವಿನ್ಯಾಸ ಹೊಂದಿದ್ದು, ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ . ಬನ್ನಿ, ಹೊಸ 'ಸಫಾರಿ' ಕಾರಿನ ಬೆಲೆ ಎಷ್ಟು.. ಏನೆಲ್ಲಾ ವಿಶೇಷತೆಗಳಿವೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ನೂತನ ಟಾಟಾ ಸಫಾರಿ ಪೆಟ್ರೋಲ್ ಎಸ್‌ಯುವಿ, ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಕನಿಷ್ಠ ರೂ.13.29 ಲಕ್ಷ ಹಾಗೂ ಗರಿಷ್ಠ ರೂ.25.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಪ್ಯೂರ್ ಎಕ್ಸ್, ಅಡ್ವೆಂಚರ್ ಎಕ್ಸ್ ಪ್ಲಸ್, ಅಕಂಪ್ಲಿಶ್ಡ್ ಎಕ್ಸ್, ಅಕಂಪ್ಲಿಶ್ಡ್ ಎಕ್ಸ್ ಪ್ಲಸ್, ಅಕಂಪ್ಲಿಶ್ಡ್ ಎಕ್ಸ್ ಪ್ಲಸ್ 6ಎಸ್, ಅಕಂಪ್ಲಿಶ್ಡ್ ಅಲ್ಟ್ರಾ, ಅಕಂಪ್ಲಿಶ್ಡ್ ಅಲ್ಟ್ರಾ 6ಎಸ್, ಅಕಂಪ್ಲಿಶ್ಡ್ ಅಲ್ಟ್ರಾ ರೆಡ್ ಡಾರ್ಕ್ ಹಾಗೂ ಅಕಂಪ್ಲಿಶ್ಡ್ ಅಲ್ಟ್ರಾ ರೆಡ್ ಡಾರ್ಕ್ 6ಎಸ್ ಎಂಬ 10 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Tata Safari Petrol Suv Launched In India Rs 13 29 Lakh Price Details

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಸಫಾರಿ ಬ್ಯಾಡ್ಜಿಂಗ್, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.

ಇದು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,668 ಎಂಎಂ ಉದ್ದ, 1,922 ಎಂಎಂ ಅಗಲ ಹಾಗೂ 1,795 ಎಂಎಂ ಎತ್ತರವಿದೆ. ಹಾಗೆಯೇ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,741 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 6/ 7 ಆಸನಗಳನ್ನು ಹೊಂದಿದೆ. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 420 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

'ಟಾಟಾ ಸಫಾರಿ ಪೆಟ್ರೋಲ್' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5 ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 170 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, 4 ಸ್ಪೋಕ್ ಸ್ಟೀರಿಂಗ್ ವೀಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಂಬಿಯೆಂಟ್ ಲೈಟಿಂಗ್, ಜೆಬಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್ ಮತ್ತು ಆಟೋಮೆಟಿಕ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್​​ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟಾಟಾ ಹ್ಯಾರಿಯರ್ ಪೆಟ್ರೋಲ್ (Tata Harrier Petrol) ಕೂಡ ಮಾರಾಟಕ್ಕೆ:

ಈ ಕಾರು ರೂ.12.89 ಲಕ್ಷದಿಂದ ರೂ.24.68 ಲಕ್ಷ ( ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಡುಯಲ್-ಜೋನ್ ಆಟೋಮೆಟಿಕ್ ಎಸಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Wednesday, January 7, 2026, 22:54 [IST]
English summary
Tata safari petrol suv launched in india rs 13 29 lakh price details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+