TATA: ಕಲ್ಲು ಬಂಡೆಯಂತಹ ಕಾರಿದು.. 7-ಸೀಟರ್, 13.29 ಲಕ್ಷ.. ಹೊಸ ಟಾಟಾ SUV ಕುರಿತ ಪ್ರಮುಖಾಂಶಗಳು!

ನಿನ್ನೆಯಷ್ಟೇ ಹೊಚ್ಚ ಹೊಸ ಟಾಟಾ ಸಫಾರಿ ಪೆಟ್ರೋಲ್ (Tata Safari Petrol) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಈ ಕಾರು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ನೀವು ನೂತನ ಕಾರೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ, ಇದೇ 'ಸಫಾರಿ ಪೆಟ್ರೋಲ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಈ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತಾದ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಇದು ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.13.29 ಲಕ್ಷದಿಂದ ರೂ.25.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಸ್ಮಾರ್ಟ್, ಪ್ಯೂರ್ ಎಕ್ಸ್, ಅಡ್ವೆಂಚರ್ ಎಕ್ಸ್ ಪ್ಲಸ್, ಅಕಂಪ್ಲಿಶ್ಡ್ ಎಕ್ಸ್, ಅಕಂಪ್ಲಿಶ್ಡ್ ಎಕ್ಸ್ ಪ್ಲಸ್ 6ಎಸ್, ಅಕಂಪ್ಲಿಶ್ಡ್ ಅಲ್ಟ್ರಾ 6ಎಸ್ ಹಾಗೂ ಅಕಂಪ್ಲಿಶ್ಡ್ ಅಲ್ಟ್ರಾ ರೆಡ್ ಡಾರ್ಕ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Tata Safari Petrol Suv Price Variants Design Colors Engine Features And All Top Things

ವಿನ್ಯಾಸ & ಬಣ್ಣಗಳು (Design & Colors):

ಹೊಸ 'ಟಾಟಾ ಸಫಾರಿ ಪೆಟ್ರೋಲ್' ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ. ಕಾಸ್ಮಿಕ್ ಗೋಲ್ಡ್, ಸೂಪರ್ನೋವಾ ಕಾಪರ್, ಫ್ರಾಸ್ಟ್ ವೈಟ್, ರಾಯಲ್ ಬ್ಲೂ, ಪ್ಯೂರ್ ಗ್ರೇ, ಡೇಟೋನಾ ಗ್ರೇ, ಕಾರ್ಬನ್ ಬ್ಲ್ಯಾಕ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಸುತ್ತಳತೆ (Dimensions):

ಈ ಕಾರು ಫ್ಯಾಮಿಲಿ ಎಸ್‌ಯುವಿಯಾಗಿರುವ ಹಿನ್ನೆಲೆ, ಹೆಚ್ಚು ವಿಶಾಲವಾಗಿದೆ. ಸರಿ ಸುಮಾರು 4,668 ಮಿ.ಮೀ ಉದ್ದ, 1,922 ಮಿ.ಮೀ ಅಗಲ & 1,795 ಮಿ.ಮೀ ಎತ್ತರವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಆಸನ ಆಯ್ಕೆ ಬೂಟ್ ಸ್ಪೇಸ್‌ (Seating Capacity & Boot Space):

ಇದು 6 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಲಭ್ಯವಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಬರೋಬ್ಬರಿ 420 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance):

ನೂತನ 'ಸಫಾರಿ'ಯು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5 ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 14 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಭರ್ಜರಿಯಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, 4-ಸ್ಪೋಕ್ ಸ್ಟೀರಿಂಗ್ ವೀಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಂಬಿಯೆಂಟ್ ಲೈಟಿಂಗ್, ಜೆಬಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್ ಮತ್ತು ಆಟೋಮೆಟಿಕ್ ಎಸಿ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್​​ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಸರೌಂಡ್-ವ್ಯೂ ಕ್ಯಾಮೆರಾವನ್ನು ಪಡೆದಿದೆ.

ಪ್ರತಿಸ್ಪರ್ಧಿ ಕಾರುಗಳು (Rival Cars):

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO), ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, January 8, 2026, 11:13 [IST]
English summary
Tata safari petrol suv price variants design colors engine features and all top things
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+