ಜಿದ್ದಿಗೆ ಬಿದ್ದಿವೆ ಟಾಟಾ Vs ಮಹೀಂದ್ರಾ: ಇವೇ 2 ಹೊಸ ಎಸ್‌ಯುವಿಗಳು.. ಯಾವುದು ಬೆಸ್ಟ್ ನೀವೇ ಹೇಳಿ?

ಕೆಲವೇ ದಿನಗಳ ಅಂತರದಲ್ಲಿ ಟಾಟಾ ಸಫಾರಿ ಪೆಟ್ರೋಲ್ (Tata Safari Petrol) ಮತ್ತು ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಕಾರುಗಳು ಬಿಡುಗಡೆಗೊಂಡಿವೆ. ಇವೆರೆಡು ಫ್ಯಾಮಿಲಿ ಎಸ್‌ಯುವಿಗಳಾಗಿವೆ. ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ನಾನಾ ಬಗೆಯ ಹೊಸತನಗಳಿಗೆ ಸಾಕ್ಷಿಯಾಗಿವೆ. ನಾವಿಲ್ಲಿ ಈ ಕಾರುಗಳ ಬೆಲೆ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತು ಸಂಪೂರ್ಣವಾದ ಹೋಲಿಕೆ ಮಾಡಿದ್ದೇವೆ.

ಬೆಲೆ (Price):

ಈ ಕಾರುಗಳು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತವೆ. 'ಟಾಟಾ ಸಫಾರಿ ಪೆಟ್ರೋಲ್' ರೂ.13.29 ಲಕ್ಷದಿಂದ ರೂ.25.19 ಲಕ್ಷ ದರವನ್ನು ಪಡೆದಿದೆ. ಅದೇ ರೀತಿಯಲ್ಲಿ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ರೂ.13.66 ಲಕ್ಷದಿಂದ ರೂ.24.92 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ ಎರಡು ಎಸ್‌ಯುವಿಗಳ ನಡುವೆ ಸಾಕಷ್ಟು ಹೊಂದಾಣಿಕೆಯಿದೆ.

Tata Safari Petrol Vs Mahindra XUV 7XO Which Car Best Details

ವಿನ್ಯಾಸ (Design):

ಇವು ಒಂದಕ್ಕೊಂದು ಸವಾಲೆಸೆಯುವ ರೀತಿಯಲ್ಲಿ ಅದ್ಬುತವಾದ ವಿನ್ಯಾಸವನ್ನು ಒಳಗೊಂಡಿವೆ. 'ಟಾಟಾ ಸಫಾರಿ ಪೆಟ್ರೋಲ್' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ಕಾಸ್ಮಿಕ್ ಗೋಲ್ಡ್, ರಾಯಲ್ ಬ್ಲೂ, ಪ್ಯೂರ್ ಗ್ರೇ, ಕಾರ್ಬನ್ ಬ್ಲ್ಯಾಕ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಎವರೆಸ್ಟ್ ವೈಟ್, ನೆಬುಲಾ ಬ್ಲ್ಯೂ, ಡಸರ್ಟ್ ಮಿಸ್ಟ್, ಮಿಡ್‌ನೈಟ್ ಬ್ಲ್ಯಾಕ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,750 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Tata Safari Petrol Vs Mahindra XUV 7XO Which Car Best Details

ಆಸನ ಆಯ್ಕೆ (Seating Capacity):

'ಟಾಟಾ ಸಫಾರಿ ಪೆಟ್ರೋಲ್' 6/ 7 ಆಸನಗಳನ್ನು ಒಳಗೊಂಡಿದೆ. ಹಾಗೆಯೇ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಸಹ 6/ 7 ಆಸನಗಳನ್ನು ಪಡೆದಿದೆ. ಈ ಕಾರುಗಳಲ್ಲಿ 2 ಕುಟುಂಬದ ಹಿರಿಯರು ಹಾಗೂ ಕಿರಿಯರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು.

ಕಾರ್ಯಕ್ಷಮತೆ (Permanence):

ಇವೆರೆಡು ಕಾರುಗಳು ಬೆಲೆಗೆ ತಕ್ಕಂತೆಯೇ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಟಾಟಾ ಸಫಾರಿ ಪೆಟ್ರೋಲ್' 1.5 ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಸರಿ ಸುಮಾರು 14 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಲ್ಲದು ಎಂದು ಹೇಳಲಾಗಿದೆ.

Tata Safari Petrol Vs Mahindra XUV 7XO Which Car Best Details

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 13 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಲ್ಲದು ಎಂದು ಅಂದಾಜಿಸಲಾಗಿದೆ. ಇಂಧನ ದಕ್ಷತೆಯಲ್ಲಿ ಈ ಎರಡು ಕಾರುಗಳು ಸರಿ ಸಮಾನವಾಗಿವೆ.

ವೈಶಿಷ್ಟ್ಯಗಳು (Features):

ಇವು ಹಲವು ಜಬರ್ದಸ್ತ್ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. 'ಟಾಟಾ ಸಫಾರಿ ಪೆಟ್ರೋಲ್' 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಸ್ಟೀರಿಂಗ್ ವೀಲ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಮತ್ತು ಆಟೋಮೆಟಿಕ್ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್​​ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಟ್ರಿಪಲ್ ಸ್ಕ್ರೀನ್ ಸೆಟಪ್, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ರೇರ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 540-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Thursday, January 8, 2026, 17:17 [IST]
English summary
Tata safari petrol vs mahindra xuv 7xo which car best details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+