ತಾಕತ್ತು ಪ್ರದರ್ಶನಕ್ಕೆ ಟಾಟಾ, ಮಾರುತಿ & ಟೊಯೊಟಾ ಸಿದ್ಧತೆ.. ಶೀಘ್ರ 3 ಹೊಸ ಕಾರುಗಳು ಬಿಡುಗಡೆ, 500 Km ರೇಂಜ್!

ಭಾರತವು ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. 2026ರ ಟಾಟಾ ಮೋಟಾರ್ಸ್, ಮಾರುತಿ ಸುಜುಕಿ ಹಾಗೂ ಟೊಯೊಟಾ ಕಂಪನಿಗೆ ಮಹತ್ವದ ವರ್ಷವಾಗಿದೆ. ಅತಿ ಶೀಘ್ರದಲ್ಲೇ ಈ 3 ಕಂಪನಿಗಳು ಹೊಚ್ಚ ಹೊಸ ಸಿಯೆರಾ ಇವಿ, ಇ ವಿಟಾರಾ ಹಾಗೂ ಎಬೆಲ್ಲಾ ಹೆಸರಿನ ಕಾರುಗಳನ್ನು ಬಿಡುಗಡೆಗೊಳಿಸಲಿವೆ. ಇವುಗಳೆಲ್ಲ ಎಲೆಕ್ಟ್ರಿಕ್ ಎಸ್‌ಯುವಿಯಾಗಿವೆ. ಸಖತ್ ಸ್ಟೈಲಿಶ್ ಲುಕ್ ಹೊಂದಿದ್ದು, ಪ್ರೀಮಿಯಂ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. ಬನ್ನಿ, ಈ ಕಾರುಗಳ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ಸಿಯೆರಾ ಇವಿ (Tata Sierra EV):

ಇದು ಮಾರ್ಚ್ ಅಂತ್ಯದೊಳಗೆ ಮಾರಾಟಕ್ಕೆ ಬರುವ ಎಲ್ಲ ಸಾಧ್ಯತೆಯಿದೆ. ರೂ.20 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಸ್ಟ್ಯಾಂಡರ್ಡ್ 'ಸಿಯೆರಾ'ದಂತೆ ವಿನ್ಯಾಸವನ್ನು ಹೊಂದಿರಲಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

Tata Sierra EV Maruti Suzuki E Vitara And Toyota Urban Cruiser Ebella Launch Soon Details

ನೂತನ 'ಸಿಯೆರಾ ಇವಿ' ಟಾಟಾ ಹ್ಯಾರಿಯರ್ ಇವಿಯಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿರಬಹುದು ಎನ್ನಲಾಗಿದೆ. 65 ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ.

ಈ ಕಾರು ಪ್ರಸ್ತುತ ಗ್ರಾಹಕರ ಖರೀದಿಗೆ ಲಭ್ಯವಿರುವ 'ಸಿಯೆರಾ'ದಂತೆ ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌ ಹಾಗೂ 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್‌ನ್ನು ಪಡೆದಿರುವ ಸಾಧ್ಯತೆಯಿದೆ. ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ.

Tata Sierra EV Maruti Suzuki E Vitara And Toyota Urban Cruiser Ebella Launch Soon Details

ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):

ಹೊಸ 'ಇ-ವಿಟಾರಾ'ವು ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ರೂ.15 ಲಕ್ಷದಿಂದ ರೂ.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿರಬಹುದು ಎನ್ನಲಾಗಿದೆ. ಈಗಾಗಲೇ, ಈ ಕಾರಿನ ಬಹುತೇಕ ಎಲ್ಲ ವಿವರಗಳು ಬಹಿರಂಗಗೊಂಡಿವೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ ಹಾಗೂ ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನಗಳನ್ನು ಒಳಗೊಂಡಿದೆ.

ಇದು 49 ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫಿಕ್ಸೆಡ್ ಗ್ಲಾಸ್ ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ಆಟೋ ಎಸಿಯಂತಹ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Tata Sierra EV Maruti Suzuki E Vitara And Toyota Urban Cruiser Ebella Launch Soon Details

ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ (Toyota Urban Cruiser Ebella):

ನೂತನ 'ಅರ್ಬನ್ ಕ್ರೂಸರ್ ಎಬೆಲ್ಲಾ'ವು ಕೆಲವೇ ದಿನಗಳಲ್ಲಿ ಮಾರಾಟಕ್ಕೆ ಬರಲಿದೆ. ರೂ.18 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಇತ್ತೀಚೆಗೆ ಅನಾವರಣಗೊಳಿಸಲಾಗಿದ್ದು, ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಕೆಫೆ ವೈಟ್, ಬ್ಲ್ಯೂಯಿಶ್ ಬ್ಲ್ಯಾಕ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್ ಮತ್ತು ಎಂಟೈಸಿಂಗ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

ಈ ಎಲೆಕ್ಟ್ರಿಕ್ ಎಸ್‌ಯುವಿಯು 49 & 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಆಲ್-ವೀಲ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Saturday, January 24, 2026, 19:38 [IST]
English summary
Tata sierra ev maruti suzuki e vitara and toyota urban cruiser ebella launch soon details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+