Tata: ಟಾಟಾದ ಗತ್ತು ಹೆಚ್ಚಿಸಿದ ಕಾರಿದು.. ಪ್ರತಿಸ್ಪರ್ಧಿಗಳಿಗೆ ಶುರುವಾಯ್ತು ನಡುಕ.. 7,000 ಹೊಸ ಸಿಯೆರಾ ಕಾರುಗಳು ಸೇಲ್ಸ್!
2025ರ ನವೆಂಬರ್‌ನಲ್ಲಿ ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿತ್ತು. ಈ ಕಾರಿಗೆ ಫುಲ್ ಡಿಮ್ಯಾಂಡ್ ಇದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಜನವರಿಯಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 7,003 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ದಿನವೊಂದಕ್ಕೆ 225 ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ.
ಕಾಯುವಿಕೆ ಅವಧಿಯೂ ಹೆಚ್ಚಿದೆ:
ದೇಶಾದ್ಯಂತ ಟಾಟಾ ಸಿಯೆರಾಗೆ ಶ್ರೀಸಾಮಾನ್ಯರು ಸಹ ಮನಸೋತಿದ್ದಾರೆ. ಡಿಸೆಂಬರ್ 16ರಂದು ಬುಕ್ಕಿಂಗ್‌ನ್ನು ತೆಗೆದುಕೊಳ್ಳುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿತ್ತು. ಕೇವಲ 24 ಗಂಟೆಗಳಲ್ಲಿ 70,000ಕ್ಕೂ ಅಧಿಕ ಸಂಖ್ಯೆಯಲ್ಲಿ ಆರ್ಡರ್‌ಗಳನ್ನು ಪಡೆದುಕೊಳ್ಳುವಲ್ಲಿಯೂ ಯಶಸ್ವಿಯಾಗಿತ್ತು. ಸದ್ಯ, ರೂಪಾಂತರಗಳಿಗೆ ತಕ್ಕಂತೆ 3 ರಿಂದ 4 ತಿಂಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿದೆ.

ಟಾಟಾ ಸಿಯೆರಾ ವಿಶೇಷತೆಗಳೇನು:
ಈ ಕಾರು ಕನಿಷ್ಠ ರೂ.11.49 ಲಕ್ಷ ಹಾಗೂ ಗರಿಷ್ಠ ರೂ.18.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ) ಮತ್ತು ಬೆಂಗಾಲ್ ರೂಜ್ (ರೆಡ್) ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,730 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಇದು ಮೂರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ & 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ರಿಂದ 20 ಕಿಲೋಮೀಟರ್‌ವರೆಗೂ ಮೈಲೇಜ್ ಕೊಡುತ್ತದೆ.
ನೂತನ 'ಸಿಯೆರಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 622 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್, 12-ಸ್ಪೀಕರ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ರೇರ್-ಎಸಿ ವೆಂಟ್‌ಗಳು ಹಾಗೂ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.
ಸಿಯೆರಾಗೆ ಪ್ರತಿಸ್ಪರ್ಧಿ ಕಾರುಗಳಿವು:
ಇದಕ್ಕೆ ಹಲವು ಪ್ರತಿಸ್ಪರ್ಧಿಗಳಿವೆ. ಬಹುಮುಖ್ಯವಾಗಿ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ವಿಕ್ಟೋರಿಸ್, ಕಿಯಾ ಸೆಲ್ಟೋಸ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಹೋಂಡಾ ಎಲಿವೇಟ್, ಸ್ಕೋಡಾ ಕುಶಾಕ್, ಪೋಕ್ಸ್‌ವ್ಯಾಗನ್ ಟೈಗುನ್, ಎಂಜಿ ಆಸ್ಟರ್ ಹಾಗೂ ಮಹೀಂದ್ರಾ ಸ್ಕಾರ್ಪಿಯೋ ಎನ್ ಕಾರುಗಳು ಪ್ರಬಲವಾದ ಎದುರಾಳಿಯಾಗಲಿವೆ.
ಟಾಟಾ ಸಿಯೆರಾ ಇವಿಯೂ ಮಾರಾಟಕ್ಕೆ ಬರಲಿದೆ:
ಈ ಎಲೆಕ್ಟ್ರಿಕ್ ಎಸ್‌ಯುವಿಯು ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಮಾರ್ಚ್‌ನಲ್ಲಿ ಪರಿಚಯಗೊಳ್ಳುವ ನಿರೀಕ್ಷೆಯಿದೆ. ರೂ.20 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. 65 ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ. 5 ಆಸನಗಳನ್ನು ಪಡೆದಿರಲಿದ್ದು, ಸ್ಟ್ಯಾಂಡರ್ಡ್ ಸಿಯೆರಾದಂತೆ ಎಲ್ಲ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.


Click it and Unblock the Notifications








