ಪವರ್ ತೋರಿಸಿದ ಟಾಟಾ.. ಈ ಹೊಸ ಕಾರಿಗೆ ದೇವಸ್ಥಾನ ಕಟ್ಟಬೇಕು.. ದೊಡ್ಡ ಅಪಘಾತವಾದ್ರೂ ಎಲ್ಲರು ಸೇಫ್!

2025ರ ನವೆಂಬರ್ 25ರಂದು ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಅಂದಿನಿಂದಲೇ ಈ ಕಾರಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಈವರೆಗೆ 1 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಬುಕ್ಕಿಂಗ್‌ಗಳಾಗಿವೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. 2026 ಫೆಬ್ರವರಿಯಲ್ಲಿ ಸರಿ ಸುಮಾರು 7,100 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. ಸದ್ಯ ಇದೇ 'ಸಿಯೆರಾ' ಮೊದಲ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಪಂಚಪಖಾಡಿಯಲ್ಲಿರುವ ಟಾಟಾ ಶೋರೂಂನಿಂದ ನೂತನ 'ಸಿಯೆರಾ' ಎಸ್‌ಯುವಿಯನ್ನು ಟೆಸ್ಟ್ ಡ್ರೈವ್‌ಗೆ ತೆಗೆದುಕೊಂಡು ಹೋದಾಗ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ಕಾರನ್ನು ಚಲಾಯಿಸುತ್ತಿದ್ದು, ಅದರಲ್ಲಿ ಇಬ್ಬರು ಶೋರೂಂ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಮೂವರು ಪ್ರಯಾಣಿಕರು ಪ್ರಾಯಪಯದಿಂದ ಪಾರಾಗಿದ್ದಾರೆ.

Tata Sierra Suv 1st Accident Report

ಈ ಕಾರು ನಿರ್ಮಾಣ ಹಂತದ ಕಟ್ಟಡ ಸ್ಥಳದಲ್ಲಿರುವ 20 ಅಡಿ ಆಳದ ಹಳ್ಳಕ್ಕೆ ಉರುಳಿದೆ. ಅದಕ್ಕೂ ಮೊದಲು ಆಟೋರಿಕ್ಷಾ ಹಾಗೂ 2 ಮೋಟಾರ್‌ಸೈಕಲ್‌ಗಳು ಸೇರಿದಂತೆ 3 ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸಿದ್ದರಿಂದ ನಿಯಂತ್ರಣ ಕಳೆದುಕೊಂಡಿದೆ ಎಂಬ ವಿವರಗಳು ಲಭ್ಯವಾಗಿವೆ. ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಅಧಿಕಾರಿಗಳು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ಸಂದರ್ಭದಲ್ಲಿ 'ಟಾಟಾ ಸಿಯೆರಾ'ದಲ್ಲಿದ್ದ ಏರ್‌ಬ್ಯಾಗ್‌ಗಳು ತೆರೆದುಕೊಂಡಿವೆ. ಜೊತೆಗೆ ಈ ಕಾರಿನ ನಿರ್ಮಾಣ ಗುಣಮಟ್ಟಕ್ಕೆ ಸರಿ ಸಾಟಿಯೇ ಇಲ್ಲವಾಗಿದೆ. ಹೀಗಾಗಿ, ಹಳ್ಳಕ್ಕೆ ಬಿದ್ದು ಹೆಚ್ಚಿನ ಹಾನಿಗೆ ಒಳಗಾಗಿದ್ದರೂ ಪ್ರಯಾಣಿಕರೆಲ್ಲರು ಬದುಕುಳಿದಿದ್ದಾರೆ ಎಂದು ಹೇಳಲಾಗಿದೆ.

Tata Sierra Suv 1st Accident Report

'ಸಿಯೆರಾ'ದಲ್ಲಿರುವ ಸುರಕ್ಷತಾ ವೈಶಿಷ್ಟ್ಯಗಳೇನು:

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ಹಿತದೃಷ್ಟಿಯಿಂದ 6-ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

'ಟಾಟಾ ಸಿಯೆರಾ'ದ ವಿಶೇಷತೆಗಳೇನು:

ಈ ಕಾರು ರೂ.11.49 ಲಕ್ಷದಿಂದ ರೂ.21.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ನೂತನ 'ಸಿಯೆರಾ'ವು ಹೆಚ್ಚು ವಿಶಾಲವಾಗಿದೆ. 4,340 ಮಿ.ಮೀ ಉದ್ದ, 1,841 ಮಿ.ಮೀ ಅಗಲ & 1,715 ಮಿ.ಮೀ ಎತ್ತರವಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು 622 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 16.8 ರಿಂದ 20.5 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ವೈಪರ್‌ಗಳು, ರೇರ್ ಎಸಿ ವೆಂಟ್‌ಗಳು, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Image Source: Youtube Shorts/ AkshayKatariaAutoX

More from DriveSpark

Article Published On: Friday, March 13, 2026, 8:30 [IST]
English summary
Tata sierra suv 1st accident report
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+