TATA: ಸದ್ದಿಲ್ಲದೇ 1 ಲಕ್ಷ ಹೊಸ ಕಾರುಗಳ ಬೃಹತ್ ಆರ್ಡರ್ ಟಾಟಾ ತೆಕ್ಕೆಗೆ.. ಈ ಜನಪ್ರಿಯ ಎಸ್‌ಯುವಿಗೆ ಮುಗಿಬಿದ್ದ ಜನ!

2025ರ ನವೆಂಬರ್‌ನಲ್ಲಿ ನೂತನ ಟಾಟಾ ಸಿಯೆರಾ (Tata Sierra) ಕಾರನ್ನು ಪರಿಚಯಿಸಲಾಗಿತು. ಇದೊಂದು ಎಸ್‌ಯುವಿಯಾಗಿದ್ದು, ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಖರೀದಿದಾರರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಇದೇ 'ಸಿಯೆರಾ'ದ ಬುಕ್ಕಿಂಗ್‌ನಲ್ಲಿ ಹೊಸ ಇತಿಹಾಸ ನಿರ್ಮಾಣಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಟಾಟಾ ಮೋಟಾರ್ಸ್, 'ಸಿಯೆರಾ' ಎಸ್‌ಯುವಿ ಬುಕ್ಕಿಂಗ್‌ಗಳು 1 ಲಕ್ಷ ದಾಟಿದೆ ಎಂದು ಘೋಷಣೆ ಮಾಡಿದೆ. ಡಿಸೆಂಬರ್ 16 ರಂದು ಹೊಸ 'ಸಿಯೆರಾ'ಗಾಗಿ ಆರ್ಡರ್ ತೆಗೆದುಕೊಳ್ಳುವ ಕಾರ್ಯಕ್ಕೆ ಕಂಪನಿಯು ಹಸಿರು ನಿಶಾನೆ ತೋರಿತ್ತು. ಬರೀ 24 ಗಂಟೆಗಳಲ್ಲಿ 70,000ಕ್ಕೂ ಅಧಿಕ ಸಂಖ್ಯೆಯಲ್ಲಿ ಗ್ರಾಹಕರು ಬುಕ್ ಮಾಡಿದ್ದರು.

Tata Sierra Suv bags 1 Lakh Order Details

'ಟಾಟಾ ಸಿಯೆರಾ'ಗೆ ಡಿಮ್ಯಾಂಡ್ ಹೆಚ್ಚುತ್ತಿರುವ ಕಾರಣ, ದೊಡ್ಡ ಸಂಖ್ಯೆಯಲು ಕಾರುಗಳನ್ನು ಉತ್ಪಾದಿಸಲು ಕಂಪನಿಯು ನಿರ್ಧರಿಸಿದೆ. ಮುಂಬರುವ ತಿಂಗಳಲ್ಲಿ ತಯಾರಿಕಾ ಘಟಕದ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾಗಿದೆ. ಮಾರ್ಚ್ ವೇಳೆಗೆ ಸಿಯೆರಾ ಉತ್ಪಾದನೆಯನ್ನು ಮಾಸಿಕ 15,000 ಯುನಿಟ್‌ಗಳಿಗೆ ಅಧಿಕಗೊಳಿಸಲು ಯೋಜನೆಯನ್ನು ರೂಪಿಸಿದೆ.

ಈ 2026ರ ಜನವರಿ ತಿಂಗಳಲ್ಲೂ 'ಟಾಟಾ ಸಿಯೆರಾ' ಎಸ್‌ಯುವಿಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಬರೋಬ್ಬರಿ 7,003 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. ಈ ಅಂಕಿ ಅಂಶವನ್ನು ವಿಶ್ಲೇಷಿಸಿದಾಗ, ಪ್ರತಿದಿನ 225 ಕಾರುಗಳನ್ನು ಮಾರಲಾಗಿದೆ. ಅದೇ ರೀತಿಯಲ್ಲಿ 'ಸಿಯೆರಾ'ದ ಕಾಯುವಿಕೆ ಅವಧಿಯೂ ಹೆಚ್ಚಳಗೊಂಡಿದ್ದು, ಇವತ್ತು ಬುಕ್ಕಿಂಗ್ ಮಾಡಿದರೂ ಮನೆಗೆ ತೆಗೆದುಕೊಂಡು ಹೋಗಲು 3 ರಿಂದ 4 ತಿಂಗಳವರೆಗೆ ಸಮಯಾವಕಾಶ ಬೇಕಾಗುತ್ತದೆ.

'ಟಾಟಾ ಸಿಯೆರಾ' ವಿಶೇಷತೆಗಳೇನು:

ಇದು ಕನಿಷ್ಠ ರೂ.11.49 ಲಕ್ಷ ಹಾಗೂ ಗರಿಷ್ಠ ರೂ.18.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದವರು ಸುಲಭವಾಗಿ ಖರೀದಿಸಲು ಸಾಧ್ಯವಾಗಲಿದೆ. ಸ್ಮಾರ್ಟ್ ಪ್ಲಸ್ (Smart Plus), ಪ್ಯೂರ್ (Pure), ಅಡ್ವೆಂಚರ್ (Adventure), ಅಡ್ವೆಂಚರ್ ಪ್ಲಸ್ (Adventure Plus) ಮತ್ತು ಅಕಾಂಪ್ಲಿಶ್ಡ್ (Accomplished) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಬಣ್ಣಗಳೊಂದಿಗೂ ದೊರೆಯುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಸಿಯೆರಾ' ಎಸ್‌ಯುವಿ 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16 ರಿಂದ 20 ಕಿಲೋಮೀಟರ್‌ವರಗೆ ಮೈಲೇಜ್‌ ನೀಡುತ್ತದೆ. 222 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 9.96 ರಿಂದ 10.1 ಸೆಕೆಂಡುಗಳಲ್ಲಿ 0 ರಿಂದ ವೇಗವನ್ನು ಪಡೆಯಲಿದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 622 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Sunday, February 8, 2026, 13:15 [IST]
English summary
Tata sierra suv bags 1 lakh order details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+