Tata: 70,000 ಆರ್ಡರ್ ಬಾಚಿಕೊಂಡಿದ್ದ ಟಾಟಾ.. ಹೊಸ ಕಾರಿನ ವಿತರಣೆ ಶುರು ಮಾಡೇ ಬಿಡ್ತು!

ಕಳೆದ ವರ್ಷದ ನವೆಂಬರ್ 25 ರಂದು ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿತ್ತು. ಡಿಸೆಂಬರ್ 16 ರಂದು ಬುಕ್ಕಿಂಗ್‌ನ್ನು ಶುರು ಮಾಡಲಾಗಿತ್ತು. ಮೊದಲ ದಿನವೇ 70,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಆರ್ಡರ್‌ನ್ನು ಪಡೆದುಕೊಲ್ಲುವಲ್ಲಿಯೂ ಯಶಸ್ವಿಯಾಗಿತ್ತು. ನಿನ್ನೆಯಿಂದ (ಜನವರಿ 15) ಕಂಪನಿಯು ದೇಶಾದ್ಯಂತ 'ಸಿಯೆರಾ' ವಿತರಣೆಯನ್ನು ಪ್ರಾರಂಭಿಸಿದೆ. ಗ್ರಾಹಕರು ಕೂಡ ಸಂಭ್ರಮ - ಸಡಗರದಿಂದಲೇ ನೂತನ ಕಾರನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ.

'ಟಾಟಾ ಸಿಯೆರಾ'ಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ ಕಾರಿನ ವಿವಿಧ ರೂಪಾಂತರಗಳು ಸರಿ ಸುಮಾರು 1 ರಿಂದ 2 ತಿಂಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿವೆ. ಸದ್ಯ, ದೇಶೀಯವಾಗಿ ಲಭ್ಯವಿರುವ ಹೊಸ 'ಸಿಯೆರಾ' ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದು, ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದವರು ಸುಲಭವಾಗಿ ಕೊಂಡುಕೊಳ್ಳಬಹುದು.

Tata Sierra SUV Deliveries Begin Waiting Period Revealed Details

ಇದು ಸ್ಮಾರ್ಟ್ ಪ್ಲಸ್, ಪ್ಯೂರ್, ಅಡ್ವೆಂಚರ್ ಹಾಗೂ ಅಕಾಂಪ್ಲಿಶ್ಡ್ ಸೇರಿದಂತೆ ವಿವಿಧ ರೂಪಾಂತರಗಳೊಂದಿಗೂ ದೊರೆಯುತ್ತದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಮಿಂಟಲ್ ಗ್ರೇ, ಪ್ರಿಸ್ಟೀನ್ ವೈಟ್, ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್) ಮತ್ತು ಮುನ್ನಾರ್ ಮಿಸ್ಟ್ (ಗ್ರೀನ್) ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಹೆಚ್ಚು ವಿಶಾಲವಾಗಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,730 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು 622 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ 'ಸಿಯೆರಾ' ಬಲಿಶಾಲಿಯಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 106 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 145 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.5-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 160 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 255 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಇನ್ನೊಂದು 1.5-ಲೀ. ಡೀಸೆಲ್ ಎಂಜಿನ್, 118 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 260 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16.8 ರಿಂದ 20.5 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಇದರ ಕ್ಯಾಬಿನ್ ವಿನ್ಯಾಸವು ಅದ್ಬುತವಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ರೇರ್ ಎಸಿ ವೆಂಟ್‌ಗಳು ಆಟೋಮೆಟಿಕ್ ವೈಪರ್‌ಗಳು, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಈ ಎಸ್‌ಯುವಿಗೆ ಸಾಲು - ಸಾಲು ಎದುರಾಳಿಗಳಿವೆ. ಹ್ಯುಂಡೈ ಕ್ರೆಟಾ (Hyundai Creta), ಕಿಯಾ ಸೆಲ್ಟೋಸ್ (Kia Seltos), ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara), ಎಂಜಿ ಹೆಕ್ಟರ್ (MG Hector), ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N), ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಹಾಗೂ ಹೋಂಡಾ ಎಲಿವೇಟ್ (Honda Elevate) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

Image Source Link: Twitter

More from DriveSpark

Article Published On: Friday, January 16, 2026, 18:15 [IST]
English summary
Tata sierra suv deliveries begin waiting period revealed details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+