TATA: ಸದ್ದಿಲ್ಲದೇ ಪವರ್ ತೋರಿಸಿದ ಟಾಟಾ.. ಈ ಹೊಸ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು!
2025ರ ನವೆಂಬರ್ 25ರಂದು ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಈ ಕಾರು ಭಾರೀ ಸಂಖ್ಯೆಯೂ ಮಾರಾಟವಾಗುತ್ತಿದ್ದು, ಗ್ರಾಹಕರು ಸಹ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) 'ಸಿಯೆರಾ'ವನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಧರಿಸಿದೆ.
ನೂತನ 'ಟಾಟಾ ಸಿಯೆರಾ'ವು ಭಾರತ್ ಎನ್‌ಸಿಎಪಿ ಜರುಗಿಸಿದ ಸೇಫ್ಟಿ ಕ್ರ್ಯಾಶ್ ಟೆಸ್ಟ್‌ನ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 31.14 ಅಂಕಗಳನ್ನು ಪಡೆದಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 44.73 ಅಂಕಗಳನ್ನು ಹೊಂದಿದೆ. ಈ ಮೂಲಕ 5-ಸ್ಟಾರ್ ರೇಟಿಂಗ್‌ನ್ನು ಹೊಂದುವಲ್ಲಿ ಯಶಸ್ವಿಯಾಗಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲೂ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) & 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಈ 'ಸಿಯೆರಾ'ವು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.11.49 ಲಕ್ಷ ಹಾಗೂ ಗರಿಷ್ಠ ರೂ.21.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಸ್ಮಾರ್ಟ್ ಪ್ಲಸ್ (Smart Plus), ಪ್ಯೂರ್ (Pure), ಪ್ಯೂರ್ ಪ್ಲಸ್ (Pure Plus), ಅಡ್ವೆಂಚರ್ (Adventure), ಅಡ್ವೆಂಚರ್ ಪ್ಲಸ್, (Adventure Plus), ಅಕಾಂಪ್ಲಿಶ್ಡ್ (Accomplished) ಮತ್ತು ಅಕಾಂಪ್ಲಿಶ್ಡ್ ಪ್ಲಸ್ (Accomplished Plus) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.
ನೂತನ 'ಟಾಟಾ ಸಿಯೆರಾ' ಎಸ್‌ಯುವಿಯು ಹೆಚ್ಚು ಅತ್ಯಾಕರ್ಷಕವಾಗಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, & 19-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್) ಹಾಗೂ ಮುನ್ನಾರ್ ಮಿಸ್ಟ್ (ಗ್ರೀನ್) ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಸಾಕಷ್ಟು ವಿಶಾಲವಾಗಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀಟರ್ 4-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ & 1.5-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16.8 ರಿಂದ 20.5 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 622 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಹೊಸ 'ಸಿಯೆರಾ'ದ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಬೃಹದಾಕಾರದ ಟ್ರಿಪಲ್ ಸ್ಕ್ರೀನ್ ಸೆಟಪ್ (ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್ಪ್ಲೇ & ಪ್ಯಾಸೆಂಜರ್ ಸೈಡ್ ಡಿಸ್ಪ್ಲೇ), ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ರೇರ್-ಎಸಿ ವೆಂಟ್‌ಗಳು, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications








