Tata: 293 Km ರೇಂಜ್.. ಅಗ್ಗದ ಬೆಲೆಗೆ ಹೊಸ ಟಾಟಾ ಎಲೆಕ್ಟ್ರಿಕ್ ಕಾರು ಬರುತ್ತೆ, ವಿಶೇಷತೆಗಳೇನು?
ಟಾಟಾ ಟಿಯಾಗೊ ಇವಿ (Tata Tiago EV) ಪ್ರಮುಖ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಸದ್ಯ, ಇದೇ ಕಾರನ್ನು ಮತ್ತಷ್ಟು ಜನರಿಗೆ ಹತ್ತಿರವಾಗಿಸಲು ಟಾಟಾ ಮುಂದಾಗಿದೆ. 2026ರ 'ಟಿಯಾಗೊ ಇವಿ ಫೇಸ್‌ಲಿಫ್ಟ್'ನ್ನು ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಬನ್ನಿ, ಈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ಹೊಚ್ಚ ಹೊಸ 'ಟಾಟಾ ಟಿಯಾಗೊ ಇವಿ ಫೇಸ್‌ಲಿಫ್ಟ್' ಈ ವರ್ಷದ ದ್ವಿತೀಯಾರ್ಧದಲ್ಲಿ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದೆ. ಕನಿಷ್ಠ ರೂ.8.10 ಲಕ್ಷ ಹಾಗೂ ಗರಿಷ್ಠ ರೂ.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ವಿನ್ಯಾಸ (Design):
ಇದು ನವೀನವಾದ ವಿನ್ಯಾಸವನ್ನು ಹೊಂದಿರರಲಿದೆ. ನೋಡುಗರನ್ನು ಸೆಳೆಯುವಂತಿರಲಿದೆ. ವಿನೂತನವಾದ ಬಂಪರ್‌ಗಳು, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿರಲಿದೆ. ಜೊತೆಗೆ ದೊಡ್ಡದಾದ 5-ಸ್ಪೋಕ್ ವೀಲ್‌ಗಳನ್ನು ಪಡೆದಿರಲಿದ್ದು, ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುವ ನಿರೀಕ್ಷೆಯಿದೆ.
ಸುತ್ತಳತೆ (Dimension):
ಈ ಕಾರು ಹೆಚ್ಚು ವಿಶಾಲವಾಗಿರಲಿದೆ. ಈಗಿರುವ 'ಟಿಯಾಗೊ ಇವಿ'ಯ ಗಾತ್ರದಲ್ಲೇ ಇರಲಿದೆ. 3,769 ಎಂಎಂ ಉದ್ದ, 1,677 ಎಂಎಂ ಅಗಲ ಮತ್ತು 1,536 ಎಂಎಂ ಎತ್ತರವಿರಲಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,330 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ನೂತನ 'ಟಾಟಾ ಟಿಯಾಗೊ ಇವಿ ಫೇಸ್‌ಲಿಫ್ಟ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 240 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.
ಕಾರ್ಯಕ್ಷಮತೆ (Performance):
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿರಲಿದೆ. ಅದರಲ್ಲೂ ಯಾವುದೇ ಬದಲಾವಣೆಗಳಿರುವುದಿಲ್ಲ. ಈ ಕಾರಿನ 19.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 223 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 61 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಬಹುದು.

ಮತ್ತೊಂದು 24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 293 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು. ಇದರೊಳಗೆ ಉಪಯೋಗಿಸಿರುವ ಎಲೆಕ್ಟ್ರಿಕ್ ಮೋಟಾರ್, 75 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 114 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಬಹುದು.
ವೈಶಿಷ್ಟ್ಯಗಳು (Features):
ಹೊಸ 'ಟಾಟಾ ಟಿಯಾಗೊ ಇವಿ ಫೇಸ್‌ಲಿಫ್ಟ್' ಕ್ಯಾಬಿನ್ ವಿನ್ಯಾಸವು ಸಖತ್ ಪ್ರೀಮಿಯಂ ಆಗಿರಲಿದೆ. ಬೃಹದಾಕಾರದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕನೆಕ್ಟ್ಡ್ ಕಾರ್ ಟೆಕ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಸ್ಮಾರ್ಟ್ ಕೀ ಹಾಗೂ ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.


Click it and Unblock the Notifications








