Nissan: ನಾಳೆ ಅಗ್ಗದ ಹೊಸ ನಿಸ್ಸಾನ್ ಎಂಪಿವಿ ಬಿಡುಗಡೆ.. ಮಾರುತಿಗೆ ನಡುಕ ಶುರು, 7-ಸೀಟರ್‌.. ಬೆಲೆ ಎಷ್ಟು, ವಿಶೇಷತೆಗಳೇನು?

ಬಹುನಿರೀಕ್ಷಿತ ನಿಸ್ಸಾನ್ ಗ್ರಾವೈಟ್ (Nissan Gravite) ಎಂಪಿವಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ (ಫೆಬ್ರವರಿ 17) ಈ ಕಾರು ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ. ನಿಸ್ಸಾನ್ ಮತ್ತು ರೆನಾಲ್ಟ್ ಕಂಪನಿಗಳು ವ್ಯಾವಹಾರಿಕ ಪಾಲುದಾರಿಕೆ ಹೊಂದಿವೆ. ಇದರಿಂದಾಗಿ 'ಗ್ರಾವೈಟ್' ಎಂಪಿವಿಯು 'ಟ್ರೈಬರ್'ನ್ನು ಆಧರಿಸಿರಲಿದ್ದು, ರೀ-ಬ್ಯಾಡ್ಜ್ ಮಾಡೆಲ್ ಎಂದೇ ಹೇಳಬಹುದು. ಬನ್ನಿ, ನೂತನ ಎಂಪಿವಿಯ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ಹೊಚ್ಚ ಹೊಸ 'ನಿಸ್ಸಾನ್ ಗ್ರಾವೈಟ್' ಎಂಪಿವಿ, ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಕನಿಷ್ಠ ರೂ.6 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಮನೆಗೆ ತರಬಹುದು.

Tomorrow Nissan Gravite Mpv Launch In India Expected Price Details

ವಿನ್ಯಾಸ (Design):

ನೂತನ 'ಗ್ರಾವೈಟ್'ನ್ನು ಸಿಎಂಎಫ್-ಎ ಪ್ಲಾಟ್‌ಫಾರ್ಮ್‌ನಲ್ಲಿ ಸಿದ್ದಪಡಿಸಲಾಗಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿರಲಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿರಬಹುದು. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಸಿಗಬಹುದು.

ಸುತ್ತಳತೆ (Dimension):

ಈ ಎಂಪಿವಿಯು 'ರೆನಾಲ್ಟ್ ಟ್ರೈಬರ್' ಕಾರಿನಂತೆ ಸಾಕಷ್ಟು ವಿಶಾಲ ಗಾತ್ರದಲ್ಲಿರಲಿದೆ. 3,985 ಎಂಎಂ ಉದ್ದ, 1,739 ಎಂಎಂ ಅಗಲ ಮತ್ತು 1,643 ಎಂಎಂ ಎತ್ತರವಿರಲಿದೆ. 182 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,636 ಎಂಎಂ ವೀಲ್‌ಬೇಸ್‌ನ್ನು ಪಡೆದಿರಲಿದೆ.

ಆಸನ ಆಯ್ಕೆ ಬೂಟ್ ಸ್ಪೇಸ್‌ (Seating Capacity & Boot Space):

ಇದು 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ಪುಟ್ಟದಾಗಿರುವ 84 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಕಾರ್ಯಕ್ಷಮತೆ (Performance):

ಹೊಸ 'ನಿಸ್ಸಾನ್ ಗ್ರಾವೈಟ್' ಎಂಪಿವಿ ಸಹ 'ರೆನಾಲ್ಟ್ ಟ್ರೈಬರ್'ನಂತೆಯೇ ಪವರ್‌ಟ್ರೇನ್‌ನ್ನು ಒಳಗೊಂಡಿರಲಿದೆ. 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಲಿದೆ. 72 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿರಲಿದೆ. ಗರಿಷ್ಠ 20 ಕಿಲೋಮೀಟರ್‌ವರೆಗೆ ಮೈಲೇಜ್‌ ಕೊಡಬಹುದು.

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿರಲಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ, 6-ಸ್ಪೀಕರ್ ಸೌಂಡ್ ಸಿಸ್ಟಮ್‌ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿರಲಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಸ್ಟಾರ್ಟ್ ಅಸಿಸ್ಟ್, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿರಬಹುದು.

ಪ್ರತಿಸ್ಪರ್ಧಿ ಕಾರುಗಳು (Rival Cars):

ನೂತನ 'ನಿಸ್ಸಾನ್ ಗ್ರಾವೈಟ್'ಗೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ಮಾರುತಿ ಸುಜುಕಿ ಇಕೋ (Maruti Suzuki Eeco), ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಹಾಗೂ ಟೊಯೊಟಾ ರುಮಿಯನ್ (Toyota Rumion) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

Image Source: Carwale

More from DriveSpark

Article Published On: Monday, February 16, 2026, 13:35 [IST]
English summary
Tomorrow nissan gravite mpv launch in india expected price details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+