Renault: ನಾಳೆ ಹೊಸ ರೆನಾಲ್ಟ್ ಡಸ್ಟರ್ ಕಾರು ಬಿಡುಗಡೆ.. ಬೆಲೆ ಎಷ್ಟು.. ವಿಶೇಷತೆಗಳೇನು?

ನಾಳೆ 2026ರ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿ ಬಿಡುಗಡೆಯಾಗಲಿದೆ. ಈ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಇದೇ ಜನವರಿ 26 ರಂದು ಚೆನ್ನೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಹೊಸ ತಲೆಮಾರಿನ 'ಡಸ್ಟರ್' ಮಾಡೆಲ್‌ನ್ನು ಅನಾವರಣಗೊಳಿಸಲಾಗಿತ್ತು. ಈ ಕಾರು ನೋಡಲು ತುಂಬಾ ಚೆನ್ನಾಗಿದ್ದು, ಹಲವು ನವೀನತೆಗಳಿಗೂ ಸಾಕ್ಷಿಯಾಗಿದೆ. ಬನ್ನಿ.. ನೂತನ ಎಸ್‌ಯುವಿಯ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ಹೊಚ್ಚ ಹೊಸ 'ರೆನಾಲ್ಟ್ ಡಸ್ಟರ್' ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ. ಕನಿಷ್ಠ ರೂ.9.50 ಲಕ್ಷ ಹಾಗೂ ಗರಿಷ್ಠ ರೂ.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ನಿರೀಕ್ಷೆಯಿದೆ. ಈಗಾಗಲೇ ಬುಕ್ಕಿಂಗ್‌ನ್ನು ಪ್ರಾರಂಭಿಸಲಾಗಿದೆ. ಆಸಕ್ತರು ಹತ್ತಿರದ ಶೋರೂಂ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.21,000 ಪಾವತಿಸಿ ಆರ್ಡರ್ ಮಾಡಬಹುದು.

Tomorrow Renault Duster Suv launch In India Expected Price Details

ವಿನ್ಯಾಸ & ಬಣ್ಣಗಳು (Design & Colours):

ಇದು ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, 'ಸಿ' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಜೇಡ್ ಮೌಂಟೇನ್ ಗ್ರೀನ್, ಪರ್ಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್, ರಿವರ್ ಬ್ಲೂ ಮತ್ತು ಸನ್‌ಸೆಟ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಈ ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಆರಾಮದಾಯಕ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ದೊಡ್ಡ ಗಾತ್ರದ 700 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Tomorrow Renault Duster Suv launch In India Expected Price Details

ಕಾರ್ಯಕ್ಷಮತೆ (Performance):

ನೂತನ 'ಡಸ್ಟರ್' 3 ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.8-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 160 ಬಿ‌ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 172 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.3-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 160 ಬಿ‌ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಇನ್ನೊಂದು 1.0-ಲೀ. ಪೆಟ್ರೋಲ್ ಎಂಜಿನ್, 100 ಬಿ‌ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್, 8-ಸ್ಪೀಡ್ ಡಿಹೆಚ್‌ಟಿ (ಡೆಡಿಕೇಟೆಡ್ ಹೈಬ್ರಿಡ್ ಟ್ರಾನ್ಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 14 ರಿಂದ 22 ಕಿ.ಮೀ ವರೆಗೆ ಮೈಲೇಜ್ ನೀಡಬಹದು ಎಂದು ಅಂದಾಜಿಸಲಾಗಿದೆ.

Tomorrow Renault Duster Suv launch In India Expected Price Details

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10-ಇಂಚು) ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ (10.25-ಇಂಚು), ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಹೊಸ 'ರೆನಾಲ್ಟ್ ಡಸ್ಟರ್' ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲು ನೆರವಾಗಲಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 360-ಡಿಗ್ರಿ ಕ್ಯಾಮೆರಾ, ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Monday, March 16, 2026, 8:41 [IST]
English summary
Tomorrow renault duster suv launch in india expected price details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+