TATA: ನಾಳೆ ಹೊಸ ಟಾಟಾ ಕಾರು ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?
ನಾಳೆ (ಜ.13) ಹೊಸ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಎಸ್‌ಯುವಿ ಅದ್ದೂರಿಯಾಗಿ ಬಿಡುಗಡೆಗೊಳ್ಳಲಿದೆ. ಈ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಈಗಾಗಲೇ, ನೂತನ ಎಸ್‌ಯುವಿ ಕುರಿತಂತೆ ಬಹುತೇಕ ಎಲ್ಲ ವಿವರಗಳನ್ನು ಕಂಪನಿಯು ಬಹಿರಂಗಪಡಿಸಿದೆ. ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ನೂತನ 'ಟಾಟಾ ಪಂಚ್ ಫೇಸ್‌ಲಿಫ್ಟ್' ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.5.3 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಾಲಾಗಿದೆ. ಈ ಕಾರು, ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಕಾಂಪ್ಲಿಶ್ಡ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗಲಿದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ನೋಡುಗರ ಕಣ್ಣು ಕುಕ್ಕುವಂತಿದೆ. ನವೀನವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಕನೆಕ್ಟ್ಡ್ ಎಲ್ಇಡಿ ಟೈಲ್ ಲೈಟ್‌ಗಳು, ರೇರ್ ಡಿಫಾಗರ್, ರೈನ್ ಸೆನ್ಸಿಂಗ್ ವೈಪರ್‌ಗಳು ಮತ್ತು 15/ 16-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸೆಂಟಿಫಿಕ್ ಬ್ಲ್ಯೂ, ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಬೆಂಗಾಲ್ ರೂಜ್ (ರೆಡ್), ಕ್ಯಾರಮೆಲ್, ಡೇಟೋನಾ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸ್ಟ್ಯಾಂಡರ್ಡ್ ಆಗಿ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಕಾರ್ಯಕ್ಷಮತೆ (Performance):
ಹೊಸ 'ಪಂಚ್ ಫೇಸ್‌ಲಿಫ್ಟ್' ಪವರ್‌ಟ್ರೇನ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೂ ಪ್ರಸ್ತುತವಿರುವ 'ಪಂಚ್'ನಂತೆಯೇ ಎಂಜಿನ್‌ನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ. 1.2-ಲೀ. ಪೆಟ್ರೋಲ್, 1.2-ಲೀ. ಟರ್ಬೊ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿರಲಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ಕೊಡಬಹುದು ಎನ್ನಲಾಗಿದೆ.
ವೈಶಿಷ್ಟ್ಯಗಳು (Features):
ಇದರ ಕ್ಯಾಬಿನ್ ವಿನ್ಯಾಸವು ಅದ್ಬುತವಾಗಿದೆ. 8 ಅಥವಾ 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟೈಪ್-ಸಿ ಫಾಸ್ಟ್ ಚಾರ್ಜರ್, ಪುಶ್-ಬಟನ್ ಸ್ಟಾರ್ಟ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವಾಯ್ಸ್-ಅಸಿಸ್ಟ್ ಸನ್‌ರೂಫ್ ಹಾಗೂ ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರಿವರ್ಸ್ ಕ್ಯಾಮೆರಾ, ಕ್ರೂಸ್ ಕಂಟ್ರೋಲ್, ಬ್ಲೈಂಡ್ ವ್ಯೂ ಮಾನಿಟರ್, ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಪ್ರತಿಸ್ಪರ್ಧಿ ಕಾರುಗಳು (Rival cars):
ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis), ನಿಸ್ಸಾನ್ ಮ್ಯಾಗ್ನೈಟ್ (Nissan Magnite), ರೆನಾಲ್ಟ್ ಕೈಗರ್ (Renault Kiger), ಹ್ಯುಂಡೈ ಎಕ್ಸ್‌ಟರ್ (Hyundai Exter) ಮತ್ತು ಸಿಟ್ರನ್ ಸಿ3 (Citroen C3) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








