Toyota: ನಾಳೆ ಟೊಯೊಟಾದ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆ, ಬೆಲೆ ಎಷ್ಟು.. ವಿಶೇಷತೆಗಳೇನು?

ನಾಳೆ (ಜ.20) ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್ ಇವಿ (Toyota Urban Cruiser EV) ಬಿಡುಗಡೆಯಾಗಲಿದೆ. ಇದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ನೋಡಲು ತುಂಬಾ ಚೆನ್ನಾಗಿರಲಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿರಲಿದೆ. ಕೈಗೆಟುಕುವ ದರದಲ್ಲೂ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಬನ್ನಿ, ಈ 'ಅರ್ಬನ್ ಕ್ರೂಸರ್ ಇವಿ'ಯ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ಹೊಚ್ಚ ಹೊಸ 'ಟೊಯೊಟಾ ಅರ್ಬನ್ ಕ್ರೂಸರ್ ಇವಿ' ರೂ.18 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಜಾಗತಿಕವಾಗಿ ಟೊಯೊಟಾ ಮತ್ತು ಮಾರುತಿ ಸುಜುಕಿ ಕಂಪನಿಗಳು ಪಾಲುದಾರಿಕೆ ಹೊಂದಿವೆ. ಹೀಗಾಗಿ, ಅರ್ಬನ್ ಕ್ರೂಸರ್ ಇವಿಯು 'ಇ-ವಿಟಾರಾ'ವನ್ನು ಆಧರಿಸಿರಲಿದೆ ಎಂಬ ವಿವರಗಳು ಲಭ್ಯವಾಗಿವೆ.

Tomorrow Toyota Urban Cruiser EV Launch Expected Price Details

ವಿನ್ಯಾಸ (Design):

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿರಲಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ದೊಡ್ಡ ಗಾತ್ರದ ಅಲಾಯ್ ವೀಲ್‌ಗಳನ್ನು ಹೊಂದಿರಲಿದೆ. ಜೊತೆಗೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುವ ನಿರೀಕ್ಷೆಯಿದೆ.

ಸುತ್ತಳತೆ, ಆಸನ ಆಯ್ಕೆ & ಬೂಟ್ ಸ್ಪೇಸ್ (Dimension Seating Capacity & Boot Space):

ಈ ಎಲೆಕ್ಟ್ರಿಕ್ ಎಸ್‌ಯುವಿಯು ಸಾಕಷ್ಟು ವಿಶಾಲವಾಗಿರಲಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ. 5 ಆಸನ ಆಯ್ಕೆಯನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 236 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರಲಿದೆ ಎನ್ನಲಾಗಿದೆ.

ಕಾರ್ಯಕ್ಷಮತೆ (Performance):

ನೂತನ 'ಅರ್ಬನ್ ಕ್ರೂಸರ್ ಇವಿ' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿರಲಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು. ಹಾಗೆಯೇ ಆಕ್ಸಲ್-ಮೌಂಟೆಡ್ ಮೋಟಾರ್​ನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ವೈಶಿಷ್ಟ್ಯಗಳು (Features):

ಇದರ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿರಲಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 2-ಸ್ಪೋಕ್ ಸ್ಟೀರಿಂಗ್ ವೀಲ್, ಫಿಕ್ಸೆಡ್-ಗ್ಲಾಸ್ ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಈ 'ಟೊಯೊಟಾ ಅರ್ಬನ್ ಕ್ರೂಸರ್ ಇವಿ' ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿರುವ ನಿರೀಕ್ಷೆಯಿದೆ.

ಪ್ರತಿಸ್ಪರ್ಧಿ ಕಾರುಗಳು (Rival Cars):

ನೂತನ 'ಅರ್ಬನ್ ಕ್ರೂಸರ್ ಇವಿ'ಗೆ ಹಲವು ಪ್ರತಿಸ್ಪರ್ಧಿಗಳಿವೆ. ವಿಶೇಷವಾಗಿ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ, ಟಾಟಾ ನೆಕ್ಸಾನ್ ಇವಿ, ಎಂಜಿ ವಿಂಡ್ಸರ್ ಇವಿ, ಟಾಟಾ ಪಂಚ್ ಇವಿ, ಮಹೀಂದ್ರಾ ಬಿಇ6, ಹ್ಯುಂಡೈ ಕ್ರೆಟಾ ಮತ್ತು ವಿನ್‌ಫಾಸ್ಟ್ ವಿಎಫ್6 ಕಾರುಗಳು ಪ್ರಬಲವಾದ ಎದುರಾಳಿಯಾಗಿವೆ.

ಒಟ್ಟಾರೆಯಾಗಿ, ಟೊಯೊಟಾದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾಗುತ್ತದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಈ ಕಾರು ಅತ್ಯಾಕರ್ಷಕವಾಗಿಯೂ ಇರಲಿದೆ. ಮುಂಬರುವ ದಿನಗಳಲ್ಲಿ ಇದೇ 'ಅರ್ಬನ್ ಕ್ರೂಸರ್ ಇವಿ'ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

More from DriveSpark

Article Published On: Monday, January 19, 2026, 16:09 [IST]
English summary
Tomorrow toyota urban cruiser ev launch expected price details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+