2026ರ ಫೆಬ್ರವರಿ ಕಾರು ಸೇಲ್ಸ್: ಟಾಟಾ ನೆಕ್ಸಾನ್ 1st.. ಮಾರುತಿ ಡಿಜೈರ್ ಸೆಕೆಂಡ್.. ಇಲ್ಲಿದೆ ಫುಲ್ ಡೀಟೇಲ್ಸ್
ಭಾರತವು ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಈ ಫೆಬ್ರವರಿಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಇದರಲ್ಲಿ ಟಾಟಾ ಮೋಟಾರ್ಸ್‌ನ ಎರಡು ಮತ್ತು ಮಾರುತಿ ಸುಜುಕಿಗೆ ಸೇರಿದ ಆರು ಕಾರುಗಳು ಸ್ಥಾನ ಪಡೆದಿವೆ. ಜೊತೆಗೆ ಹ್ಯುಂಡೈ ಹಾಗೂ ಮಹೀಂದ್ರಾದ ತಲಾ ಒಂದು ಕಾರುಗಳು ಸಹ ಪಟ್ಟಿಯಲ್ಲಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಟಾಟಾ ನೆಕ್ಸಾನ್ (Tata Nexon):
ಈ ಎಸ್‌ಯುವಿಯು ಮೊದಲ ಸ್ಥಾನದಲ್ಲಿದೆ. 2026ರ ಫೆಬ್ರವರಿಯಲ್ಲಿ ಒಟ್ಟು 19,430 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2025ರ ಫೆಬ್ರವರಿಯಲ್ಲಿ 15,349 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 26.59% ಪ್ರಗತಿಯಾಗಿದೆ. ಸ್ಟ್ಯಾಂಡರ್ಡ್ ನೆಕ್ಸಾನ್ ರೂ.7.32 ಲಕ್ಷದಿಂದ ರೂ.14.05 ಲಕ್ಷ ಹಾಗೂ ನೆಕ್ಸಾನ್ ಇವಿ ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire):
ಇದು ಜನಮೆಚ್ಚಿದ ಸೆಡಾನ್ ಎಂದೇ ಹೆಸರುವಾಸಿಯಾಗಿದ್ದು, ಎರಡನೇ ಸ್ಥಾನದಲ್ಲಿದೆ. ಸರಿ ಸುಮಾರು 19,326 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 14,694 ಯುನಿಟ್‌ಗಳನ್ನು ಮಾರಲಾಗಿದೆ. ಈ ಮೂಲಕ ಶೇಕಡ 31.52% ಬೆಳವಣಿಗೆಯಾಗಿದೆ. ನೂತನ 'ಡಿಜೈರ್' ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಟಾಟಾ ಪಂಚ್ (Tata Punch):
ಈ ಮೈಕ್ರೋ ಎಸ್‌ಯುವಿಯು ಮೂರನೇ ಸ್ಥಾನದಲ್ಲಿದೆ. ಇದೇ ಫೆಬ್ರವರಿಯಲ್ಲಿ ಬರೋಬ್ಬರಿ 18,748 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2025ರ ಫೆಬ್ರವರಿಯಲ್ಲಿಯಲ್ಲಿ 14,559 ಯುನಿಟ್‌ಗಳನ್ನು ಮಾರಲಾಗಿದೆ. ಇದರೊಂದಿಗೆ ವರ್ಷದಿಂದ ವರ್ಷಕ್ಕೆ 28.77% ಅಭಿವೃದ್ಧಿಯಾಗಿದೆ. ಸ್ಟ್ಯಾಂಡರ್ಡ್ ಪಂಚ್ ರೂ.5.60 ಲಕ್ಷದಿಂದ ರೂ.10.55 ಲಕ್ಷ ಮತ್ತು ಪಂಚ್ ಇವಿ ರೂ.9.69 ಲಕ್ಷದಿಂದ ರೂ.12.59 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಹ್ಯುಂಡೈ ಕ್ರೆಟಾ (Hyundai Creta):
ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದೆ. ನಾಲ್ಕನೇ ಸ್ಥಾನದಲ್ಲಿದೆ. ಈ ಫೆಬ್ರವರಿಯಲ್ಲಿ ಒಟ್ಟು 17,938 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2025ರ ಇದೇ ಅವಧಿಯಲ್ಲಿ 16,317 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಶೇಕಡ 9.93% ಬೆಳವಣಿಗೆಯಾಗಿದೆ. ಸ್ಟ್ಯಾಂಡರ್ಡ್ ಕ್ರೆಟಾ ರೂ.10.79 ಲಕ್ಷದಿಂದ ರೂ.20.20 ಲಕ್ಷ ಹಾಗೂ ಕ್ರೆಟಾ ಎಲೆಕ್ಟ್ರಿಕ್ ರೂ.18.02 ಲಕ್ಷದಿಂದ ರೂ.23.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):
ಈ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದು, ಐದನೇ ಸ್ಥಾನದಲ್ಲಿದೆ. ಈ 2026ರ ಫೆಬ್ರವರಿಯಲ್ಲಿ 17,863 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2025ರ ಫೆಬ್ರವರಿಯಲ್ಲಿ 15,392 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟವು ವರ್ಷದಿಂದ ವರ್ಷಕ್ಕೆ ಶೇಕಡ 16.05% ಅಭಿವೃದ್ಧಿಯಾಗಿದೆ. ಹೊಸ 'ಬ್ರೆಝಾ' ರೂ.8.26 ಲಕ್ಷದಿಂದ ರೂ.13.01 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):
ಇದು ಪ್ರಮುಖ ಎಂಪಿವಿಯಾಗಿ ಹೊರಹೊಮ್ಮಿದೆ. ಆರನೇ ಸ್ಥಾನದಲ್ಲಿದೆ. ಇದೇ ಫೆಬ್ರವರಿಯಲ್ಲಿ 17,807 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2025ರ ಇದೇ ಅವಧಿಯಲ್ಲಿ 14,868 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಇದರೊಂದಿಗೆ ಶೇಕಡ 19.77% ಬೆಳವಣಿಗೆಯಾಗಿದೆ. ನೂತನ ಎರ್ಟಿಗಾ ರೂ.8.80 ಲಕ್ಷದಿಂದ ರೂ.12.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಉಳಿದಂತೆ ಏಳನೇ ಸ್ಥಾನದಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ ಇದ್ದು, 14,885 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಎಂಟನೇ ಸ್ಥಾನದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ (14,833 ಯುನಿಟ್), ಒಂಬತ್ತನೇ ಸ್ಥಾನದಲ್ಲಿ ಮಹೀಂದ್ರಾ ಸ್ಕಾರ್ಪಿಯೋ (14,655 ಯುನಿಟ್) ಹಾಗೂ ಹತ್ತನೇ ಸ್ಥಾನದಲ್ಲಿ ಮಾರುತಿ ಸುಜುಕಿ ಬಲೆನೊ (14,632 ಯುನಿಟ್) ಇದೆ.


Click it and Unblock the Notifications








