Thar: ಬಲಶಾಲಿ ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್‌ಗೆ 3 ಜನಪ್ರಿಯ ಪರ್ಯಾಯ ಎಸ್‌ಯುವಿಗಳಿವು.. ಬೆಲೆ ಎಷ್ಟು?

ಇತ್ತೀಚೆಗೆ ಹೊಸ ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್ (Mahindra Thar Roxx Star Edition) ಕಾರನ್ನು ಬಿಡುಗಡೆಗೊಳಿಸಲಾಗಿದೆ. ಈ ಆಫ್-ರೋಡ್ ಎಸ್‌ಯುವಿಯು ರೂ.16.85 ಲಕ್ಷದಿಂದ ರೂ.18.35 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಸಿಟ್ರಿನ್ ಯೆಲ್ಲೋ, ಟ್ಯಾಂಗೋ ರೆಡ್, ಎವರೆಸ್ಟ್ ವೈಟ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 226 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,850 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

ಈ ಕಾರು 2-ಲೀಟರ್ ಟರ್ಬೊ ಪೆಟ್ರೋಲ್ & 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 12.4 ರಿಂದ 15.2 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top 3 Alternative Suvs For New Mahindra Thar Roxx Star Edition Jimny Gurkha And Creta

ನೀವು ಇದೇ 'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್'ಗೆ ಬದಲಿ ಈ 3 ಎಸ್‌ಯುವಿಗಳಾದ ಮಾರುತಿ ಸುಜುಕಿ ಜಿಮ್ನಿ, ಫೋರ್ಸ್ ಗೂರ್ಖಾ ಹಾಗೂ ಹ್ಯುಂಡೈ ಕ್ರೆಟಾಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny):

ಇದು ಪ್ರಖ್ಯಾತ ಆಫ್-ರೋಡ್ ಎಸ್‌ಯುವಿಯಾಗಿದ್ದು, 'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್'ಗೆ ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ರೂ.12.31 ಲಕ್ಷದಿಂದ ರೂ.14.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ನೆಕ್ಸಾ ಬ್ಲ್ಯೂ, ಗ್ರಾನೈಟ್ ಗ್ರೇ, ಬ್ಲ್ಯೂಯಿಸ್ ಬ್ಲ್ಯಾಕ್, ಸಿಜ್ಲಿಂಗ್ ರೆಡ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,590 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. 4 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

Top 3 Alternative Suvs For New Mahindra Thar Roxx Star Edition Jimny Gurkha And Creta

ನೂತನ 'ಜಿಮ್ನಿ' 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 16 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಆಟೋ ಎಸಿಯಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಫೋರ್ಸ್ ಗೂರ್ಖಾ (Force Gurkha):

ಈ ಕಾರನ್ನು 'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್'ಗೆ ಬದಲಿ ತೆಗೆದುಕೊಳ್ಳಬಹುದಾಗಿದೆ. ಅದಕ್ಕೆ ತಕ್ಕಂತೆ ರೂ.15.95 ಲಕ್ಷದಿಂದ ರೂ.17.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ವೈಟ್, ಬ್ಲ್ಯಾಕ್, ಗ್ರೀನ್, ರೆಡ್ & ಆರೆಂಜ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 233 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,400 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 4/ 7 ಆಸನಗಳನ್ನು ಪಡೆದಿದೆ.

Top 3 Alternative Suvs For New Mahindra Thar Roxx Star Edition Jimny Gurkha And Creta

ಹೊಸ 'ಗೂರ್ಖಾ' 2.6-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 9.5 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿದೆ.

ಹ್ಯುಂಡೈ ಕ್ರೆಟಾ (Hyundai Creta):

ಇದೊಂದು ಜನಮೆಚ್ಚಿದ ಎಸ್‌ಯುವಿಯಾಗಿದ್ದು, 'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್'ಗೆ ಪರ್ಯಾಯವಾಗಿಯೂ ಕೊಂಡುಕೊಳ್ಳಬಹುದು. ರೂ.10.79 ಲಕ್ಷದಿಂದ ರೂ.20.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ & ರೇಂಜರ್ ಖಾಕಿ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,400 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

Top 3 Alternative Suvs For New Mahindra Thar Roxx Star Edition Jimny Gurkha And Creta

ನೂತನ 'ಕ್ರೆಟಾ' 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 21 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ಕೊಡುತ್ತದೆ. 10.25-ಇಂಚಿನ ಡುಯಲ್ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ - ಇನ್ಸ್ಟ್ರುಮೆಂಟ್ ಕ್ಲಸ್ಟರ್) ಮತ್ತು ಡುಯಲ್ ಝೋನ್ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Thursday, January 29, 2026, 18:00 [IST]
English summary
Top 3 alternative suvs for new mahindra thar roxx star edition jimny gurkha and creta
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+