Renault: ಲೆಜೆಂಡ್ ಇಸ್ ಕಮ್ ಬ್ಯಾಕ್.. ಹೊಸ ರೆನಾಲ್ಟ್ ಡಸ್ಟರ್‌ಗೆ 3 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಮೊನ್ನೆಯಷ್ಟೇ 2026ರ ಹೊಸ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿಯನ್ನು ಪರಿಚಯಿಸಲಾಗಿದೆ. ಇದು ರೂ.9.50 ಲಕ್ಷದಿಂದ ರೂ.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗದೆ. ತುಂಬಾ ಅಚ್ಚುಕಟ್ಟಾದ ವಿನ್ಯಾವನ್ನು ಒಳಗೊಂಡಿದೆ. ಜೇಡ್ ಮೌಂಟೇನ್ ಗ್ರೀನ್, ಪರ್ಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ರಿವರ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

ಈ ಕಾರು 1.8-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್), 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 13.9 ರಿಂದ 19.87 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್ ಹಾಗೂ ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Top 3 Best Alternative Cars For Renault Duster Tata Sierra Hyundai Creta And Maruti Grand Vitara

ನೀವು ಇದೇ 'ರೆನಾಲ್ಟ್ ಡಸ್ಟರ್'ಗೆ ಬದಲಾಗಿ ಈ 3 ಜನಪ್ರಿಯ ಎಸ್‌ಯುವಿಗಳಾದ ಟಾಟಾ ಸಿಯೆರಾ, ಹ್ಯುಂಡೈ ಕ್ರೆಟಾ ಹಾಗೂ ಮಾರುತಿ ಸುಜುಕಿ ಗ್ರಾಂಡ್ ವಿಟಾರಾಗಳನ್ನು ಖರೀದಿಸಬಹುದು. ಬನ್ನಿ, ಈ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ಸಿಯೆರಾ (Tata Sierra):

ಇದೊಂದು ಜನಪ್ರಿಯ ಎಸ್‌ಯುವಿಯಾಗಲಿದೆ. 'ರೆನಾಲ್ಟ್ ಡಸ್ಟರ್'ಗೆ ಪರ್ಯಾಯ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಮಿಂಟಲ್ ಗ್ರೇ, ಪ್ರಿಸ್ಟೀನ್ ವೈಟ್, ಅಂಡಮಾನ್ ಅಡ್ವೆಂಚರ್, ಬೆಂಗಾಲ್ ರೂಜ್, ಕೂರ್ಗ್ ಕ್ಲೌಡ್ಸ್ ಹಾಗೂ ಮುನ್ನಾರ್ ಮಿಸ್ಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

Top 3 Best Alternative Cars For Renault Duster Tata Sierra Hyundai Creta And Maruti Grand Vitara

ನೂತನ 'ಸಿಯೆರಾ' 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 16.8 ರಿಂದ 20.5 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಟ್ರಿಪಲ್ ಸ್ಕ್ರೀನ್ ಸೆಟಪ್, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ರೇರ್ ಎಸಿ ವೆಂಟ್‌ಗಳು, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಹ್ಯುಂಡೈ ಕ್ರೆಟಾ (Hyundai Creta):

ಈ ಕಾರನ್ನು 'ರೆನಾಲ್ಟ್ ಡಸ್ಟರ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.10.79 ಲಕ್ಷದಿಂದ ರೂ.20.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ರೋಬಸ್ಟ್ ಎಮರಾಲ್ಡ್ ಪರ್ಲ್, ರೇಂಜರ್ ಖಾಕಿ, ಟೈಟಾನ್ ಗ್ರೇ, ಸ್ಟಾರಿ ನೈಟ್ ಹಾಗೂ ಟೈಟಾನ್ ಗ್ರೇ ಮ್ಯಾಟ್ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನಗಳನ್ನು ಒಳಗೊಂಡಿದೆ.

Top 3 Best Alternative Cars For Renault Duster Tata Sierra Hyundai Creta And Maruti Grand Vitara

ಹೊಸ 'ಕ್ರೆಟಾ' 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17.4 ರಿಂದ 21.8 ಕಿಲೋಮೀಟರ್‌ವರೆಗೆ ನೀಡುತ್ತದೆ. 10.25-ಇಂಚಿನ ಡುಯಲ್ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್-ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):

ಇದು ಪ್ರಮುಖ ಎಸ್‌ಯುವಿಯಾಗಿದೆ. 'ರೆನಾಲ್ಟ್ ಡಸ್ಟರ್‌'ಗೆ ಪರ್ಯಾಯವಾಗಿ ಖರೀದಿಸಬಹುದು. ರೂ.10.77 ಲಕ್ಷದಿಂದ ರೂ.19.72 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಹಾಗೂ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

Top 3 Best Alternative Cars For Renault Duster Tata Sierra Hyundai Creta And Maruti Grand Vitara

ನೂತನ 'ಗ್ರ್ಯಾಂಡ್ ವಿಟಾರಾ' 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Wednesday, January 28, 2026, 8:44 [IST]
English summary
Top 3 best alternative cars for renault duster tata sierra hyundai creta and maruti grand vitara
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+