21 ಕಿ.ಮೀ ಮೈಲೇಜ್.. 5.35 ಲಕ್ಷಕ್ಕೆ ಸಿಗುತ್ತೆ.. ಈ ಪ್ರಖ್ಯಾತ ಮಾರುತಿ ಹ್ಯಾಚ್‌ಬ್ಯಾಕ್‌ಗೆ 5 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು?

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಜನಮೆಚ್ಚಿದ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು 1.2-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 20.89 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 2-ಏರ್‌ಬ್ಯಾಗ್‌ಗಳು, ರೇರ್-ಪಾರ್ಕಿಂಗ್ ಸೇನಾರ್ಸ್ ಮತ್ತು ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 5 Alternative Cars For Maruti Suzuki Ignis Grand i10 Nios Exter Punch Swift And Tiago

ನೀವು ಇದೇ 'ಮಾರುತಿ ಸುಜುಕಿ ಇಗ್ನಿಸ್'ಗೆ ಬದಲಾಗಿ ಈ 5 ಕಾರುಗಳಾದ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಹ್ಯುಂಡೈ ಎಕ್ಸ್‌ಟರ್, ಟಾಟಾ ಪಂಚ್, ಮಾರುತಿ ಸುಜುಕಿ ಸ್ವಿಫ್ಟ್ ಹಾಗೂ ಟಾಟಾ ಟಿಯಾಗೊಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios):

ಇದೊಂದು ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ರೂ.5.92 ಲಕ್ಷದಿಂದ ರೂ.8.56 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 16 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ & 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Top 5 Alternative Cars For Maruti Suzuki Ignis Grand i10 Nios Exter Punch Swift And Tiago

ಹ್ಯುಂಡೈ ಎಕ್ಸ್‌ಟರ್‌ (Hyundai Exter):

ಈ ಮೈಕ್ರೋ ಎಸ್‌ಯುವಿಯು ಹೆಚ್ಚು ಖ್ಯಾತಿ ಗಳಿಸಿದೆ. ರೂ.5.64 ಲಕ್ಷದಿಂದ ರೂ.9.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ & 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19.2 ರಿಂದ 27.1 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಟಾಟಾ ಪಂಚ್ (Tata Punch):

ಇದು ನಂಬಿಕಾರ್ಹ ಮೈಕ್ರೋ ಎಸ್‌ಯುವಿಯಾಗಿದೆ. ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Top 5 Alternative Cars For Maruti Suzuki Ignis Grand i10 Nios Exter Punch Swift And Tiago

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift)

ಈ ಹ್ಯಾಚ್‌ಬ್ಯಾಕ್‌ನ್ನು ಗ್ರಾಹಕರು ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Top 5 Alternative Cars For Maruti Suzuki Ignis Grand i10 Nios Exter Punch Swift And Tiago

ಟಾಟಾ ಟಿಯಾಗೊ (Tata Tiago):

ಇದೊಂದು ಜನಮೆಚ್ಚಿದ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ರೂ.4.57 ಲಕ್ಷದಿಂದ ರೂ.7.82 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Friday, February 13, 2026, 11:26 [IST]
English summary
Top 5 alternative cars for maruti suzuki ignis grand i10 nios exter punch swift and tiago
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+