Top 5 Best New Suvs: ನೀವು ಕಾರು ತೆಗೆದುಕೊಳ್ಳಬೇಕೇ.. ಇವೇ 5 ಹೊಸ ಎಸ್‌ಯುವಿಗಳು, ರೂ.7.89 ಲಕ್ಷದಿಂದ ಶುರು!

ಹೊಸದೊಂದು ಕಾರು ಖರೀದಿಸಬೇಕೆಂಬುದು ಹಲವರ ಕನಸಾಗಿರುತ್ತದೆ. ಆದರೆ, ಯಾವ ಕಾರನ್ನು ತೆಗೆದುಕೊಳ್ಳಬೇಕು ಎಂಬ ಗೊಂದಲ ಬಹುತೇಕರಲ್ಲಿ ಇರುತ್ತದೆ. ಅಂತಹವರಿಗೆ 'ಎಸ್‌ಯುವಿಗಳು' ಬೆಸ್ಟ್ ಚಾಯ್ಸ್ ಆಗಲಿವೆ. ದೇಶೀಯ ಮಾರುಕಟ್ಟೆಯಲ್ಲಿಯೂ ಕೆಲವೇ ತಿಂಗಳ ಅಂತರದಲ್ಲಿ 5 ನೂತನ ಎಸ್‌ಯುವಿಗಳು ಅದ್ದೂರಿಯಾಗಿ ಬಿಡುಗಡೆಗೊಂಡಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹ್ಯುಂಡೈ ವೆನ್ಯೂ (Hyundai Venue):

ಇದು ಪ್ರಮುಖ ಎಸ್‌ಯುವಿಯಾಗಿದೆ. ರೂ.7.89 ಲಕ್ಷದಿಂದ ರೂ.15.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ ಮತ್ತು ಹ್ಯಾಝೆಲ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮಾಯಕವಾಗಿ ಸಂಚರಿಸಬಹುದು.

Top 5 Best New Suvs In india Venue Sierra Victoris Seltos And XUV 7XO

ಹೊಸ 'ವೆನ್ಯೂ' ಕಾರು 1.2-ಲೀಟರ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 18 ರಿಂದ 21 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ 12.3 ಇಂಚಿನ ಡುಯಲ್ ಸ್ಕ್ರೀನ್‌ಗಳು ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಸಿಯೆರಾ (Tata Sierra):

ಈ ಎಸ್‌ಯುವಿಯು ರೂ.11.49 ಲಕ್ಷದಿಂದ ರೂ.17.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅಂಡಮಾನ್ ಅಡ್ವೆಂಚರ್, ಬೆಂಗಾಲ್ ರೂಜ್, ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

Top 5 Best New Suvs In india Venue Sierra Victoris Seltos And XUV 7XO

ನೂತನ 'ಸಿಯೆರಾ' ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 19 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 12 ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):

ಇದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 21 ರಿಂದ 29 ಕಿಲೋಮೀಟರ್‌ವರೆಗೆ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಆಟೋ ಎಸಿ ಹಾಗೂ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top 5 Best New Suvs In india Venue Sierra Victoris Seltos And XUV 7XO

ಕಿಯಾ ಸೆಲ್ಟೋಸ್ (Kia Seltos):

ಈ ಎಸ್‌ಯುವಿಯು ರೂ.10,99 ಲಕ್ಷದಿಂದ ರೂ.19,99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.3-ಇಂಚಿನ ಡುಯಲ್ ಸ್ಕ್ರೀನ್‌ ಸೆಟಪ್, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಡುಯಲ್- ಜೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Top 5 Best New Suvs In india Venue Sierra Victoris Seltos And XUV 7XO

ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO):

ಇದೊಂದು ಹೊಸ ಎಸ್‌ಯುವಿಯಾಗಿದೆ. ರೂ.13.66 ಲಕ್ಷದಿಂದ ರೂ.24.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 13 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ. 5 ಆಸನಗಳನ್ನು ಹೊಂದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಸನ್‌ರೂಫ್ ಹಾಗೂ 7-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Tuesday, January 6, 2026, 17:30 [IST]
English summary
Top 5 best new suvs in india venue sierra victoris seltos and xuv 7xo
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+