ಪೆಟ್ರೋಲ್‌ಗೆ ಹೇಳಿ ಟಾಟಾ, ಬೈ ಬೈ.. ಈ 2026ರ ಮಾರ್ಚ್‌ನಲ್ಲಿ ಸಿಗುವ 5 ಜನಪ್ರಿಯ ಎಲೆಕ್ಟ್ರಿಕ್ ಕಾರುಗಳಿವು.. ಬೆಲೆ ಇಷ್ಟೇನಾ?
ಭಾರತದಲ್ಲಿ ಇವಿಗಳಿಗೆ ದಿನದಿಂದ ದಿನಕ್ಕೆ ಬೇಡಿಕೆಯು ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ಇದೇ ತಿಂಗಳು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಟಾಟಾ ಟಿಯಾಗೊ ಇವಿ, ಟಾಟಾ ಪಂಚ್ ಇವಿ, ಎಂಜಿ ವಿಂಡ್ಸರ್ ಇವಿ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ ಮಾರುತಿ ಸುಜುಕಿ ಇ ವಿಟಾರಾಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟಾಟಾ ಟಿಯಾಗೊ ಇವಿ (Tata Tiago EV)
ಇದೊಂದು ಎಂಟ್ರಿ ಲೆವೆಲ್ ಎಲೆಕ್ಟ್ರಿಕ್ ಕಾರಾಗಿದೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.7.99 ಲಕ್ಷದಿಂದ ರೂ.11.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಸೂಪರ್ನೋವಾ ಕಾಪರ್, ಟೀಲ್ ಬ್ಲೂ, ಅರಿಜೋನಾ ಬ್ಲೂ ಮತ್ತು ಡೇಟೋನಾ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದೆ. 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,301 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಟಿಯಾಗೊ ಇವಿ' 19.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 24 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 223 ರಿಂದ 293 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಟಾಟಾ ಪಂಚ್ ಇವಿ (Tata Punch EV):
ಈ ಮೈಕ್ರೋ ಎಲೆಕ್ಟ್ರಿಕ್ ಎಸ್‌ಯುವಿಯು ಅಗ್ಗದ ದರದಲ್ಲೂ ಸಿಗುತ್ತದೆ. ರೂ.9.69 ಲಕ್ಷದಿಂದ ರೂ.12.59 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಬಾಸ್ (ಬ್ಯಾಟರಿ ಆಸ್-ಎ-ಸರ್ವಿಸ್) ಯೋಜನೆಯೂ ದೊರೆಯುತ್ತದೆ. ಆ ಮಾಡೆಲ್ ಬೆಲೆ ರೂ.6.49 ಲಕ್ಷದಿಂದ ಆರಂಭವಾಗುತ್ತದೆ. ಪ್ರತಿ ಕಿ.ಮೀ ಗೆ ರೂ.2.60 ಬಾಡಿಗೆ ಪಾವತಿಸಬೇಕು. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಬೆಂಗಾಲ್ ರೂಜ್, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್ ಹಾಗೂ ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 195 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,700 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಪಂಚ್ ಇವಿ' 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 365 ರಿಂದ 468 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಡಬಹುದು. 10.2-ಇಂಚಿನ ಸೆಂಟ್ರಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಎಂಜಿ ವಿಂಡ್ಸರ್ ಇವಿ (MG Windsor EV):
ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದೆ. ರೂ.14 ಲಕ್ಷದಿಂದ ರೂ.18.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 'ಬಾಸ್' ಯೋಜನೆಯಡಿಯೂ ಸಿಗುತ್ತದೆ. ಆ ಮಾಡೆಲ್ ಬೆಲೆ ರೂ.9.99 ಲಕ್ಷದಿಂದ ಪ್ರಾರಂಭವಾಗುತ್ತದೆ. 1 ಕಿ.ಮೀ ಗೆ ರೂ.3.50 ಬಾಡಿಗೆ ಕಟ್ಟಬೇಕು. 38 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 331 ರಿಂದ 449 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ (Mahindra XUV 3XO EV):
ಈ ಎಸ್‌ಯುವಿಯನ್ನು ಜನ ಮೆಚ್ಚಿದ್ದಾರೆ. ರೂ.13.89 ಲಕ್ಷದಿಂದ ರೂ.14.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 39.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 285 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಇನ್ಸ್ಟ್ರುಮೆಂಟ್ ಕನ್ಸೋಲ್ & ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ 10.25-ಇಂಚಿನ ಡಿಸ್‌ಪ್ಲೇಗಳು ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):
ಇದು ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.15.99 ಲಕ್ಷದಿಂದ ರೂ.20.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 'ಬಾಸ್' ಯೋಜನೆಯಡಿ ಸಹ ದೊರೆಯುತ್ತದೆ. ಆ ಮಾಡೆಲ್ ಬೆಲೆ ರೂ.10.99 ಲಕ್ಷದಿಂದ ಶುರುವಾಗುತ್ತದೆ. ಪ್ರತಿ ಕಿ.ಮೀ ಗೆ ರೂ.3.99 ಬಾಡಿಗೆ ಕಟ್ಟಬೇಕು. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 440 ರಿಂದ 543 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








