ಪೈಪೋಟಿಗೆ ಸಿದ್ಧ: ಬೆಲೆ ಇಷ್ಟೇನಾ.. ಅತಿ ಶೀಘ್ರದಲ್ಲೇ 5 ಹೊಸ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆ.. ವಿಶೇಷತೆಗಳೇನು?
ಭಾರತವು ವಿಶ್ವದಲ್ಲೇ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. '2026' ವಾಹನ ತಯಾರಕ ಕಂಪನಿಗಳಿಗೆ ಮಹತ್ವದ ವರ್ಷವಾಗಿದೆ. ಅತಿ ಶೀಘ್ರದಲ್ಲೇ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್, ಮಾರುತಿ ಸುಜುಕಿ ಇ-ವಿಟಾರಾ, ಟಾಟಾ ಸಿಯೆರಾ ಇವಿ, ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ ಹಾಗೂ ಕಿಯಾ ಸೈರಸ್ ಇವಿಗಳು ಆದ್ದೂರಿಯಾಗಿ ಮಾರಾಟಕ್ಕೂ ಬರಲಿವೆ. ಬನ್ನಿ, ಇವುಗಳ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift):
ನವೀಕರಣಗೊಂಡ 'ಟಾಟಾ ಪಂಚ್ ಇವಿ'ಯು ಇದೇ ಫೆಬ್ರವರಿ 20 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕಾರು ರೂ.10 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿರಲಿದೆ. 5 ಆಸನಗಳನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿರಲಿದೆ. 25 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 35 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಲಿದೆ ಎಂದು ಹೇಳಲಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿರುವ ಸಾಧ್ಯತೆಯಿದೆ.
ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):
ಇದು ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಮಾರಾಟಕ್ಕೆ ಬರುವ ನೀರಿಕ್ಷೆಯಿದೆ. ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುಬಹುದು ಎನ್ನಲಾಗಿದೆ. ಈಗಾಗಲೇ 'ಇ-ವಿಟಾರಾ' ಅನಾವರಣಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಹೊಸ 'ಇ-ವಿಟಾರಾ' 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ ಎಂದು ಕಂಪನಿಯು ಹೇಳಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 2-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು ಫಿಕ್ಸೆಡ್ ಗ್ಲಾಸ್ ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಟಾಟಾ ಸಿಯೆರಾ ಇವಿ (Tata Sierra EV):
ಈ ಎಲೆಕ್ಟ್ರಿಕ್ ಎಸ್‌ಯುವಿಯು ಮಾರ್ಚ್‌ನಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ. ರೂ.20 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎನ್ನಲಾಗಿದೆ. ಸ್ಟ್ಯಾಂಡರ್ಡ್ 'ಸಿಯೆರಾ'ದಂತೆ ವಿನ್ಯಾಸವನ್ನು ಒಳಗೊಂಡಿರಲಿದೆ. 5 ಆಸನಗಳನ್ನು ಪಡೆದಿರಲಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಪೂರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು. ಟ್ರಿಪಲ್ ಸ್ಕ್ರೀನ್ ಸೆಟಪ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ (Toyota Urban Cruiser Ebella):
ಇದು ಬಹುನಿರೀಕ್ಷಿತ ಎಸ್‌ಯುವಿಯಾಗಿದೆ. ಈಚೆಗೆ ಅನಾವರಣಗೊಳಿಸಲಾಗಿದೆ. ರೂ.18 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ ಎಂದು ಕಂಪನಿಯು ತಿಳಿಸಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಕಿಯಾ ಸೈರಸ್ ಇವಿ (Kia Syros EV):
ಈ ಎಲೆಕ್ಟ್ರಿಕ್ ಎಸ್‌ಯುವಿಯು ಇದೇ ವರ್ಷದ ಆಗಸ್ಟ್‌ನಲ್ಲಿ ಬಿಡುಗಡೆಯಾಗಲಿದೆ. ರೂ.14 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ಸ್ಟ್ಯಾಂಡರ್ಡ್ 'ಸೈರಸ್'ನಂತೆ ವಿನ್ಯಾಸವನ್ನು ಹೊಂದಿರಲಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಬಹುದು. ಸಂಪೂರ್ಣ ಚಾರ್ಜ್‌ನಲ್ಲಿ 355 ರಿಂದ 473 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ. 12.3-ಇಂಚಿನ ಡುಯಲ್ ಸ್ಕ್ರೀನ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.


Click it and Unblock the Notifications








