Toyota: ಟೊಯೊಟಾದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿಗೆ 3 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಈಚೆಗೆ ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ (Toyota Urban Cruiser Ebella) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಪರಿಚಯಿಸಲಾಗಿದೆ. ಈ ಕಾರು ರೂ.18 ಲಕ್ಷದಿಂದ ರೂ.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಕೆಫೆ ವೈಟ್, ಬ್ಲ್ಯೂಯಿಶ್ ಬ್ಲ್ಯಾಕ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್ ಮತ್ತು ಲ್ಯಾಂಡ್ ಬ್ರೀಜ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 2,700 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು.

ಹೊಸ 'ಅರ್ಬನ್ ಕ್ರೂಸರ್ ಎಬೆಲ್ಲಾ' 49 ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್ ಹಾಗೂ ಮಲ್ಟಿ ಯುಎಸ್‌‍ಬಿ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಪಡೆದಿದೆ.

Top 5 Replacement Cars For Toyota Urban Cruiser Ebella BE 6 Creta Electric And Nexon EV

ನೀವು ಇದೇ 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ'ಗೆ ಪರ್ಯಾಯವಾಗಿ ಮಹೀಂದ್ರಾ ಬಿಇ 6, ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಹಾಗೂ ಟಾಟಾ ನೆಕ್ಸಾನ್ ಇವಿಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಹೀಂದ್ರಾ ಬಿಇ 6 (Mahindra BE 6):

ಇದು ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ'ಗೆ ಬದಲಿ ಆಯ್ಕೆಯಾಗಲಿದೆ. ರೂ18.90 ಲಕ್ಷದಿಂದ ರೂ.27.65 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎವರೆಸ್ಟ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ಡೆಸರ್ಟ್ ಮಿಸ್ಟ್, ಟ್ಯಾಂಗೋ ರೆಡ್, ಫೈರ್‌ಸ್ಟಾರ್ಮ್ ಆರೆಂಜ್ ಹಾಗೂ ಡೆಸರ್ಟ್ ಮಿಸ್ಟ್ ಸ್ಯಾಟಿನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 2,775 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ.

Top 5 Replacement Cars For Toyota Urban Cruiser Ebella BE 6 Creta Electric And Nexon EV

ನೂತನ 'ಬಿಇ 6' ಕಾರು 59 ಮತ್ತು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 556 ರಿಂದ 682 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಸೀಟ್‌ಗಳು ಹಾಗೂ ವೈರ್‌ಲೆಸ್ ಚಾರ್ಜರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric):

ಈ ಕಾರನ್ನು 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.18.02 ಲಕ್ಷದಿಂದ ರೂ.24.70 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಅಬಿಸ್ ಬ್ಲ್ಯಾಕ್ ಪರ್ಲ್ ಮೆಟಾಲಿಕ್, ಅಟ್ಲಾಸ್ ವೈಟ್ ಮೆಟಾಲಿಕ್, ಫಿಯರಿ ರೆಡ್ ಪರ್ಲ್ ಮೆಟಾಲಿಕ್, ಓಷನ್ ಬ್ಲೂ ಮೆಟಾಲಿಕ್, ಬ್ಲ್ಯಾಕ್ ಮ್ಯಾಟ್, ಟೈಟಾನ್ ಗ್ರೇ ಮ್ಯಾಟ್ ಹಾಗೂ ರೋಬಸ್ಟ್ ಎಮರಾಲ್ಡ್ ಮ್ಯಾಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 2,700 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

Top 5 Replacement Cars For Toyota Urban Cruiser Ebella BE 6 Creta Electric And Nexon EV

ಹೊಸ 'ಕ್ರೆಟಾ ಎಲೆಕ್ಟ್ರಿಕ್' 42 ಹಾಗೂ 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 473 ರಿಂದ 510 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 10.25-ಇಂಚಿನ ಡುಯಲ್ ಡಿಸ್‌ಪ್ಲೇ, ಬೋಸ್ ಪ್ರೀಮಿಯಂ ಸೌಂಡ್ ಸಿಸ್ಟಮ್ ಹಾಗೂ ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಡಿಜಿಟಲ್ ಕೀ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV):

ಇದೊಂದು ಪ್ರಖ್ಯಾತ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ'ಗೆ ಬದಲಾಗಿಯೂ ತೆಗೆದುಕೊಳ್ಳಬಹುದು. ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಕೆಫೆ ವೈಟ್, ಬ್ಲ್ಯೂಯಿಶ್ ಬ್ಲ್ಯಾಕ್, ಗೇಮಿಂಗ್ ಗ್ರೇ ಮತ್ತು ಸ್ಪೋರ್ಟಿನ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 2,700 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದೆ.

Top 5 Replacement Cars For Toyota Urban Cruiser Ebella BE 6 Creta Electric And Nexon EV

ಈ ಕಾರು 30 ಮತ್ತು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋ ಎಸಿ, ಸನ್‌ರೂಫ್‌ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Thursday, January 22, 2026, 8:30 [IST]
English summary
Top 5 replacement cars for toyota urban cruiser ebella be 6 creta electric and nexon ev
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+