ಇವೇ 5 ಸ್ಟೈಲಿಶ್ ಎಸ್‌ಯುವಿಗಳು.. ಜನ ತಿರುಗಿ ನೋಡುವರು, ರೂ.8.15 ಲಕ್ಷದಿಂದ ಶುರು.. 5-ಸೀಟರ್!
ಭಾರತದಲ್ಲಿ ಕಾರು ಮಾರುಕಟ್ಟೆಯಲ್ಲಿ ಎಸ್‌ಯುವಿಗಳಿಗೆ ವಿಪರೀತವಾದ ಬೇಡಿಕೆಯಿದೆ. ಅದರಲ್ಲೂ ಸ್ಟೈಲಿಶ್ ಮಾಡೆಲ್‌ಗಳನ್ನು ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ನೀವು ಹೊಚ್ಚ ಹೊಸ ಎಸ್‌ಯುವಿವೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಸಿಟ್ರನ್ ಬಸಾಲ್ಟ್ ಎಕ್ಸ್, ಟಾಟಾ ಕರ್ವ್, ಟಾಟಾ ಸಿಯೆರಾ, ಮಹೀಂದ್ರಾ ಎಕ್ಸ್ಇವಿ 9ಇ ಹಾಗೂ ಮಹೀಂದ್ರಾ ಬಿಇ 6ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಸಿಟ್ರನ್ ಬಸಾಲ್ಟ್ ಎಕ್ಸ್ (Citroen Basalt X):
ಇದು ಜನಪ್ರಿಯ ಕೂಪೆ ಎಸ್‌ಯುವಿಯಾಗಿದೆ. ರೂ.8.15 ಲಕ್ಷದಿಂದ ರೂ.13.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ, ಕಾಸ್ಮೋ ಬ್ಲೂ ಮತ್ತು ಗಾರ್ನೆಟ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,775 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಬಸಾಲ್ಟ್ ಎಕ್ಸ್' 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 19 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) & ರೇರ್-ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.
ಟಾಟಾ ಕರ್ವ್ (Tata Curvv):
ಈ ಕಾರು 'ಕೂಪೆ ಎಸ್‌ಯುವಿ' ಎಂದೇ ಹೆಸರುವಾಸಿಯಾಗಿದೆ. ರೂ.9.66 ಲಕ್ಷದಿಂದ ರೂ.18.85 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಫ್ಲೇಮ್ ರೆಡ್, ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಒಪೇರಾ ಬ್ಲೂ, ಪ್ಯೂರ್ ಗ್ರೇ ಮತ್ತು ಗೋಲ್ಡ್ ಎಸೆನ್ಸ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 208 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,560 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಕರ್ವ್' 1.2-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 19 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಪನೊರೊಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) & 360-ಡಿಗ್ರಿ ಕ್ಯಾಮೆರಾ ಹೊಂದಿದೆ.
ಟಾಟಾ ಸಿಯೆರಾ (Tata Sierra):
ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದೆ. ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 16 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e):
ಈ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.22.40 ಲಕ್ಷದಿಂದ ರೂ.31.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 59 ಮತ್ತು 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 542 ರಿಂದ 656 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ - ಪ್ಯಾಸೆಂಜರ್ ಸೈಡ್ ಡಿಸ್‌ಪ್ಲೇಗಾಗಿ 12.3 ಇಂಚಿನ ಸ್ಕ್ರೀನ್ ಹಾಗೂ 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಹೀಂದ್ರಾ ಬಿಇ 6 (Mahindra BE 6):
ಇದು ರೂ.18.90 ಲಕ್ಷದಿಂದ ರೂ.27.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 59 ಹಾಗೂ 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 556 ರಿಂದ 682 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications








