ಜನ ಸಾಲು ಕಟ್ಟುವರು.. ರೂ.7 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಸಿಗುವ 5 ಜನಪ್ರಿಯ ಎಸ್‌ಯುವಿಗಳಿವು: 28 Km ವರೆಗೆ ಮೈಲೇಜ್!
ಭಾರತದ ಕಾರು ಮಾರುಕಟ್ಟೆಯಲ್ಲಿ ಎಸ್‌ಯುವಿಗಳಿಗೆ ಭಾರೀ ಬೇಡಿಕೆಯಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ನೀವು ರೂ.7 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಹೊಚ್ಚ ಹೊಸ ಎಸ್‌ಯುವಿಯೊಂದನ್ನು ಖರೀದಿಯಲು ಆಲೋಚಿಸಿದ್ದೀರಾ.. ಹಾಗಾದರೆ, ಟಾಟಾ ಪಂಚ್, ಮಾರುತಿ ಸುಜುಕಿ ಫ್ರಾಂಕ್ಸ್, ಹ್ಯುಂಡೈ ಎಕ್ಸ್‌ಟರ್, ನಿಸ್ಸಾನ್ ಮ್ಯಾಗ್ನೈಟ್ ಹಾಗೂ ರೆನಾಲ್ಟ್ ಕೈಗರ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಟಾಟಾ ಪಂಚ್ (Tata Punch):
ಇದೊಂದು ಪ್ರಮುಖ ಎಸ್‌ಯುವಿಯಾಗಿದೆ. ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಡೇಟೋನ್ ಗ್ರೇ, ಸೈಂಟಿಫಿಕ್ ಬ್ಲೂ ಮತ್ತು ಕ್ಯಾರಮೆಲ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 193 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,445 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಪಂಚ್' 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):
ಈ ಎಸ್‌ಯುವಿಯನ್ನು ಜನ ಮೆಚ್ಚಿದ್ದಾರೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಹಾಗೂ ಅರ್ಥನ್ ಬ್ರೌನ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2520 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಫ್ರಾಂಕ್ಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 1-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20 ರಿಂದ 28.51 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಹ್ಯುಂಡೈ ಎಕ್ಸ್‌ಟರ್ (Hyundai Exter):
ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. ರೂ.5.74 ಲಕ್ಷದಿಂದ ರೂ.9.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite):
ಈ ಎಸ್‌ಯುವಿಯು ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ಟರ್ಬೊ ಪೆಟ್ರೋಲ್ ಹಾಗೂ 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 17.9 ರಿಂದ 19.9 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ರೆನಾಲ್ಟ್ ಕೈಗರ್ (Renault Kiger):
ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.5.76 ಲಕ್ಷದಿಂದ ರೂ.10.34 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 19.83 ರಿಂದ 20.38 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications








