ಚಿಕ್ಕ ಸಂಸಾರಕ್ಕೆ 7 ಬೆಸ್ಟ್ ಎಸ್‌ಯುವಿಗಳಿವು.. ಮೈಲೇಜ್‌ನಲ್ಲಿ ಕಾಂಪ್ರೊಮೈಸ್ ಇಲ್ಲ.. ರೂ.10 ಲಕ್ಷಕ್ಕಿಂತ ಅಗ್ಗ!

ಭಾರತದ ಕಾರು ಮಾರುಕಟ್ಟೆಯಲ್ಲಿ ಎಸ್‌ಯುವಿಗಳಿಗೆ ವಿಪರೀತವಾದ ಬೇಡಿಕೆಯಿದೆ. ಇವುಗಳನ್ನು ಗ್ರಾಹಕರು ಕೂಡ ಇಷ್ಟಪಟ್ಟು ಕೊಳ್ಳುತ್ತಿದ್ದಾರೆ. ನಿಮ್ಮ ಪುಟ್ಟ ಕುಟುಂಬಕ್ಕಾಗಿ ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಟಾಟಾ ಪಂಚ್, ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಸ್ಕೋಡಾ ಕೈಲಾಕ್, ನಿಸ್ಸಾನ್ ಮ್ಯಾಗ್ನೈಟ್, ರೆನಾಲ್ಟ್ ಕೈಗರ್ ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಈ ಎಸ್‌ಯುವಿಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ಪಂಚ್ (Tata Punch):

ಇದೊಂದು ಪುಟ್ಟ ಗಾತ್ರದ ಎಸ್‌ಯುವಿಯಾಗಿದೆ. ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27 ಕಿ.ಮೀವರೆಗೆ ಮೈಲೇಜ್‌ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top 7 Family Suvs Under Rs 10 lakh Punch Brezza Venue XUV 3XO Kylaq Magnite Kiger

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):

ಈ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಜನಮೆಚ್ಚಿದ್ದಾರೆ. ಕನಿಷ್ಠ ರೂ.8.26 ಲಕ್ಷ ಹಾಗೂ ಗರಿಷ್ಠ ರೂ.13.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಮೈಲ್ಡ್-ಹೈಬ್ರಿಡ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 17.80 ರಿಂದ 25.51 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಹ್ಯುಂಡೈ ವೆನ್ಯೂ (Hyundai Venue):

ಇದು ಪ್ರಮುಖ ಎಸ್‌ಯುವಿಯಾಗಿದೆ. ರೂ.7.89 ಲಕ್ಷದಿಂದ ರೂ.15.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 17.9 ರಿಂದ 20.99 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 12.3-ಇಂಚಿನ ಡುಯಲ್ ಸ್ಕ್ರೀನ್‌ಗಳು & 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top 7 Family Suvs Under Rs 10 lakh Punch Brezza Venue XUV 3XO Kylaq Magnite Kiger

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO):

ಈ ಎಸ್‌ಯುವಿಯನ್ನು ಖರೀದಿದಾರರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕನಿಷ್ಠ ರೂ.7.37 ಲಕ್ಷ ಹಾಗೂ ಗರಿಷ್ಠ ರೂ.14.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಎಂಪಿಎಫ್ಐ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17.96 ರಿಂದ 21.2 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 10.25-ಇಂಚಿನ ಡುಯಲ್ ಡಿಸ್‌ಪ್ಲೇಗಳು ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಸ್ಕೋಡಾ ಕೈಲಾಕ್ (Skoda Kylaq):

ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದೆ. ರೂ.7.59 ಲಕ್ಷದಿಂದ ರೂ.12.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 15 ರಿಂದ 18 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top 7 Family Suvs Under Rs 10 lakh Punch Brezza Venue XUV 3XO Kylaq Magnite Kiger

ನಿಸ್ಸಾನ್ ಮ್ಯಾಗ್ನೈಟ್ (Nissan Magnite):

ಈ ಎಸ್‌ಯುವಿಯನ್ನು ಮಧ್ಯಮ ವರ್ಗದ ಜನರು ತೆಗೆದುಕೊಳ್ಳಬಹುದು. ಕನಿಷ್ಠ ರೂ.5.61 ಲಕ್ಷ ಮತ್ತು ಗರಿಷ್ಠ ರೂ.9.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Top 7 Family Suvs Under Rs 10 lakh Punch Brezza Venue XUV 3XO Kylaq Magnite Kiger

ರೆನಾಲ್ಟ್ ಕೈಗರ್ (Renault Kiger):

ಇದು ಜನಪ್ರಿಯ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ರೂ.5.76 ಲಕ್ಷದಿಂದ ರೂ.10.34 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, March 3, 2026, 15:53 [IST]
English summary
Top 7 family suvs under rs 10 lakh punch brezza venue xuv 3xo kylaq magnite kiger
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+