ಕಮ್ಮಿ ಬೆಲೆಯ 5 ಬೆಸ್ಟ್ ಹ್ಯಾಚ್ಬ್ಯಾಕ್ಗಳಿವು.. ಮೈಲೇಜ್ನಲ್ಲಿ ರಾಜಿಯಿಲ್ಲ, 5-ಸೀಟರ್.. ಆರಾಮದಾಯಕ ಪ್ರಯಾಣ!
ದೇಶೀಯವಾಗಿ ಮಾರಾಟವಾಗುವ ಹ್ಯಾಚ್ಬ್ಯಾಕ್ಗಳಿಗೆ ಪ್ರತೇಕವಾದ ಅಭಿಮಾನಿ ಬಗಳವಿದೆ. ಇವು ಸಣ್ಣ ಗಾತ್ರದ ಕಾರುಗಳಿದ್ದರೂ ಆಕರ್ಷಕವಾದ ವಿನ್ಯಾಸ ಹಾಗೂ ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. ನೀವು ಹೊಚ್ಚ ಹೊಸ ಹ್ಯಾಚ್ಬ್ಯಾಕ್ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಸ್ವಿಫ್ಟ್, ಮಾರುತಿ ಸುಜುಕಿ ಬಲೆನೊ, ಟಾಟಾ ಟಿಯಾಗೊ, ಮಾರುತಿ ಸುಜುಕಿ ವ್ಯಾಗನ್ಆರ್ ಹಾಗೂ ಟೊಯೊಟಾ ಗ್ಲಾನ್ಜಾಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಇದೊಂದು ಜನಪ್ರಿಯ ಹ್ಯಾಚ್ಬ್ಯಾಕ್ ಆಗಿದೆ. ಅದಕ್ಕೆ ತಕ್ಕಂತೆ ಕೈಗೆಟುಕುವ ದರದಲ್ಲೂ ಲಭ್ಯವಿದೆ. ಕನಿಷ್ಠ ರೂ.5.79 ಲಕ್ಷ ಮತ್ತು ರೂ.8.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್ ಮೆಟಾಲಿಕ್, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಎಂಎಂ ವೀಲ್ಬೇಸ್ನ್ನು ಒಳಗೊಂಡಿದೆ.

ನೂತನ 'ಸ್ವಿಫ್ಟ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್ಜಿ ಎಂಜಿನ್ನ್ನು ಹೊಂದಿದೆ. 24 ರಿಂದ 33 ಕಿಲೋಮೀಟರ್ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ವೈರ್ಲೆಸ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್ಬ್ಯಾಗ್ಗಳನ್ನು ಹೊಂದಿದೆ.
ಮಾರುತಿ ಸುಜುಕಿ ಬಲೆನೊ (Maruti Suzuki Baleno):
ಈ ಕಾರಿಗೆ ಫುಲ್ ಡಿಮ್ಯಾಂಡ್ ಇದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಒಪ್ಯುಲೆಂಟ್ ರೆಡ್ ಮತ್ತು ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಎಂಎಂ ವೀಲ್ಬೇಸ್ನ್ನು ಹೊಂದಿದೆ.

ಹೊಸ 'ಬಲೆನೊ'ದಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್ಜಿ ಎಂಜಿನ್ನ್ನು ಒಳಗೊಂಡಿದೆ. 22 ರಿಂದ 30 ಕಿಲೋಮೀಟರ್ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ಪವರ್ ಸ್ಟೀರಿಂಗ್ ಹಾಗೂ ಯುಎಸ್ಬಿ ಚಾರ್ಜಿಂಗ್ ಪೋರ್ಟ್ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್ಬ್ಯಾಗ್ಗಳನ್ನು ಪಡೆದಿದೆ.
ಟಾಟಾ ಟಿಯಾಗೊ (Tata Tiago):
ಇದು ಪ್ರಖ್ಯಾತ ಹ್ಯಾಚ್ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. ಕನಿಷ್ಠ ರೂ.4.57 ಲಕ್ಷ ಮತ್ತು ಗರಿಷ್ಠ ರೂ.7.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್ಜಿ ಎಂಜಿನ್ನ್ನು ಪಡೆದಿದೆ. 19 ರಿಂದ 28 ಕಿಲೋಮೀಟರ್ವರಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಡುಯಲ್ ಏರ್ಬ್ಯಾಗ್ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR):
ಈ ಕಾರು ಹ್ಯಾಚ್ಬ್ಯಾಕ್ ವಿಭಾಗದಲ್ಲೇ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದೆ. ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 5 ಆಸನಗಳನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್, 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್ಜಿ ಎಂಜಿನ್ನ್ನು ಹೊಂದಿದೆ. 23 ರಿಂದ 34 ಕಿಲೋಮೀಟರ್ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ 6-ಏರ್ಬ್ಯಾಗ್ಗಳನ್ನು ಒಳಗೊಂಡಿದೆ.

ಟೊಯೊಟಾ ಗ್ಲಾನ್ಜಾ (Toyota Glanza):
ಇದೊಂದು ವಿಶ್ವಾಸಾರ್ಹ ಹ್ಯಾಚ್ಬ್ಯಾಕ್ ಆಗಿದೆ. ಕನಿಷ್ಠ ರೂ.6.40 ಲಕ್ಷ ಹಾಗೂ ಗರಿಷ್ಠ ರೂ.9 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್ಜಿ ಎಂಜಿನ್ನ್ನು ತನ್ನದಾಗಿಸಿಕೊಂಡಿದೆ. 22.35 ರಿಂದ 30.61 ಕಿಲೋಮೀಟರ್ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & 6-ಏರ್ಬ್ಯಾಗ್ಗಳನ್ನು ಪಡೆದಿದೆ.


Click it and Unblock the Notifications








