Toyota: ಮುಗಿಬಿದ್ದ ಜನ.. ಅಬ್ಬರಿಸಿದ ಟೊಯೊಟಾ.. ಪ್ರತಿದಿನ 1,200 ಕಾರುಗಳು ಸೇಲ್ಸ್.. ಫುಲ್ ಡಿಮ್ಯಾಂಡ್!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಜನಮೆಚ್ಚಿದ ವಾಹನ ತಯಾರಕ ಕಂಪನಿ ಎಂದೇ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಯಶಸ್ವಿವಾಗಿ ಮಾರಾಟಗೊಳಿಸುತ್ತಿದೆ. ಈ 2026ರ ಫೆಬ್ರವರಿಯಲ್ಲಿ ಸರಿ ಸುಮಾರು 34,034 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. 2025ರ ಇದೇ ಅವಧಿಯಲ್ಲಿ 28,414 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 20% ಪ್ರಗತಿಯಾಗಿದೆ. ಒಟ್ಟು ಮಾರಾಟದಲ್ಲಿ ದೇಶೀಯವಾಗಿ 30,737 ಯುನಿಟ್ ಹಾಗೂ ವಿದೇಶಕ್ಕೆ 3,297 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ.

ಈ ಬಗ್ಗೆ ಟೊಯೊಟಾ ಕಂಪನಿಯ ಮಾರಾಟ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಶಬರಿ ಮನೋಹರ್ ಅವರು ಪ್ರತಿಕ್ರಿಯಿಸಿದ್ದಾರೆ. 'ಇದೇ ಫೆಬ್ರವರಿ ಮಾರಾಟವು ಟೊಯೊಟಾದ ಗುಣಮಟ್ಟ ಹಾಗೂ ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಗ್ರಾಹಕರು ಹಾಗೂ ಡೀಲರ್‌ಶಿಪ್‌ಗಳ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳು' ಎಂದು ಹೇಳಿದ್ದಾರೆ.

Toyota February 2026 Sales Report

ಟೊಯೊಟಾ ಕಂಪನಿಯು ಈ ಫೆಬ್ರವರಿಯಲ್ಲಿ ಅತ್ಯುತ್ತಮವಾದ ಬೆಳವಣಿಗೆ ಸಾಧಿಸಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಇನ್ನೋವಾ ಹೈಕ್ರಾಸ್, ಇನ್ನೋವಾ ಕ್ರಿಸ್ಟಾ, ಅರ್ಬನ್ ಕ್ರೂಸರ್ ಹೈರೈಡರ್, ಅರ್ಬನ್ ಕ್ರೂಸರ್ ಟೈಸರ್, ಫಾರ್ಚುನರ್, ರೂಮಿಯನ್ ಹಾಗೂ ಗ್ಲಾನ್ಜಾ ಕಾರುಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಜೊತೆಗೆ ಇವುಗಳು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ದೀರ್ಘಕಾಲ ಬಳಕೆಯೂ ಬರುತ್ತವೆ. ಹೀಗಾಗಿ, ಮಾರಾಟವು ಅಭಿವೃದ್ಧಿಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):

ಇದೊಂದು ಪ್ರಖ್ಯಾತ ಎಂಪಿವಿಯಾಗಿದೆ. ರೂ.18.48 ಲಕ್ಷದಿಂದ ರೂ.31.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀಟರ್ ಪೆಟ್ರೋಲ್ & 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. 16 ರಿಂದ 23 ಕಿ.ಮೀ ವರೆಗೆ ಮೈಲೇಜ್‌ ಕೊಡುತ್ತದೆ. 7/ 8 ಆಸನಗಳನ್ನು ಒಳಗೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Toyota February 2026 Sales Report

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta):

ಈ ಎಂಪಿವಿಯನ್ನು ಗ್ರಾಹಕರು ಮೆಚ್ಚಿದ್ದಾರೆ. ರೂ.18.85 ಲಕ್ಷದಿಂದ ರೂ.25.67 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.4-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 9 ರಿಂದ 10.5 ಕಿ.ಮೀ ವರೆಗೆ ಮೈಲೇಜ್‌ ನೀಡುತ್ತದೆ. 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):

ಇದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.10.99 ಲಕ್ಷದಿಂದ ರೂ. 20.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್‌ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Toyota February 2026 Sales Report

ಟೊಯೊಟಾ ರೂಮಿಯನ್ (Toyota Rumion):

ಈ ಅಗ್ಗದ ಎಂಪಿವಿಗೂ ಖರೀದಿದಾರರು ಮೆಚ್ಚಿದಾರೆ. ರೂ.10.51 ಲಕ್ಷದಿಂದ ರೂ.13.86 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20.51 ರಿಂದ 26 ಕಿ.ಮೀ ವರೆಗೆ ಮೈಲೇಜ್‌ ನೀಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor):

ಇದೊಂದು ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ರೂ.7.25 ಲಕ್ಷದಿಂದ ರೂ.12.39 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20.1 ರಿಂದ 28.51 ಕಿ.ಮೀ ವರೆಗೆ ಮೈಲೇಜ್‌ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Friday, March 6, 2026, 8:30 [IST]
English summary
Toyota february 2026 sales report
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+