ಬೈಕ್‌ನಂತೆ 30 Km ಮೈಲೇಜ್.. ರೂ.6.39 ಲಕ್ಷಕ್ಕೆ ಸಿಗುತ್ತೆ.. ಆದ್ರೂ ಈ ಕಾರನ್ನು ಖರೀದಿಸಲು ಜನರಿಗೆ ಮನಸಿಲ್ಲ.. ಯಾಕೆ?

ಟೊಯೊಟಾ ಗ್ಲಾನ್ಜಾ (Toyota Glanza) ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಎಂದೇ ಖ್ಯಾತಿ ಗಳಿಸಿದೆ. ಸದ್ಯ ಈ ಕಾರಿನ ಮಾರಾಟದಲ್ಲಿ ಹಾವು - ಏಣಿ ಆಟ ಮುಂದುವರಿದಿದೆ. ಈ 2026ರ ಫೆಬ್ರವರಿಯಲ್ಲಿ ಇದೇ 'ಗ್ಲಾನ್ಜಾ' ಮಾರಾಟವು ಕುಸಿತವಾಗಿದೆ. ಒಟ್ಟು 3,212 ಯುನಿಟ್‌ಗಳನಷ್ಟೇ ಗ್ರಾಹಕರಿಗೆ ವಿತರಿಸಲಾಗಿದೆ. ಅಂದರೆ ಪ್ರತಿದಿನ 114 ಕಾರುಗಳು ಮಾತ್ರ ಮಾರಾಟವಾಗಿವೆ. 2025ರ ಫೆಬ್ರವರಿ ತಿಂಗಳಲ್ಲಿ 4,596 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -30% ಇಳಿಮುಖವಾಗಿದೆ.

ನೂತನ 'ಟೊಯೊಟಾ ಗ್ಲಾನ್ಜಾ' ಮಾರಾಟದಲ್ಲಿ ಕೆಲ ತಿಂಗಳಿಂದ ಸಾಕಷ್ಟು ಏರಿಳಿತಗಳನ್ನು ಕಾಣಲಾಗಿದೆ. ಇದೇ ಜನವರಿಯಲ್ಲಿಯೂ 2,978 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2025ರ ಡಿಸೆಂಬರ್‌ನಲ್ಲಿ 6,451 ಯುನಿಟ್‌ಗಳು, ನವೆಂಬರ್‌ನಲ್ಲಿ 5,032 ಯುನಿಟ್‌ಗಳು, ಅಕ್ಟೋಬರ್‌ನಲ್ಲಿ 6,162 ಯುನಿಟ್‌ಗಳು ಹಾಗೂ ಸೆಪ್ಟೆಂಬರ್‌ನಲ್ಲಿ 3,299 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Toyota Glanza 2026 February Sales Details

ಈ 'ಗ್ಲಾನ್ಜಾ' ಮಾರಾಟ ಸಂಖ್ಯೆಯು ಕಡಿಮೆಯಾಗಲು ನಾನಾ ಕಾರಣಗಳಿವೆ. ಬಹುತೇಕ ಗ್ರಾಹಕರು ಎಸ್‌ಯುವಿಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜೊತೆಗಿದು ಹ್ಯಾಚ್‌ಬ್ಯಾಕ್‌ ವಿಭಾಗದಲ್ಲಿಯೇ ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ಹೀಗಾಗಿ, ಮಾರಾಟವು ಕಡಿಮೆಯಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

'ಟೊಯೊಟಾ ಗ್ಲಾನ್ಜಾ' ವಿಶೇಷತೆಗಳೇನು:

ಇದು ಕನಿಷ್ಠ ರೂ.6.39 ಲಕ್ಷ ಮತ್ತು ಗರಿಷ್ಠ ರೂ.9.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಧ್ಯಮ ವರ್ಗದ ಜನರು ಸುಲಭವಾಗಿ ಖರೀದಿಸಬಹುದು. ಇ, ಎಸ್, ಎಸ್ ಮತ್ತು ವಿ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.

Toyota Glanza 2026 February Sales Details

ಈ ಕಾರು ಹೆಚ್ಚು ವಿಶಾಲವಾಗಿದೆ. 3,990 ಮಿ.ಮೀ ಉದ್ದ, 1,745 ಮಿ.ಮೀ ಅಗಲ ಹಾಗೂ 1,500 ಮಿ.ಮೀ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1,035 ಕೆಜಿ ತೂಗುತ್ತದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಇನ್‌ಸ್ಟಾ ಬ್ಲೂ ಹಾಗೂ ಸ್ಪೋರ್ಟಿನ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಟೊಯೊಟಾ ಗ್ಲಾನ್ಜಾ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್‌, 77.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Toyota Glanza 2026 February Sales Details

ಇದು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 22.35 ರಿಂದ 30.61 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 11.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5-ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ಕನೆಕ್ಟ್ಡ್-ಕಾರ್ ಟೆಕ್ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ 'ಗ್ಲಾನ್ಜಾ' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್‍ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್‌ಬೆಲ್ಟ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Thursday, March 12, 2026, 8:30 [IST]
English summary
Toyota glanza 2026 february sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+