Toyota: ಈ ಟೊಯೊಟಾ ಕಾರು ಗ್ರಾಹಕರ ಫೆವರೇಟ್‌.. 6.39 ಲಕ್ಷ ರೂಪಾಯಿ, 30 Km ಮೈಲೇಜ್!

ಟೊಯೊಟಾ ಗ್ಲಾನ್ಜಾ (Toyota Glanza) ಜನಪ್ರಿಯ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) 'ಗ್ಲಾನ್ಜಾ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 6,451 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 3,487 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 85% ಬೆಳವಣಿಗೆಯಾಗಿದೆ.

ಡಿಸೆಂಬರ್‌ನಲ್ಲಿ 'ಟೊಯೊಟಾ ಗ್ಲಾನ್ಜಾ' ಮಾರಾಟ ಸಂಖ್ಯೆಯೂ ಅಧಿಕಗೊಳ್ಳಲು ಹಲವು ಕಾರಣಗಳಿವೆ. ಸೆಪ್ಟೆಂಬರ್ 22 ರಿಂದ ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಜೊತೆಗಿದು ಹ್ಯಾಚ್‌ಬ್ಯಾಕ್‌ ಆಗಿದ್ದರೂ ನೋಡಲು ಎಸ್‌ಯುವಿಯಂತೆ ಭಾಸವಾಗುತ್ತದೆ. ಹೀಗಾಗಿ, ಮಾರಾಟವು ಹೆಚ್ಚಳಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Toyota Glanza December 2025 Sales Details

ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಇ (E), ಎಸ್ (S), ಎಸ್ (G) ಹಾಗೂ ವಿ (V) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಇನ್‌ಸ್ಟಾ ಬ್ಲೂ ಮತ್ತು ಸ್ಪೋರ್ಟಿನ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Toyota Glanza December 2025 Sales Details

ನೂತನ 'ಟೊಯೊಟಾ ಗ್ಲಾನ್ಜಾ' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀ. ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ ಮತ್ತು 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್‌, 77.5 ಪಿಎಸ್ ಅಶ್ವ ಶಕ್ತಿ ಹಾಗೂ 98.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಇದು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 22 ರಿಂದ 30 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 11.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Toyota Glanza December 2025 Sales Details

ಈ ಕಾರು 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕನೆಕ್ಟ್ಡ್ ಕಾರ್ ಟೆಕ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪ್ರೀಮಿಯಂ ಅರ್ಕಾಮಿಸ್ ಸೌಂಡ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಮತ್ತು ಕೀ-ಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ 'ಗ್ಲಾನ್ಜಾ' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲೂ ರಕ್ಷಣೆಯನ್ನು ಒದಗಿಸಬಲ್ಲದು. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್‍ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್‌ಬೆಲ್ಟ್ ಹಾಗೂ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ಬಹುಮುಖ್ಯವಾಗಿ ಮಾರುತಿ ಸುಜುಕಿ ಬಲೆನೊ, ಟಾಟಾ ಟಿಯಾಗೊ, ರೆನಾಲ್ಟ್ ಕ್ವಿಡ್, ಟಾಟಾ ಆಲ್ಟ್ರೋಜ್ ಮತ್ತು ಹ್ಯುಂಡೈ ಐ20 ಒಳಗೊಡಂತೆ ಹಲವು ಕಾರುಗಳು ಪ್ರಬಲವಾದ ಎದುರಾಳಿಯಾಗಿವೆ.

More from DriveSpark

Article Published On: Thursday, January 15, 2026, 21:13 [IST]
English summary
Toyota glanza december 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+