Toyota: ಇದು ಮಾರುತಿ ಕಾರಲ್ಲ.. 8-ಸೀಟರ್.. ಈ ಆನೆ ಗಾತ್ರದ ಟೊಯೊಟಾ ಕಾರಿಗಾಗಿ ಶೋರೂಂ ಎಡತಾಕಿದ ಗ್ರಾಹಕರು!

ಟೊಯೊಟಾ ಇನ್ನೋವಾ (Toyota Innova) ಪ್ರಮುಖ ಎಂಪಿವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ಎಲ್ಲಿಲ್ಲದ ಬೇಡಿಕೆಯಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (2026) ಉತ್ತಮ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 9,455 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 9,780 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸ್ವಲ್ಪ ಮಟ್ಟಿಗೆ ಅಂದರೆ ಶೇಕಡ -3% ಕುಸಿತವಾಗಿದೆ. ಇದು ಇನ್ನೋವಾ ಹೈಕ್ರಾಸ್ ಮತ್ತು ಇನ್ನೋವಾ ಕ್ರಿಸ್ಟಾ ಎಂಬ 2 ರೂಪದಲ್ಲೂ ಸಿಗುತ್ತದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ವಿಶೇಷತೆಗಳೇನು:

ಈ ಎಂಪಿವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ರೂ.18.48 ಲಕ್ಷದಿಂದ ರೂ.31.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಜಿ, ಜಿಎಕ್ಸ್, ವಿಎಕ್ಸ್, ಝಡ್ಎಕ್ಸ್ (ಒ) ಮತ್ತು ವಿಎಕ್ಸ್ (ಒ) ಎಂಬ ಆಕರ್ಷಕವಾದ ರೂಪಾಂತರಗಳೊಂದಿಗೂ ದೊರೆಯುತ್ತದೆ.

Toyota Innova 9 455 Mpvs Sold In 2026 January Details

ಇದು ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,850 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಇನ್ನೋವಾ ಹೈಕ್ರಾಸ್' ಬೆಲೆಗೆ ತಕ್ಕಂತೆ ಎರಡು ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಪೆಟ್ರೋಲ್ ಹಾಗೂ 2-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. ಸಿವಿಟಿ & ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 16.13 ರಿಂದ 23.24 ಕಿಲೋಮೀಟರ್‌ವರೆಗೆ ಮೈಲೇಜ್‌ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 10.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Toyota Innova 9 455 Mpvs Sold In 2026 January Details

ಈ ಎಂಪಿವಿಯು 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 300 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಪವರ್ ವಿಂಡೋಗಳು, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್ ಮತ್ತು ರೇರ್-ಎಸಿ ವೆಂಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ಇದು ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಹೇಗಿದೆ:

ಈ ಎಂಪಿವಿಯು ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ರೂ.18.85 ಲಕ್ಷದಿಂದ ರೂ.25.67 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್ ಹಾಗೂ ಅವಂತ್-ಗಾರ್ಡ್ ಬ್ರೊನ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 178 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,750 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಇನ್ನೋವಾ ಕ್ರಿಸ್ಟಾ' ಸಹ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2.4-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 9 ರಿಂದ 10.5 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು 7/ 8 ಆಸನಗಳನ್ನು ಒಳಗೊಂಡಿದೆ. ಜಾಸ್ತಿ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 300 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಮತ್ತು ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

More from DriveSpark

Article Published On: Friday, February 20, 2026, 8:44 [IST]
English summary
Toyota innova 9455 mpvs sold in 2026 january details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+