ಕಳಪೆ ಅಲ್ಲ.. ಬೆಸ್ಟ್ ಕ್ವಾಲಿಟಿ ಕಾರನ್ನೇ ಖರೀದಿಸಿ.. 5-ಸ್ಟಾರ್ ಮುಖ್ಯ.. ಈ MPV ಯಾವುದು?

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಜನಪ್ರಿಯ ಎಂಪಿವಿಯಾಗಿ ಹೊರಹೊಮ್ಮಿದೆ. ಪ್ರತಿ ತಿಂಗಳು ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat Ncap), ಇದೇ 'ಇನ್ನೋವಾ ಹೈಕ್ರಾಸ್'ನ್ನು ಅತಿ ಸುರಕ್ಷಿತ ಕಾರೆಂದು ತೀರ್ಮಾನಿಸಿದೆ. ಬನ್ನಿ.. ಈ ಎಂಪಿವಿಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಭಾರತ್ ಎನ್‌ಸಿಎಪಿಯು 'ಟೊಯೊಟಾ ಇನ್ನೋವಾ ಹೈಕ್ರಾಸ್'ನ್ನು ಹಲವು ಪರೀಕ್ಷೆಗೆ ಒಳಪಡಿಸಲಾಗಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 30 ಅಂಕಗಳನ್ನು ಪಡೆದಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಶಗಳನ್ನು ಗಳಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

Toyota Innova Hycross 5 Star Rating Car Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 6 ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಸ್ಟಾರ್ಟ್ ಅಸಿಸ್ಟ್, ರಿವರ್ಸ್ ಕ್ಯಾಮೆರಾ, ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನೂತನ 'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿಯು ಕನಿಷ್ಠ ರೂ.18.48 ಲಕ್ಷ ಹಾಗೂ ಗರಿಷ್ಠ ರೂ.31.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿ (G), ಜಿಎಕ್ಸ್ (GX), ವಿಎಕ್ಸ್ (VX) ಹಾಗೂ ಜಡ್ಎಕ್ಸ್ (ZX) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

Toyota Innova Hycross 5 Star Rating Car Details

ಇದು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಹೆಚ್ಚು ವಿಶಾಲವಾಗಿದೆ. 4,755 ಎಂಎಂ ಉದ್ದ, 1845 ಎಂಎಂ ಅಗಲ ಹಾಗೂ 1795 ಎಂಎಂ ಎತ್ತರವಿದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,730 ಕೆಜಿ ತೂಕವಿದೆ.

ಈ ಎಂಪಿವಿಯು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಪೆಟ್ರೋಲ್ ಮತ್ತು 2-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. ಸಿವಿಟಿ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16 ರಿಂದ 23 ಕಿಲೋಮೀಟರ್‌ವರೆಗೆ ಮೈಲೇಜ್‌ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಇನ್ನೋವಾ ಹೈಕ್ರಾಸ್' 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 300 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಪವರ್ ವಿಂಡೋಗಳು, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಆಟೋ ಎಸಿ, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto), ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO), ಟಾಟಾ ಸಫಾರಿ (Tata Safari) ಹಾಗೂ ಹ್ಯುಂಡೈ ಅಲ್ಕಾಜರ್ (Hyundai Alcazar) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Sunday, February 22, 2026, 17:46 [IST]
English summary
Toyota innova hycross 5 star rating car details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+