ದೊಡ್ಡ ಕಾರುಗಳಿವು.. ತುಂಬಾ ಚೆನ್ನಾಗಿವೆ.. 8-ಸೀಟರ್.. 23 Km ವರೆಗೆ ಮೈಲೇಜ್.. ಯಾವುವು ಬೆಸ್ಟ್.. ನೀವೇ ಹೇಳಿ?

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಪ್ರಮುಖ ಎಂಪಿವಿಯಾಗಿದೆ. ಇದಕ್ಕೆ ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ನೇರವಾದ ಎದುರಾಳಿಯಾಗಿದೆ. ಈ ಕಾರುಗಳು ಒಂದಕ್ಕಿಂತ ಒಂದು ಅದ್ಭುತವಾಗಿವೆ. ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ.. ಇವೆರೆಡು ನೂತನ ಎಂಪಿವಿಯ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಈ ಕಾರುಗಳು ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿವೆ. 'ಟೊಯೊಟಾ ಇನ್ನೋವಾ ಹೈಕ್ರಾಸ್' ರೂ.18.48 ಲಕ್ಷದಿಂದ ರೂ.31.30 ಲಕ್ಷ ಬೆಲೆಯನ್ನು ಒಳಗೊಂಡಿದೆ. 'ಮಾರುತಿ ಸುಜುಕಿ ಇನ್ವಿಕ್ಟೋ' ರೂ.24.97 ಲಕ್ಷದಿಂದ ರೂ.28.61 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಬೆಲೆಯ ವಿಚಾರದಲ್ಲಿ 'ಇನ್ವಿಕ್ಟೋ'ಗೆ ಹೋಲಿಸಿದರೆ, 'ಹೈಕ್ರಾಸ್'ನ ಆರಂಭಿಕ ದರವು ತುಸು ಅಗ್ಗವಾಗಿದೆ.

Toyota Innova Hycross vs Maruti Suzuki Invicto Which Mpv Best Comparison

ವಿನ್ಯಾಸ (Design):

ಇವೆರೆಡು ಎಂಪಿವಿಗಳು ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿವೆ. 'ಇನ್ನೋವಾ ಹೈಕ್ರಾಸ್' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸಾಕಷ್ಟು ವಿಶಾಲವಾಗಿದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

'ಮಾರುತಿ ಇನ್ವಿಕ್ಟೋ' ಸಹ ಉತ್ತಮವಾಗಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್, ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್, ನೆಕ್ಸಾ ಬ್ಲೂ ಹಾಗೂ ಮಿಸ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಬಹಳಷ್ಟು ವಿಶಾಲವಾಗಿದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,850 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Toyota Innova Hycross vs Maruti Suzuki Invicto Which Mpv Best Comparison

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

'ಟೊಯೊಟಾ ಇನ್ನೋವಾ ಹೈಕ್ರಾಸ್' ಮತ್ತು 'ಮಾರುತಿ ಸುಜುಕಿ ಇನ್ವಿಕ್ಟೋ' ಕಾರುಗಳೆರೆಡು 7/ 8 ಆಸನಗಳನ್ನು ಪಡೆದಿವೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 'ಇನ್ನೋವಾ ಹೈಕ್ರಾಸ್' 289 ಲೀಟರ್‌ ಮತ್ತು 'ಇನ್ವಿಕ್ಟೋ' ಕೊಂಚ ಮಟ್ಟಿಗೆ ಬೃಹದಾಕಾರದ 300 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance):

ಈ ಎಂಪಿವಿಗಳು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಟೊಯೊಟಾ ಇನ್ನೋವಾ ಹೈಕ್ರಾಸ್' 2-ಲೀಟರ್ ಪೆಟ್ರೋಲ್ ಹಾಗೂ 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. ಸಿವಿಟಿ & ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16.13 ರಿಂದ 23.24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 10.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

'ಮಾರುತಿ ಇನ್ವಿಕ್ಟೋ' 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್ನ್ನು ಒಳಗೊಂಡಿದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 23 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):

ಇವೆರೆಡು ಕಾರುಗಳು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ. 'ಇನ್ನೋವಾ ಹೈಕ್ರಾಸ್' 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸನ್‌ರೂಫ್, ರೇರ್ ಎಸಿ ವೆಂಟ್‌ಗಳು ಮತ್ತು ಆಟೋ ಎಸಿಯನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

'ಇನ್ವಿಕ್ಟೋ' 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.

More from DriveSpark

Article Published On: Monday, March 16, 2026, 21:20 [IST]
English summary
Toyota innova hycross vs maruti suzuki invicto which mpv best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+