Toyota: ಟೊಯೊಟಾ ಕಾರುಗಳು ಬೇಕೆಂದು ಹಠ ಹಿಡಿದ ಗ್ರಾಹಕರು.. ಫುಲ್ ಡಿಮ್ಯಾಂಡ್, ಗರಿಷ್ಠ ಸಂಖ್ಯೆಯಲ್ಲಿ ಸೇಲ್ಸ್!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಪ್ರಮುಖ ಕಾರು ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿವೆ. ಒಟ್ಟು 33,880 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 29,371 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 15% ಪ್ರಗತಿಯಾಗಿದೆ.

ಜನವರಿಯಲ್ಲಿ 'ಟೊಯೊಟಾ' ಕಾರುಗಳ ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇವು ಉತ್ತಮ ಇಂಧನ ದಕ್ಷತೆಗೆ ಹೆಸರುವಾಸಿಯಾಗಿವೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿವೆ. ಜೊತೆಗೆ ದೀರ್ಘಕಾಲ ಬಾಳಿಕೆಯು ಬರುತ್ತದೆ. ಹೀಗಾಗಿ, ಮಾರಾಟ ಪ್ರಮಾಣವು ಹೆಚ್ಚಳಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Toyota January 2026 Sales Report Urban Cruiser EV Soon Launch Details

ಸದ್ಯ, ಭಾರತದಲ್ಲಿ ಟೊಯೊಟಾ ಕಂಪನಿಯು 10ಕ್ಕೂ ಹೆಚ್ಚು ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಅವುಗಳಲ್ಲಿ ಇನ್ನೋವಾ ಹೈಕ್ರಾಸ್, ಇನ್ನೋವಾ ಕ್ರಿಸ್ಟಾ, ಅರ್ಬನ್ ಕ್ರೂಸರ್ ಹೈರೈಡರ್, ಫಾರ್ಚುನರ್, ಅರ್ಬನ್ ಕ್ರೂಸರ್ ಟೈಸರ್, ಗ್ಲಾನ್ಜಾ, ರೂಮಿಯನ್ ಮತ್ತು ಹಿಲಕ್ಸ್ ಕಾರುಗಳು ಪ್ರಮುಖವಾಗಿವೆ.

ಈಚೆಗೆ ಟೊಯೊಟಾದಿಂದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಅನಾವರಣ:

ಇತ್ತೀಚೆಗೆ ನೂತನ 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' ಕಾರನ್ನು ಪರಿಚಯಿಸಲಾಗಿತ್ತು. ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.18 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲೈಟ್‌ಗಳನ್ನು ಹೊಂದಿದೆ.

Toyota January 2026 Sales Report Urban Cruiser EV Soon Launch Details

ಇದು ಕೆಫೆ ವೈಟ್, ಬ್ಲ್ಯೂಯಿಶ್ ಬ್ಲ್ಯಾಕ್, ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್ ಮತ್ತು ಲ್ಯಾಂಡ್ ಬ್ರೀಜ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,285 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,640 ಎಂಎಂ ಎತ್ತರವಿದೆ. 2,700 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಈ ಎಸ್‌ಯುವಿಯು ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಮಾರುತಿ ಸುಜುಕಿ ಇ ವಿಟಾರಾದ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ. 49 ಹಾಗೂ 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

Toyota January 2026 Sales Report Urban Cruiser EV Soon Launch Details

ಹೊಸ 'ಅರ್ಬನ್ ಕ್ರೂಸರ್ ಎಬೆಲ್ಲಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 310 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಮಲ್ಟಿ ಯುಎಸ್‌‍ಬಿ ಪೋರ್ಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Sunday, February 1, 2026, 22:24 [IST]
English summary
Toyota january 2026 sales report urban cruiser ev soon launch details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+