ನಿನ್ನೆಯಷ್ಟೇ ಪರಿಚಯ.. 500+ Km ರೇಂಜ್, ನೂತನ ಟೊಯೊಟಾ SUV ಕುರಿತ ಪ್ರಮುಖಾಂಶಗಳಿವು.. ಯಾರು ಹೇಳಲ್ಲ!

ನಿನ್ನೆ ಹೊಚ್ಚ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ (Toyota Urban Cruiser Ebella) ಕಾರನ್ನು ಪರಿಚಯಿಸಲಾಗಿದೆ. ಈಗಾಗಲೇ, ಬುಕ್ಕಿಂಗ್‌ ಶುರುವಾಗಿದ್ದು, ಆಸಕ್ತ ಗ್ರಾಹಕರು ರೂ.25,000 ಮುಂಗಡ ಹಣ ಪಾವತಿಸುವ ಮೂಲಕ ಕಾಯ್ದಿರಿಸಬಹುದು. ನೀವು ನೂತನ ಎಲೆಕ್ಟ್ರಿಕ್ ಎಸ್‌ಯುವಿಯೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಇದೇ 'ಅರ್ಬನ್ ಕ್ರೂಸರ್ ಎಬೆಲ್ಲಾ' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ (Price):

'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ. ಕನಿಷ್ಠ ರೂ.18 ಲಕ್ಷ ಮತ್ತು ಗರಿಷ್ಠ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದವರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

Toyota Urban Cruiser Ebella Suv Top Things You Should Must Know

ವಿನ್ಯಾಸ & ಬಣ್ಣಗಳು (Design & Colours):

ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಬಂಪರ್‌ಗಳನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಕೆಫೆ ವೈಟ್, ಬ್ಲ್ಯೂಯಿಶ್ ಬ್ಲ್ಯಾಕ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್ ಹಾಗೂ ಲ್ಯಾಂಡ್ ಬ್ರೀಜ್ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಸುತ್ತಳತೆ (Dimension):

ಇದು 'ಮಾರುತಿ ಸುಜುಕಿ ಇ ವಿಟಾರಾ'ದ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ವಿಶಾಲವಾಗಿಯೂ ಇದೆ. 4,285 ಮಿ.ಮೀ ಉದ್ದ, 1,800 ಮಿ.ಮೀ ಅಗಲ ಹಾಗೂ 1,640 ಎತ್ತರವಿದೆ. ಜೊತೆಗೆ 2,700 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Toyota Urban Cruiser Ebella Suv Top Things You Should Must Know

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ನೂತನ 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' ಎಲೆಕ್ಟ್ರಿಕ್ ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 310 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರುವ ನಿರೀಕ್ಷೆಯಿದೆ.

ಕಾರ್ಯಕ್ಷಮತೆ (Performance):

ಈ ಕಾರು ಎರಡು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ ಎಂದು ಕಂಪನಿ ಹೇಳಿದೆ.

Toyota Urban Cruiser Ebella Suv Top Things You Should Must Know

ವೈಶಿಷ್ಟ್ಯಗಳು (Features):

ಇದು ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 12-ಕಲರ್ ಆಂಬಿಯೆಂಟ್ ಲೈಟಿಂಗ್, ಜೆಬಿಎಲ್ ಸೌಂಡ್ ಸಿಸ್ಟಮ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಮಲ್ಟಿ ಯುಎಸ್‌‍ಬಿ ಪೋರ್ಟ್‌ಗಳು ಹಾಗೂ ಇನ್ ಕ್ಯಾಬಿನ್ ಏರ್ ಪ್ಯೂರಿಫೈಯರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಹೊಸ 'ಅರ್ಬನ್ ಕ್ರೂಸರ್ ಎಬೆಲ್ಲಾ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಯಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು, ಆಲ್-ವೀಲ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Wednesday, January 21, 2026, 11:35 [IST]
English summary
Toyota urban cruiser ebella suv top things you should must know
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+