Toyota: 543 Km ಓಡುತ್ತೆ.. ಟೊಯೊಟಾದ ಮೊದಲ ಎಲೆಕ್ಟ್ರಿಕ್ ಕಾರು ಬಂದೆ ಬಿಡ್ತು, ಬೆಲೆ ಇಷ್ಟೇನಾ?

ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ ಇವಿ (Toyota Urban Cruiser Ebella EV) ಅದ್ದೂರಿಯಾಗಿ ಅನಾವರಣಗೊಂಡಿದೆ. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅತಿ ಶೀಘ್ರದಲ್ಲೇ ಬಿಡುಗಡೆಯೂ ಆಗಲಿದೆ. ಬನ್ನಿ.. ನೂತನ 'ಅರ್ಬನ್ ಕ್ರೂಸರ್ ಎಬೆಲ್ಲಾ' ಯಾವೆಲ್ಲ ವಿಶೇಷತೆಗಳಿಗೆ ಸಾಕ್ಷಿಯಾಗಿದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಇಂದಿನಿಂದಲೇ ಹೊಚ್ಚ ಹೊಸ 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' ಎಸ್‌ಯುವಿಗಾಗಿ ಬುಕ್ಕಿಂಗ್‌ನ್ನು ತೆರೆಯಲಾಗಿದೆ. ಆಸಕ್ತರು ಸಮೀಪದ ಶೋರೂಂ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.25,000 ಮುಂಗಡ ಹಣ ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು.

Toyota Urban Cruiser Ebella Suv Unveiled In India 543 Km Range Details

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. 'ಮಾರುತಿ ಸುಜುಕಿ ಇ ವಿಟಾರಾ'ದ ರೀ-ಬ್ಯಾಡ್ಜ್ ಮಾಡೆಲ್ ಕೂಡ ಆಗಿದೆ. ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ನವೀನವಾದ ಬಂಪರ್‌ಗಳನ್ನು ಪಡೆದಿದೆ. ಇದರೊಂದಿಗೆ ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 18-ಇಂಚಿನ ಬ್ಲ್ಯಾಕ್ ಅಲಾಯ್ ವೀಲ್‌ಗಳನ್ನು ಪಡೆದಿದೆ. 2,700 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದು ಕೆಫೆ ವೈಟ್, ಬ್ಲ್ಯೂಯಿಶ್ ಬ್ಲ್ಯಾಕ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್ ಮತ್ತು ಲ್ಯಾಂಡ್ ಬ್ರೀಜ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು.

Toyota Urban Cruiser Ebella Suv Unveiled In India 543 Km Range Details

ನೂತನ ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' ಎಲೆಕ್ಟ್ರಿಕ್ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರುವ ಮಾಡೆಲ್, 144 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 189 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರುವ ಮಾಡೆಲ್, 174 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 189 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು ಭರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ ಎಂದು ಕಂಪನಿಯು ಹೇಳಿಕೊಂಡಿದೆ.

Toyota Urban Cruiser Ebella Suv Unveiled In India 543 Km Range Details

ಹೊಸ 'ಅರ್ಬನ್ ಕ್ರೂಸರ್ ಎಬೆಲ್ಲಾ' ಕಾರು ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 12-ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ಜೆಬಿಎಲ್ ಸೌಂಡ್ ಸಿಸ್ಟಮ್‌ನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್-ವೀಲ್ ಬ್ರೇಕ್‌ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಇನ್ನು 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ ಇವಿ' ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ರೂ.18 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್, ಟಾಟಾ ಕರ್ವ್ ಇವಿ, ಎಂಜಿ ಜಡ್ಎಸ್ ಇವಿ ಹಾಗೂ ಮಹೀಂದ್ರಾ ಬಿಇ 6ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Tuesday, January 20, 2026, 12:26 [IST]
English summary
Toyota urban cruiser ebella suv unveiled in india 543 km range details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+