ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ vs ಟಾಟಾ ನೆಕ್ಸಾನ್ ಇವಿ: ಯಾವುದು ಬೆಸ್ಟ್.. ನೀವೇ ಹೇಳಿ?

ನಿನ್ನೆಯಷ್ಟೇ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ (Toyota Urban Cruiser Ebella) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅನಾವರಣಗೊಳಿಸಲಾಗಿದೆ. ಇದಕ್ಕೆ ಟಾಟಾ ನೆಕ್ಸಾನ್ ಇವಿ (Tata Nexon EV) ಪ್ರಬಲವಾದ ಪ್ರತಿಸ್ಪರ್ಧಿಯಾಗಲಿದೆ. ಈ ಕಾರುಗಳು ಹೆಚ್ಚು ಅತ್ಯಾಕರ್ಷಕವಾಗಿದ್ದು, ಹತ್ತಾರು ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ ಇವೆರೆಡು ಎಲೆಕ್ಟ್ರಿಕ್ ಎಸ್‌ಯುವಿಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ.

ಬೆಲೆ (Price):

ಸದ್ಯಕ್ಕೆ 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ'ದ ಬೆಲೆಯನ್ನು ಘೋಷಣೆ ಮಾಡಲಾಗಿಲ್ಲ. ಆದರೂ ರೂ.18 ಲಕ್ಷದಿಂದ ರೂ.21 ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ನೂತನ 'ಟಾಟಾ ನೆಕ್ಸಾನ್ ಇವಿ' ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ ಅರ್ಬನ್ ಕ್ರೂಸರ್ ಎಬೆಲ್ಲಾಗೆ ಹೋಲಿಕೆ ಮಾಡಿದರೆ, ಬಹುತೇಕ ನೆಕ್ಸಾನ್ ಇವಿಯೇ ಅಗ್ಗವಾಗಿರಲಿದೆ.

Toyota Urban Cruiser Ebella Vs Tata Nexon EV Which Car Best Details

ವಿನ್ಯಾಸ (Design):

ಇವೆರೆಡು ಕಾರುಗಳು ಒಂದಕ್ಕಿಂತ ಒಂದು ಅದ್ಬುತವಾದ ವಿನ್ಯಾಸವನ್ನು ಒಳಗೊಂಡಿವೆ. 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ಕೆಫೆ ವೈಟ್, ಬ್ಲ್ಯೂಯಿಶ್ ಬ್ಲ್ಯಾಕ್, ಗೇಮಿಂಗ್ ಗ್ರೇ ಹಾಗೂ ಸ್ಪೋರ್ಟಿನ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 2,700 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

'ಟಾಟಾ ನೆಕ್ಸಾನ್ ಇವಿ'ಯು ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಫ್ಲೇಮ್ ರೆಡ್, ಇಂಟೆನ್ಸಿ ಟೀಲ್, ಕ್ರಿಯೇಟಿವ್ ಓಷನ್ ಮತ್ತು ಎಂಪವರ್ಡ್ ಡಾರ್ಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 2,498 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Toyota Urban Cruiser Ebella Vs Tata Nexon EV Which Car Best Details

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ನೂತನ 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' ಹಾಗೂ 'ಟಾಟಾ ನೆಕ್ಸಾನ್ ಇವಿ' ಕಾರುಗಳೆರೆಡು 5 ಆಸನಗಳನ್ನು ಒಳಗೊಂಡಿವೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಅರ್ಬನ್ ಕ್ರೂಸರ್ ಎಬೆಲ್ಲಾ 310 ಲೀಟರ್‌ ಮತ್ತು ನೆಕ್ಸಾನ್ ಇವಿ 350 ಬೂಟ್ ಸ್ಪೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance):

ಇವೆರೆಡು ಎಲೆಕ್ಟ್ರಿಕ್ ಎಸ್‌ಯುವಿಗಳು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿವೆ. 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

'ಟಾಟಾ ನೆಕ್ಸಾನ್ ಇವಿ'ಯು 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ನೆಕ್ಸಾನ್ ಇವಿಗೆ ಹೋಲಿಸಿದರೆ ಅರ್ಬನ್ ಕ್ರೂಸರ್ ಎಬೆಲ್ಲಾ ಹೆಚ್ಚು ದೂರ ಕ್ರಮಿಸಬಲ್ಲದು.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಈ ಕಾರುಗಳು ಅದ್ಬುತವಾದ ಕ್ಯಾಬಿನ್ ವಿನ್ಯಾಸ ಹೊಂದಿದ್ದು, ಅದಕ್ಕೆ ತಕ್ಕಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. 'ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ' 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಜೆಬಿಎಲ್ ಸೌಂಡ್ ಸಿಸ್ಟಮ್‌ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

'ಟಾಟಾ ನೆಕ್ಸಾನ್ ಇವಿ' 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಟೋ ಎಸಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಸನ್‌ರೂಫ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾನ್ನು ಹೊಂದಿದೆ.

More from DriveSpark

Article Published On: Wednesday, January 21, 2026, 13:23 [IST]
English summary
Toyota urban cruiser ebella vs tata nexon ev which car best details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+