Toyota: ಗಟ್ಟಿಮುಟ್ಟಾದ ಕಾರಿದು.. 28 ಕಿ.ಮೀ ಮೈಲೇಜ್, 10.99 ಲಕ್ಷ ರೂಪಾಯಿ.. 5-ಸೀಟರ್, ಮನಸೋತ ಗ್ರಾಹಕರು!
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಮೆಚ್ಚಿದ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) 'ಅರ್ಬನ್ ಕ್ರೂಸರ್ ಹೈರೈಡರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 9,156 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 4,941 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 85% ಬೆಳವಣಿಗೆಯಾಗಿದೆ.
'ಟೊಯೊಟಾ ಹೈರೈಡರ್' ವಿಶೇಷತೆಗಳೇನು:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.10.99 ಲಕ್ಷ ಹಾಗೂ ಗರಿಷ್ಠ ರೂ. 20.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಇ (E), ಎಸ್ (S), ಜಿ (G) ಹಾಗೂ ವಿ (V) ಎಂಬ 4 ರೂಪಾಂತರಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಎಸ್‌ಯುವಿಯು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 17-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್, ಕೇವ್ ಬ್ಲ್ಯಾಕ್ ಹಾಗೂ ಸ್ಪೀಡಿ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಹೊಸ 'ಅರ್ಬನ್ ಕ್ರೂಸರ್ ಹೈರೈಡರ್' ಸಾಕಷ್ಟು ದೊಡ್ಡದಾಗಿದೆ. 4,365 ಮಿ.ಮೀ ಉದ್ದ, 1,795 ಮಿ.ಮೀ ಅಗಲ ಹಾಗೂ 1,645 ಮಿ.ಮೀ ಎತ್ತರವಿದೆ. ಜೊತೆಗೆ 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1,290 ಕೆಜಿ ತೂಕವಿದೆ.

ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಮೂರು ಪವರ್‌ಟ್ರೇನ್‌ನ್ನು ಹೊಂದಿದೆ. ಸ್ಟ್ಯಾಂಡರ್ಡ್ 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 141 ಎನ್ಎಂ ಹೊರಹಾಕುತ್ತದೆ.
ಇನ್ನೊಂದು 1.5-ಲೀ ಸಿಎನ್‌ಜಿ ಎಂಜಿನ್, 88 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 121.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19 ರಿಂದ 28 ಕಿಲೋಮೀಟರ್‌ವರೆಗೂ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 12.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ನೂತನ 'ಹೈರೈಡರ್' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಯಿಂದಲೂ ಎಲ್ಲೆಡೆ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಯ ಸಲುವಾಗಿ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ರೇರ್-ಪಾರ್ಕಿಂಗ್ ಸೆನ್ಸರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








