Toyota: ಇದು ಗಟ್ಟಿಮುಟ್ಟದ ಕಾರಿದು.. 28 Km ಮೈಲೇಜ್, ಬರೀ 10.95 ಲಕ್ಷ.. ಸಾಲು ಕಟ್ಟಿದ ಗ್ರಾಹಕರು!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಪ್ರಿಯ ಎಸ್‌ಯುವಿ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ಫುಲ್ ಡಿಮ್ಯಾಂಡ್ ಇದ್ದು, ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) ಸಹ 'ಅರ್ಬನ್ ಕ್ರೂಸರ್ ಹೈರೈಡರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 7022 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 4770 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 47.21% ಪ್ರಗತಿಯಾಗಿದೆ.

ಡಿಸೆಂಬರ್‌ನಲ್ಲಿ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್‌ ತಿಂಗಳಲ್ಲಿ 'ಜಿಎಸ್‌ಟಿ' ಪರಿಷ್ಕರಣಿಗೊಂಡಿತ್ತು. ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ನೂತನ 'ಅರ್ಬನ್ ಕ್ರೂಸರ್ ಹೈರೈಡರ್' ವಿವಿಧ ಹೊಸತನಗಳಿಗೂ ಸಾಕ್ಷಿಯಾಗಿದೆ. ಹೀಗಾಗಿ, ಮಾರಾಟ ಸಂಖ್ಯೆಯೂ ಹೆಚ್ಚಳಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Toyota Urban Cruiser Hyryder Suv December 2025 Sales Details

ಹೊಸ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ವಿಶೇಷತೆಗಳೇನು:

ಇದು ಕೈಗೆಟುಕುವ ದರದಲ್ಲೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಇ (E), ಎಸ್ (S), ಜಿ (G) ಹಾಗೂ ವಿ (V) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 17-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್ ಮತ್ತು ಸ್ಪೀಡಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Toyota Urban Cruiser Hyryder Suv December 2025 Sales Details

ನೂತನ 'ಅರ್ಬನ್ ಕ್ರೂಸರ್ ಹೈರೈಡರ್' ಶಕ್ತಿಯುತವಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.5-ಲೀ. ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 141 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಇನ್ನೊಂದು 1.5-ಲೀ. ಸಿಎನ್‌ಜಿ ಎಂಜಿನ್‌, 88 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19 28 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 12.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Toyota Urban Cruiser Hyryder Suv December 2025 Sales Details

ಹೊಸ 'ಅರ್ಬನ್ ಕ್ರೂಸರ್ ಹೈರೈಡರ್' 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Monday, January 12, 2026, 11:15 [IST]
English summary
Toyota urban cruiser hyryder suv december 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+