ಕಮ್ಮಿ ಬೆಲೆ.. 28 ಕಿ.ಮೀ ಮೈಲೇಜ್‌ನ ಟೊಯೊಟಾ ಕಾರಿದು.. ಮನಸೋತ ಜನ!

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಜನಮೆಚ್ಚಿದ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಜನವರಿಯಲ್ಲಿಯೂ ಉತ್ತಮವಾಗಿಯೇ ಮಾರಾಟಗೊಂಡಿದೆ. ಒಟ್ಟು 2,521 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2025ರ ಇದೇ ಅವಧಿಯಲ್ಲಿ 2,470 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 2% ಪ್ರಗತಿಯಾಗಿದೆ.

'ಟೊಯೊಟಾ ಟೈಸರ್' ವಿಶೇಷತೆಗಳೇನು:

ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.7.25 ಲಕ್ಷ ಹಾಗೂ ಗರಿಷ್ಠ ರೂ.12.39 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ, ಜಿ, ಎಸ್ ಹಾಗೂ ಎಸ್ ಪ್ಲಸ್ ಎಂಬ ಆಕರ್ಷಕವಾದ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Toyota Urban Cruiser Taisor January 2026 Sales Details

ಇದು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ತುಂಬಾ ಚೆನ್ನಾಗಿರುವ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಲುಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್, ಕೆಫೆ ವೈಟ್, ಗೇಮಿಂಗ್ ಗ್ರೇ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಟೊಯೊಟಾ ಟೈಸರ್' ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 3,995 ಎಂಎಂ ಉದ್ದ, 1,765 ಎಂಎಂ ಅಗಲ ಹಾಗೂ 1,550 ಎಂಎಂ ಎತ್ತರವಿದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 1,060 ಕೆಜಿ ತೂಕವಿದೆ.

Toyota Urban Cruiser Taisor January 2026 Sales Details

ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ ಮತ್ತು 148 ಎನ್ಎಂ ಹೊರಹಾಕುತ್ತದೆ. ಮತ್ತೊಂದು 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ ಹಾಗೂ 113 ಎನ್ಎಂ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

Toyota Urban Cruiser Taisor January 2026 Sales Details

ಇನ್ನೊಂದು 1.2-ಲೀ. ಸಿಎನ್‌ಜಿ ಎಂಜಿನ್, 77.5 ಪಿಎಸ್ ಅಶ್ವ ಶಕ್ತಿ ಮತ್ತು 98.5 ಎನ್ಎಂ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವುದೇ ಸಾಮಾನ್ಯ ಬೈಕ್‌ಗೆ ಕಮ್ಮಿಯಿಲ್ಲದ ರೀತಿಯಲ್ಲಿ 20.1 ರಿಂದ 28.51 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10.98 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಟೈಸರ್' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನಗಳನ್ನು ಪಡೆದಿದ್ದು. ಪ್ರಯಾಣಿಕರು ಆರಾಮದಾಯಕ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ - ಮೌಂಟೆಡ್ ಕಂಟ್ರೋಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ರೇರ್ ಎಸಿ ವೆಂಟ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಎಸ್‌ಯುವಿಯು ಸುರಕ್ಷತೆಯಿಂದಲೂ ಮನೆ ಮಾತಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Tuesday, February 10, 2026, 15:56 [IST]
English summary
Toyota urban cruiser taisor january 2026 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+