ಸ್ಪರ್ಧೆಗೆ ಬಿದ್ದವೆ ಪ್ರಖ್ಯಾತ ಕಾರು ಬ್ರ್ಯಾಂಡ್‌ಗಳು: ಅತಿ ಶೀಘ್ರದಲ್ಲೇ 3 ಹೊಸ ಎಸ್‌ಯುವಿಗಳು ಮಾರಾಟಕ್ಕೆ.. ಬೆಲೆ ಎಷ್ಟು?
2026ರ ಜನವರಿ ಕಾರು ತಯಾರಕ ಕಂಪನಿಗಳಿಗೆ ಮಹತ್ವದ ತಿಂಗಳಾಗಿದೆ. ಮೊದಲ 15 ದಿನದಲ್ಲೇ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್‌ಒ ಇವಿ, ಟಾಟಾ ಸಫಾರಿ ಪೆಟ್ರೋಲ್, ಟಾಟಾ ಹ್ಯಾರಿಯರ್ ಪೆಟ್ರೋಲ್ ಟಾಟಾ ಪಂಚ್ ಫೇಸ್‌ಲಿಫ್ಟ್ ಕಾರುಗಳು ಬಿಡುಗಡೆಗೊಂಡಿವೆ. ಇನ್ನು ಈ ತಿಂಗಳ ಅಂತ್ಯದೊಳಗೆ ಮಾರುತಿ ಸುಜುಕಿ ಇ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಇವಿ ಹಾಗೂ ರೆನಾಲ್ಟ್ ಡಸ್ಟರ್ ಎಸ್‌ಯುವಿಗಳ ಪರಿಚಯಿಸಲಾಗುತ್ತದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):
ಇದೇ ತಿಂಗಳು 'ಇ-ವಿಟಾರಾ'ವನ್ನು ಮಾರಾಟಕ್ಕೆ ತರಲಾಗುತ್ತದೆ. ಆದರೆ ಖಚಿತ ದಿನಾಂಕದ ಬಗ್ಗೆ ಕಂಪನಿಯು ಯಾವುದೇ ವಿವರವನ್ನು ಬಹಿರಂಗಪಡಿಸಿಲ್ಲ. ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ ಹಾಗೂ ಬ್ಲ್ಯೂಯಿಶ್ ಬ್ಲ್ಯಾಕ್ ಬಣ್ಣಗಳೊಂದಿಗೂ ಲಭ್ಯವಾಗಲಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಎಲೆಕ್ಟ್ರಿಕ್ ಎಸ್‌ಯುವಿಯು 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ ಎಂದು ಕಂಪನಿಯು ಹೇಳಿಕೊಂಡಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.
ನೂತನ 'ಮಾರುತಿ ಇ-ವಿಟಾರಾ' 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಲ್-ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 2-ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಇವಿ (Toyota Urban Cruiser EV):
ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಜನವರಿ 19 ಅಥವಾ 20 ರಂದು ಬಿಡುಗಡೆಗೊಳ್ಳಲಿದೆ ಎಂದು ವರದಿಯಾಗಿದೆ. ರೂ.18 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ಹೆಚ್ಚು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿರುವ ಸಾಧ್ಯತೆಯಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ಹೊಸ 'ಅರ್ಬನ್ ಕ್ರೂಸರ್ ಇವಿ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ಗೆ ರೇಂಜ್ (ಮೈಲೇಜ್) ನೀಡುವ ನಿರೀಕ್ಷೆಯಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಲ್-ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಹಾಗೂ 7-ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎನ್ನಲಾಗಿದೆ.

ರೆನಾಲ್ಟ್ ಡಸ್ಟರ್ (Renault Duster):
ಈ ಕಾರು ಜನವರಿ 26ರ ಗಣರಾಜ್ಯೋತ್ಸವದಂದು ಅನಾವರಣಗೊಳ್ಳಲಿದೆ. ಆ ಬಳಿಕ ಕೆಲವೇ ದಿನಗಳಲ್ಲಿ ಮಾರಾಟಕ್ಕೆ ಬರಲಿದೆ. ರೂ.12 ಲಕ್ಷದಿಂದ ರೂ.18 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿರುವ ಸಾಧ್ಯತೆಯಿದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡರಲಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,673 ಎಂಎಂ ವೀಲ್‌ಬೇಸ್‌ನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ನೂತನ 'ಡಸ್ಟರ್' 1.0-ಲೀಟರ್ ಪೆಟ್ರೋಲ್, 1.3-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದುಕೊಂಡಿರಲಿದೆ. 24 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ಕೊಡಬಹುದು ಎಂದು ಅಂದಾಜಿಸಲಾಗಿದೆ. 5 ಆಸನಗಳನ್ನು ಒಳಗೊಂಡಿರಲಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಸ್ಕ್ರೀನ್ ಹಾಗೂ 6-ಏರ್‌ಬ್ಯಾಗ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿರುವ ಸಾಧ್ಯತೆಯಿದೆ.


Click it and Unblock the Notifications








