ಸಿದ್ದರಾಗಿರಿ.. ಈ 2026ರ ಫೆಬ್ರವರಿಯಲ್ಲಿ 5 ಹೊಸ ಕಾರುಗಳು ಬಿಡುಗಡೆ, ಬೆಲೆ ಎಷ್ಟು.. ವಿಶೇಷತೆಗಳೇನು?

2026ರ 'ಫೆಬ್ರವರಿ' ತಿಂಗಳು ವಾಹನ ತಯಾರಕ ಕಂಪನಿಗಳಿಗೆ ಹೆಚ್ಚು ಮಹತ್ವದಿಂದ ಕೂಡಿದೆ. ಇದೇ ಅವಧಿಯಲ್ಲಿ ಮಾರುತಿ ಸುಜುಕಿ ಇ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ, ಎಂಜಿ ಮೆಜೆಸ್ಟರ್, ನಿಸ್ಸಾನ್ ಟೆಕ್ಟನ್ ಹಾಗೂ ಗ್ರಾವೈಟ್ ಕಾರುಗಳು ಅದ್ದೂರಿ ಬಿಡುಗಡೆಗೊಳ್ಳಲಿವೆ. ನೂತನ ಕಾರುಗಳ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಬನ್ನಿ.. ಇವುಗಳ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):

ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, ಈ ಫೆಬ್ರವರಿಯಲ್ಲಿಯೇ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಆದರೆ, ನಿರ್ದಿಷ್ಟ ದಿನಾಂಕದ ಬಗ್ಗೆ ಯಾವುದೇ ಖಚಿತ ವಿವರಗಳನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಹೊಸ 'ಇ-ವಿಟಾರಾ' ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

Upcoming 5 Cars in India February 2026 E Vitara Urban Cruiser Ebella Majestor Tekton And Gravite

ನೂತನ 'ಇ-ವಿಟಾರಾ' 49 ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಲ್ ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ (Toyota Urban Cruiser Ebella):

ಈ ಎಲೆಕ್ಟ್ರಿಕ್ ಎಸ್‌ಯುವಿಯು ಇದೇ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಶೀಘ್ರವೇ ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ. ರೂ.18 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

Upcoming 5 Cars in India February 2026 E Vitara Urban Cruiser Ebella Majestor Tekton And Gravite

ಹೊಸ 'ಎಬೆಲ್ಲಾ' 49 ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಮಲ್ಟಿ ಯುಎಸ್‌‍ಬಿ ಪೋರ್ಟ್‌ಗಳಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಆಲ್-ವೀಲ್ ಬ್ರೇಕ್‌ಗಳನ್ನು ಹೊಂದಿದೆ.

ಎಂಜಿ ಮೆಜೆಸ್ಟರ್ (MG Majestor):

ಇದೇ 12ರಂದು ನೂತನ ಮೆಜೆಸ್ಟರ್ ಎಸ್‌ಯುವಿಯು ಬಿಡುಗಡೆಯಾಗಲಿದೆ. ರೂ.38.33 ಲಕ್ಷದಿಂದ ರೂ.43.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ನಿರೀಕ್ಷೆಯಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಲಿದೆ. 2-ಲೀಟರ್ ಟ್ವಿನ್-ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿರಲಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್ ಹಾಗೂ 360-ಡಿಗ್ರಿ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

Upcoming 5 Cars in India February 2026 E Vitara Urban Cruiser Ebella Majestor Tekton And Gravite

ನಿಸ್ಸಾನ್ ಟೆಕ್ಟನ್ (Nissan Tekton):

ಈ ಎಸ್‌ಯುವಿಯು ಫೆಬ್ರವರಿ 4 ರಂದೇ ಮಾರಾಟಕ್ಕೆ ಬರಲಿದೆ. ರೂ.11 ಲಕ್ಷದಿಂದ ರೂ.18 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. 5 ಆಸನಗಳನ್ನು ಪಡೆದಿರಲಿದೆ. 1.3-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್‌ ಎಂಜಿನ್‌ನ್ನು ಒಳಗೊಂಡಿರಲಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿರಲಿದೆ.

ನಿಸ್ಸಾನ್ ಗ್ರಾವೈಟ್ (Nissan Gravite):

ಇದು ಪುಟ್ಟ ಗಾತ್ರದ ಎಂಪಿವಿಯಾಗಿದ್ದು, ಈ ಫೆಬ್ರವರಿಯಲ್ಲಿಯೇ ಬಿಡುಗಡೆಯಾಗಬಹುದು ಎಂದು ಅಂದಾಜಿಸಲಾಗಿದೆ. ರೂ.6 ಲಕ್ಷದಿಂದ ರೂ.9 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಲಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿರಬಹುದು ಎನ್ನಲಾಗಿದೆ.

More from DriveSpark

Article Published On: Monday, February 2, 2026, 11:08 [IST]
English summary
Upcoming 5 cars in india february 2026 e vitara urban cruiser ebella majestor tekton and gravite
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+