ಭಾರತದಲ್ಲಿ ಹೊಸ ಕಂಪನಿಯ ಅಬ್ಬರ.. ಪ್ರತಿಷ್ಠಿತ ಬ್ರ್ಯಾಂಡ್‌ಗಳೇ ಸುಸ್ತು.. ಬರೋಬ್ಬರಿ 375 ಕಾರುಗಳ ಡೆಲಿವರಿ!

ವಿಯೆಟ್ನಾಂಗೆ ಸೇರಿರುವ ವಿನ್‌ಫಾಸ್ಟ್‌ (VinFast), ಜಾಗತಿಕ ಎಲೆಕ್ಟ್ರಿಕ್ ವಾಹನೋದ್ಯಮದಲ್ಲಿ ತನ್ನದೆಯಾದ ಛಾಪನ್ನು ಮೂಡಿಸಿದೆ. ಭಾರತದಲ್ಲೂ ವಿಎಫ್6 ಮತ್ತು ವಿಎಫ್7 ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. 2025ರ ಡಿಸೆಂಬರ್‌ನಲ್ಲಿಯೂ ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸಿದೆ. ಈ ಮೂಲಕ ಪ್ರತಿಷ್ಠಿತ ಕಾರು ತಯಾರಕ ಕಂಪನಿಗಳಾದ ಕಿಯಾ ಹಾಗೂ ಹುಂಡೈಗಳನ್ನು ಹಿಂದಿಕ್ಕಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ವಾಹನ್ ಪೋರ್ಟಲ್‌ ಪ್ರಕಾರ, ಕಳೆದ ತಿಂಗಳು (ಡಿಸೆಂಬರ್‌ - 2025) ಟಾಟಾ ಮೋಟಾರ್ಸ್ 6,434 ಯುನಿಟ್‌ ಎಲೆಕ್ಟ್ರಿಕ್ ಕಾರುಗಳ ಮಾರಾಟದೊಂದಿಗೆ ಅಗ್ರ ಸ್ಥಾನದಲ್ಲಿದೆ. 3,555 ಯುನಿಟ್‌ಗಳೊಂದಿಗೆ ಎಂಜಿ ಮೋಟಾರ್ ಎರಡನೇ ಸ್ಥಾನದಲ್ಲಿದೆ. 3,065 ಯುನಿಟ್‌ಗಳನ್ನು ಮಾರಾಟಗೊಳಿಸುವುದರೊಂದಿಗೆ ಮಹೀಂದ್ರಾ ಮೂರನೇ ಸ್ಥಾನದಲ್ಲಿದೆ.

Vinfast Sold 375 Electric Cars In December 2025 In India Overtaking Kia and Hyundai Details

ಅದೇ ರೀತಿಯಲ್ಲಿ ಹೊಸ ಕಂಪನಿಯಾದ 'ವಿನ್‌ಫಾಸ್ಟ್' ಸರಿ ಸುಮಾರು 375 ಯುನಿಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಕಿಯಾ ಇಂಡಿಯಾ 313 ಯುನಿಟ್‌ ಮಾರಾಟದೊಂದಿಗೆ ಐದನೇ ಸ್ಥಾನದಲ್ಲಿದೆ. 262 ಯುನಿಟ್‌ಗಳೊಂದಿಗೆ ಹ್ಯುಂಡೈ ಮೋಟಾರ್ ಇಂಡಿಯಾ ಆರನೇ ಸ್ಥಾನದಲ್ಲಿದೆ.

ವಿನ್‌ಫಾಸ್ಟ್‌ ಕಾರುಗಳಿಗೆ ಬೇಡಿಕೆ ಏಕೆ:

2025ರ ಸೆಪ್ಟೆಂಬರ್ ತಿಂಗಳಲ್ಲಿ 'ವಿನ್‌ಫಾಸ್ಟ್‌' ಕಂಪನಿಯು ವಿಎಫ್6 ಹಾಗೂ ವಿಎಫ್7 ಕಾರುಗಳನ್ನು ಬಿಡುಗಡೆಗೊಳಿಸಲಾಗಿತ್ತು. ಇವೆರೆಡು ಕಾರುಗಳು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿವೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಹೀಗಾಗಿ, ಈ ಕಾರುಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿವೆ ಎಂದು ವಿಶ್ಲೇಷಿಸಲಾಗಿದೆ.

Vinfast Sold 375 Electric Cars In December 2025 In India Overtaking Kia and Hyundai Details

ವಿನ್‌ಫಾಸ್ಟ್ ವಿಎಫ್6 (VinFast VF6):

ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅರ್ಥ್, ವಿಂಡ್ ಮತ್ತು ವಿಂಡ್ ಇನ್ಫಿನಿಟಿ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ & ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳನ್ನು ಆಯ್ಕೆಯನ್ನು ಪಡೆದಿದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 470 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 423 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ 'ವಿಎಫ್6' 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್ ಹಾಗೂ ಯುಎಸ್‌‍ಬಿ ಸಿ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಆಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ವಿನ್‌ಫಾಸ್ಟ್ ವಿಎಫ್7 (VinFast VF7):

ಈ ಕಾರು ರೂ.20.89 ಲಕ್ಷದಿಂದ ರೂ.25.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅರ್ಥ್, ವಿಂಡ್, ವಿಂಡ್ ಇನ್ಫಿನಿಟಿ, ಸ್ಕೈ ಮತ್ತು ಸ್ಕೈ ಇನ್ಫಿನಿಟಿ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ಡೆಸಾಟ್ ಸಿಲ್ವರ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್, ಜೆನಿತ್ ಗ್ರೇ & ಅರ್ಬನ್ ಮಿಂಟ್ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು.

ಇದು 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 70.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 438 ರಿಂದ 532 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಪನೋರಮಿಕ್ ಗ್ಲಾಸ್ ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Friday, January 2, 2026, 17:49 [IST]
English summary
Vinfast sold 375 electric cars in december 2025 in india overtaking kia and hyundai details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+