Vinfast: ಸೈಲೆಂಟ್ ಆಗಿ ಹೊಸ ಬ್ರ್ಯಾಂಡ್‌ನಿಂದ ಗ್ರಾಹಕರಿಗೆ ಶಾಕ್.. ಯಾಕೆ?

ವಿಯೆಟ್ನಾಂ ಮೂಲದ ವಿನ್‌ಫಾಸ್ಟ್‌ (VinFast) ಪ್ರಮುಖ ಕಾರು ತಯಾಕರ ಕಂಪನಿಯಾಗಿ ಹೊರಹೊಮ್ಮಿದೆ. 2025ರ ಸೆಪ್ಟೆಂಬರ್‌ನಲ್ಲಿ ಹೊಚ್ಚ ಹೊಸ ವಿಎಫ್6 ಮತ್ತು ವಿಎಫ್7 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮಾರಾಟಕ್ಕೆ ತಂದಿತ್ತು. ಸದ್ಯ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದು, ಇವೆರೆಡು ಕಾರುಗಳ ಬೆಲೆಯನ್ನು ಹೆಚ್ಚಿಸಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.80,000 ರಿಂದ ರೂ.1.30 ಲಕ್ಷವರೆಗೆ ಅಧಿಕಗೊಳಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ವಿನ್‌ಫಾಸ್ಟ್ ವಿಎಫ್6 (VinFast VF6):

ಇದು ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, ರೂ.90,000 ವರೆಗೆ ಬೆಲೆ ಏರಿಕೆಯಾಗಿದೆ. ಈ ಕಾರಿನ 'ಅರ್ಥ್' ರೂಪಾಂತರದ ದರ ರೂ.80,000 ಹೆಚ್ಚಳಗೊಂಡಿದೆ. ಅದೇ ರೀತಿಯಲ್ಲಿ ವಿಂಡ್ ಹಾಗೂ ವಿಂಡ್ ಇನ್ಫಿನಿಟಿ ರೂಪಾಂತರಗಳ ಬೆಲೆ ರೂ.90,000 ಏರಿಕೆಯಾಗಿದೆ. ನೂತನ 'ವಿಎಫ್6' ಎಸ್‌ಯುವಿ ಕನಿಷ್ಠ ರೂ.17.29 ಲಕ್ಷ ಹಾಗೂ ಗರಿಷ್ಠ ರೂ.19.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Vinfast VF6 and VF7 Cars Price Hiked Upto Rs 1 30 Lakh In India Details

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಜೆನಿತ್ ಗ್ರೇ, ಕ್ರಿಮ್ಸನ್ ರೆಡ್, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಮತ್ತು ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಮಿಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು.

ಹೊಸ 'ವಿಎಫ್6' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 470 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 8.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Vinfast VF6 and VF7 Cars Price Hiked Upto Rs 1 30 Lakh In India Details

ಇದು 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಸೌಂಡ್ ಸಿಸ್ಟಮ್, ಯುಎಸ್‌‍ಬಿ ಸಿ ಚಾರ್ಜಿಂಗ್ ಮತ್ತು ಪನೋರಮಿಕ್ ಸನ್‌ರೂಫ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ವಿನ್‌ಫಾಸ್ಟ್ ವಿಎಫ್7 (VinFast VF7):

ಈ ಕಾರಿನ ದರವು ರೂ.1.30 ಲಕ್ಷವರೆಗೆ ಏರಿಕೆಯಾಗಿದೆ. ಇದರ 'ಅರ್ಥ್' ರೂಪಾಂತರದ ಬೆಲೆ ರೂ.1 ಲಕ್ಷ ಅಧಿಕಗೊಂಡಿದೆ. 'ವಿಂಡ್' ರೂಪಾಂತರದ ದರ ರೂ.1.20 ಲಕ್ಷ ಮತ್ತು 'ಸ್ಕೈ' ರೂಪಾಂತರದ ಬೆಲೆ ರೂ.1.30 ಲಕ್ಷವರೆಗೆ ಹೆಚ್ಚಳವಾಗಿದೆ. ನೂತನ 'ವಿಎಫ್7' ರೂ.21.89 ಲಕ್ಷದಿಂದ ರೂ.26.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ.

ಇದರ ವಿನ್ಯಾಸವು ಉತ್ತಮವಾಗಿದೆ. ಡೆಸಾಟ್ ಸಿಲ್ವರ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್, ಜೆನಿತ್ ಗ್ರೇ ಮತ್ತು ಅರ್ಬನ್ ಮಿಂಟ್ ಬಣ್ಣಗಳೊಂದಿಗೂ ಸಿಗುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,840 ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ಹೊಸ 'ವಿಎಫ್7' ಎಸ್‌ಯುವಿಯು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 70.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 438 ರಿಂದ 532 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರು 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಗ್ಲಾಸ್ ರೂಫ್ & ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Saturday, January 10, 2026, 14:07 [IST]
English summary
Vinfast vf6 and vf7 cars price hiked upto rs 1 30 lakh in india details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+