VinFast: ಹೊಸ ಕಂಪನಿಯ ಸಾಮರ್ಥ್ಯ ಪ್ರದರ್ಶನ! ಭಾರತದಲ್ಲಿ ಈ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಘೋಷಣೆ

ವಿಯೆಟ್ನಾಂ ಮೂಲದ ವಿನ್‌ಫಾಸ್ಟ್‌ (VinFast) ಪ್ರಮುಖ ವಾಹನ ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ನೂತನ ವಿಎಫ್6 ಮತ್ತು ವಿಎಫ್7 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮಾರಾಟಕ್ಕೆ ತಂದಿತ್ತು. ಇವೆರೆಡು ಕಾರುಗಳು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) 'ವಿಎಫ್6 'ನ್ನು ಅತ್ಯಂತ ಸುರಕ್ಷಿತ ಎಸ್‌ಯುವಿಯೆಂದು ನಿರ್ಣಯಿಸಿದೆ.

ಹೊಸ ವಿನ್‌ಫಾಸ್ಟ್ ವಿಎಫ್6 (VinFast VF6), ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 27.13 ಅಂಕಗಳನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 44.41 ಅಂಕಗಳನ್ನು ಗಳಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಯಶಸ್ವಿಯಾಗಿದೆ.

VinFast VF6 SUV Gets 5 Star Safety Rating In Bharat NCAP Crash Test Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್-ಡಿಸ್ಕ್ ಬ್ರೇಕ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

'ವಿನ್‌ಫಾಸ್ಟ್ ವಿಎಫ್6' ವಿಶೇಷತೆಗಳೇನು:

ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.16.49 ಲಕ್ಷ ಹಾಗೂ ಗರಿಷ್ಠ ರೂ.18.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅರ್ಥ್ (Earth), ವಿಂಡ್ (Wind) ಮತ್ತು ವಿಂಡ್ ಇನ್ಫಿನಿಟಿ (Wind Infinity) ಎಂಬ 3 ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

VinFast VF6 SUV Gets 5 Star Safety Rating In Bharat NCAP Crash Test Details

ನೂತನ 'ವಿನ್‌ಫಾಸ್ಟ್ ವಿಎಫ್6' ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೆನಿತ್ ಗ್ರೇ, ಕ್ರಿಮ್ಸನ್ ರೆಡ್, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಹಾಗೂ ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,730 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 470 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 201 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 310 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 8.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಕೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಬರೋಬ್ಬರಿ 423 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಹೊಸ 'ವಿನ್‌ಫಾಸ್ಟ್ ವಿಎಫ್6' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಈ ಕಾರಿನಲ್ಲಿರುವ ಬ್ಯಾಟರಿಯು ಡಿಸಿ ಫಾಸ್ಟ್ ಚಾರ್ಜರ್ ಉಪಯೋಗ ಮಾಡಿದಾಗ ಕೇವಲ 25 ನಿಮಿಷಗಳಲ್ಲಿ ಶೇಕಡ 10 ರಿಂದ 70% ಚಾರ್ಜ್ ಆಗುತ್ತದೆ. 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 8-ಸ್ಪೀಕರ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಯುಎಸ್‌‍ಬಿ ಸಿ ಚಾರ್ಜಿಂಗ್ ಹಾಗೂ ಕನೆಕ್ಟೆಡ್ ಕಾರ್ ಟೆಕ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Wednesday, January 21, 2026, 15:44 [IST]
English summary
Vinfast vf6 suv gets 5 star safety rating in bharat ncap crash test details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+