Just In
Don't Miss!
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Sports
ಭಾರತೀಯರ ನಿಂದಿಸಿದ ಕಿಡಿಗೇಡಿಗಳ ಕಂಡುಹಿಡಿಯುವಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ವಿಫಲ
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಆಮದು ನೀತಿ ಅಡಿ ವಿವಿಧ ಐಷಾರಾಮಿ ಕಾರುಗಳನ್ನು ಬಿಡುಗಡೆ ಮಾಡಲಿದೆ ಫೋರ್ಡ್
ಕಾರು ಮಾರಾಟದಲ್ಲಿ ತನ್ನದೆ ಜನಪ್ರಿಯತೆ ಹೊಂದಿರುವ ಫೋರ್ಡ್ ಇಂಡಿಯಾ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳನ್ನು ಹೊಸ ಆಮದು ನೀತಿ ಅಡಿ ಮಾರಾಟಗೊಳಿಸಲಿದೆ.

ಕೇಂದ್ರ ಸರ್ಕಾರವು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ 2500 ವಾಹನಗಳನ್ನು ಯಾವುದೇ ಹೆಚ್ಚುವರಿ ಶುಲ್ಕಗಳಿಲ್ಲದೆ ಆಮದು ಮಾಡಿಕೊಳ್ಳುವ ಅವಕಾಶ ನೀಡಿದ್ದು, ಈ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ತಮ್ಮ ಮೂಲ ಕಾರು ಉತ್ಪಾದನಾ ಘಟಕಗಳಿಂದ ನಿಗದಿತ ಪ್ರಮಾಣದಲ್ಲಿ ಹೊಸ ವಾಹನಗಳನ್ನು ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಆರಂಭಿಸುತ್ತಿವೆ. ಇದೀಗ ಅಮೆರಿಕ ಫೋರ್ಡ್ ಕಂಪನಿಯು ಕೂಡಾ ಹೊಸ ಆಮದು ನೀತಿ ಅಡಿ ವಿವಿಧ ಕಾರುಗಳನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಿದ್ದು, ಹೊಸ ಕಾರುಗಳು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿವೆ.

ಫೋರ್ಡ್ ಕಂಪನಿಯು ಹೊಸ ಆಮದು ನೀತಿ ಅಡಿ ಪ್ರಮುಖ ಎರಡು ಐಷಾರಾಮಿ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದು, ರೇಂಜರ್ ರಾಫ್ಟರ್ ಪರ್ಫಾಮೆನ್ಸ್ ಪಿಕ್ಅಪ್ ಮತ್ತು ಫೋಕಸ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೊಸ ಆಮದು ನೀತಿ 2500 ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿರುವ ಬಗ್ಗೆ ಖಚಿತಪಡಿಸಿರುವ ಫೋರ್ಡ್ ಕಂಪನಿಯು ಹೊಸ ಕಾರುಗಳನ್ನು ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲೇ ಭಾರತದಲ್ಲೂ ಬಿಡುಗಡೆಗೆ ನಿರ್ಧರಿಸಿದೆ.

ಆಮದು ನೀತಿ ಅಡಿ ಬಿಡುಗಡೆಯಾಗಲಿರುವ ಫೋರ್ಡ ಹೊಸ ಕಾರು ಮಾದರಿಗಳು ಸದ್ಯ ತನ್ನ ಮಾರಾಟ ಸರಣಿಯಲ್ಲಿರುವ ಎಂಡೀವರ್ ಎಸ್‌ಯುವಿ ಮಾದರಿಗಿಂತಲೂ ಹೆಚ್ಚಿನ ಮಟ್ಟದ ವೈಶಿಷ್ಟ್ಯತೆಗಳೊಂದಿಗೆ ದುಬಾರಿ ಬೆಲೆಯಲ್ಲಿ ಮಾರಾಟಗೊಳ್ಳಲಿವೆ. ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದಲೇ ಆಮದುಗೊಂಡಿರುವ ಮಾದರಿಗಳಾಗಿರುವುದರಿಂದ ಹೊಸ ಕಾರುಗಳಲ್ಲಿ ಅಂತರ್‌ರಾಷ್ಟ್ರೀಯ ಗುಣಮಟ್ಟದ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿರುತ್ತದೆ.

ಫೋರ್ಡ್ ಹೊಸ ಫೋಕಸ್ ಮಾದರಿಯು ಅಮೆರಿಕ ಮಾರಾಟವಾಗುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದ್ದು, ಈ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸ್ಟ್ಯಾಂಡರ್ಡ್ ಮತ್ತು ಎಸ್‌ಟಿ ಆವೃತ್ತಿಗಳಲ್ಲಿ ಮಾರಾಟಗೊಳ್ಳುವ ಮೂಲಕ ಐಷಾರಾಮಿ ಕಾರುಗಳ ವೈಶಿಷ್ಟ್ಯತೆ ಹೊಂದಿರಲಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಫೋಕ್ಸ್‌ವ್ಯಾಗನ್ ಗಾಲ್ಫ್ ಮಾದರಿಯೊಂದಿಗೆ ಪ್ರಮುಖ ಪೈಪೋಟಿ ನೀಡುವ ಫೋಕಸ್ ಕಾರು ಮಾದರಿಯು ಸ್ಟ್ಯಾಂಡರ್ಡ್ ಮಾದರಿಯಲ್ಲಿ 1.0-ಲೀಟರ್ ಇಕೋಬೂಸ್ಟ್ ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಟರ್ಬೋಚಾರ್ಜ್ಡ್ ಡೈರೆಕ್ಟ್ ಇಂಜೆಕ್ಷನ್ ಪೆಟ್ರೋಲ್ ಮಾದರಿಯನ್ನು ಬಳಕೆ ಮಾಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಫೋಕಸ್ ಎಸ್‌ಟಿ ಮಾದರಿಯಲ್ಲಿ 2.3-ಲೀಟರ್ ಇಕೋಬೂಸ್ಟ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಸ್ಟ್ಯಾಂಡರ್ಡ್ ಮಾದರಿಯು 160-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದರೆ ಎಸ್‌ಟಿ ಮಾದರಿಯು 280-ಬಿಎಚ್‌ಪಿ ಉತ್ಪಾದನಾ ಶಕ್ತಿ ಹೊಂದಿದೆ.

ವಿವಿಧ ಮಾದರಿಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ನಾರ್ಮಲ್, ಸ್ಪೋರ್ಟ್ ಮತ್ತು ಟ್ರ್ಯಾಕ್ ರೇಸ್ ಮೋಡ್‌ಗಳೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯಗಳನ್ನು ಹೊಂದಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲಿ ಬಿಡುಗಡೆಯಾಗಲಿರುವ ಫೋರ್ಡ್ ಹೊಸ ಕಾರುಗಳನ್ನು ಮಧ್ಯಮ ಕ್ರಮಾಂಕದ ಐಷಾರಾಮಿ ಕಾರು ಮಾದರಿಗಳಾಗಿ ಗುರುತಿಸಿಕೊಳ್ಳಲಿದ್ದು, ಫೋಕಸ್ ಕಾರು ಮಾದರಿಯು ಭಾರತದಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ. 35 ಲಕ್ಷದಿಂದ ರೂ.40 ಲಕ್ಷ ಬೆಲೆ ಅಂತರದಲ್ಲಿ ಮಾರಾಟ ನೀರಿಕ್ಷೆಗಳಿವೆ.