Just In
- 11 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 14 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 14 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 15 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರು
ಜನಪ್ರಿಯ ಕಾರು ತಯಾರಕ ಕಂಪನಿಯಾದ ರೆನಾಲ್ಟ್ ತನ್ನ ಜೊಯ್ ಎಲೆಕ್ಟ್ರಿಕ್ ಕಾರನ್ನು ಕಾರನ್ನು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಫ್ರೆಂಚ್ ಆಟೋ ತಯಾರಕರಾದ ರೆನಾಲ್ಟ್ 2020ರ ಆಟೋ ಎಕ್ಸ್ಪೋದಲ್ಲಿ ಜೊಯ್ ಎಲೆಕ್ಟ್ರಿಕ್ ಕಾರನ್ನು ಪ್ರದರ್ಶಿಸಿದ್ದರು.
ಈ ಮಾದರಿಯು ಮಾರುಕಟ್ಟೆಯ ಕಾರ್ಯಸಾಧ್ಯತೆಯನ್ನು ನಿರ್ಣಯಿಸುವುದಾಗಿ ಕಂಪನಿಯು ಘೋಷಿಸಿತು. ಈ ಹೊಸ ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರನ್ನು ಚೆನೈ ಬಳಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಇದು ದೇಶದ ಬ್ರ್ಯಾಂಡ್ನ ಇವಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಪರೀಕ್ಷೆಯಾಗಬಹುದು.
ಕಂಪನಿಯು ತನ್ನ ಯೋಜನೆಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ರೆನಾಲ್ಟ್ ಜೊಯ್ ಜೊತೆ ಇನ್ನು ಖಚಿತಪಡಿಸಿಲ್ಲ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ಆಲ್-ಎಲೆಕ್ಟ್ರಿಕ್ ಕಾರು ಮುಂದಿನ ವರ್ಷದಲ್ಲಿ ಬಿಡುಗಡೆಯಾಗಬಹುದು.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರನ್ನು 2012ರ ಜಿನೀವಾ ಮೋಟಾರ್ ಶೋನಲ್ಲಿ ಪ್ರದರ್ಶಿಸಿದ್ದರು. ಸದ್ಯ ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಈ ಎಲೆಕ್ಟ್ರಿಕ್ ಕಾರು ಹಲವಾರು ಟ್ರಿಮ್ ಆಯ್ಕೆಗಳಲ್ಲಿ ಲಭ್ಯವದೆ.
ಯುರೋಪಿಯನ್ ಸ್ಪೆಕ್ ರೆನಾಲ್ಟ್ ಜೊಯ್ ಆರ್110 ಮತ್ತು ಟಾಪ್-ಸ್ಪೆಕ್ ಆರ್135 ಎಂಬ ಎರಡು ಬ್ಯಾಟರಿ ಸಂರಚನೆಗಳಲ್ಲಿ ಲಭ್ಯವಿದೆ. ಎರಡೂ ಮಾದರಿಗಳು ಒಂದೇ ರೀತಿಯ ಎಲೆಕ್ಟ್ರಿಕ್ ಪವರ್ಟ್ರೇನ್ ಸಂಯೋಜನೆಯನ್ನು ಮೂರು-ಹಂತದ ಎಲೆಕ್ಟ್ರಿಕ್ ಮೋಟರ್ನೊಂದಿಗೆ 52 ಕಿ.ವ್ಯಾ ಬ್ಯಾಟರಿ ಪ್ಯಾಕ್ಗೆ ಜೋಡಿಸಿವೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಆರ್110 ಮಾದರಿಯಲ್ಲಿರುವ ಪವರ್ಟ್ರೇನ್ 107 ಬಿಹೆಚ್ಪಿ ಪವರ್ ಮತ್ತು 225 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಮತ್ತೊಂದೆಡೆ ಟಾಪ್-ಸ್ಪೆಕ್ ಆರ್135 ಮಾದರಿಯಲ್ಲಿರುವ ಪವರ್ಟ್ರೇನ್ 134 ಬಿಹೆಚ್ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಆರ್110 ಮಾದರಿಯು 11.4 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ಸ್ಪೀಡ್ ಅನ್ನು ಕ್ರಮಿಸುತ್ತದೆ. ಆರ್110 ಮಾದರಿಯು 135 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಟಾಪ್-ಸ್ಪೆಕ್ ಆರ್135 ಮಾದರಿಯು 9.5 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಮಾದರಿಯು 140 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರಿನ ಇಂಟಿರಿಯರ್ ನಲ್ಲಿ 9.3-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದರಲ್ಲಿ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಬ್ರ್ಯಾಂಡ್ನ ಇತ್ತೀಚಿನ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಒಳಗೊಂಡಿರುತ್ತದೆ.
ಇದರೊಂದಿಗೆ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಮೌಂಟಡ್ ಕಂಟ್ರೋಲ್ ಗಳೊಂದಿಗೆ ಮಲ್ಟಿಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ವೈರ್ಲೆಸ್ ಸ್ಮಾರ್ಟ್ಫೋನ್ ಚಾರ್ಜರ್ ಎಬಿಎಸ್ ವಿಥ್ ಇಬಿಡಿ, ಮಲ್ಟಿಪಲ್ ಏರ್ಬ್ಯಾಗ್, ಹಿಲ್ ಸ್ಟಾರ್ಟ್ ಅಸಿಸ್ಟ್ ಮತ್ತು ಇನ್ನಿತರ ಫೀಚರ್ ಗಳನ್ನು ಹೊಂದಿರಲಿದೆ.