ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಭಾರತದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದರಿಂದ ಪಾರಾಗಲು ಹೆಚ್ಚಿನ ಜನರು ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಹಲವಾರು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿ ಪಡಿಸುತ್ತಿದೆ.

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ನಗರ ಪ್ರದೇಶಗಳಲ್ಲಿ ಚಾರ್ಜಿಂಗ್ ಸ್ಟೇಶನ್ ಗಳನ್ನು ಪ್ರಾರಂಭಿಸಿದ್ದಾರೆ. ಅಲ್ಲದೇ ಹಲವು ಎಲೆಕ್ಟ್ರಿಕ್ ವಾಹನಗಳು ಉತ್ತಮ ರೇಂಜ್ ಅನ್ನು ಹೊಂದಿದೆ. ಆದರೆ ನಗರ ಹೊರಭಾಗದ ದೂರ ಪ್ರದೇಶಗಳಿಗೆ ತೆರಳಿದರೆ ಚಾರ್ಜಿಂಗ್ ಸ್ಟೇಶನ್‌ಗಳ ಕೊರೆತೆ ಇದೆ. ಆದರೆ ಮುಂದಿನ ದಿನಗಳಲ್ಲಿ ಚಾರ್ಜಿಂಗ್ ಸ್ಟೇಶನ್‌ಗಳನ್ನು ವಿಸ್ತರಿಸಲಾಗುತ್ತಿದೆ. ಇನ್ನು ನಗರ ಪ್ರದೇಶಗಳ ಜನರಿಗೆ ಎಲೆಕ್ಟ್ರಿಕ್ ವಾಹನಗಳು ಉತ್ತಮ ಆಯ್ಕೆಯಾಗಿದೆ.

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಎಲೆಕ್ಟ್ರಿಕ್ ವಾಹನಗಳ ಯುಗ ಪ್ರಾರಂಭವಾಗುತ್ತಿರುವ ನೀವು ಸೆಕೆಂಡ್ ಹ್ಯಾಂಡ್ ಅಥವಾ ಬಳಸಿದ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಬಯಸುತ್ತಿದ್ದರೆ ಅಂತವರು ತಿಳಿದುಕೊಳ್ಳಬೇಕಾದ ಕೆಲವು ಅಂಶಗಳಿವೆ. ಇದರಲ್ಲಿ ಪ್ರಮುಖ ಅಂಶಗಳು ಇಲ್ಲಿವೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಪರಿಸರ ಸ್ನೇಹಿ

ಎಲೆಕ್ಟ್ರಿಕ್ ವಾಹನಗಳು ಪರಿಸರದಲ್ಲಿ ಮಾಲಿನ್ಯವನ್ನು ಉಂಟುಮಾಡುವುದಿಲ್ಲ. ಎಲೆಕ್ಟ್ರಿಕ್ ವಾಹನಗಳು ಜಾಗತಿಕ ತಾಪಮಾನ ಏರಿಕೆಗೆ ಹೆಚ್ಚಿನ ಕೊಡುಗೆ ನೀಡುತ್ತವೆ. ಆದ್ದರಿಂದ, ಹೆಚ್ಚು ಪರಿಸರ ಸ್ನೇಹಿಯಾಗಿರುವುದರಿಂದ ಪೆಟ್ರೋಲ್ ಅಥವಾ ಡೀಸೆಲ್ ವಾಹನಗಗಿಂತ ಇವಿ ಆಯ್ಕೆ ಮಾಡುವುದು ಪರಿಸರಕ್ಕೆ ನೀಡಬಹುದಾದ ಉತ್ತಮ ಕೊಡುಗೆಯಾಗಿದೆ.

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಮಾಲೀಕತ್ವದ ವೆಚ್ಚ

ಇತರ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ಮಾಲೀಕತ್ವದ ವೆಚ್ಚವು ತುಂಬಾ ಕಡಿಮೆಯಾಗಿದೆ. ನೀವು ಇವಿ ಹೊಂದಿದ್ದರೆ ಹೆಚ್ಚುತ್ತಿರುವ ಇಂಧನ ಬೆಲೆಗಳು ನಿಮಗೆ ತಲೆನೋವಾಗುವುದಿಲ್ಲ. ಅಲ್ಲದೇ ಎಲೆಕ್ಟ್ರಿಕ್ ವಾಹನಗಳ ನಿರ್ವಹಣೆಯ ವೆಚ್ಚವು ಕೂಡ ಕಡಿಮೆಯಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಸುಗಮ ಚಾಲನಾ ಅನುಭವ

ಎಲೆಕ್ಟ್ರಿಕ್ ವಾಹನಗಳು ಸಾಮಾನ್ಯವಾಗಿ ಇತರ ಇಂಧನ ಚಾಲಿತ ವಾಹನಗಳಿಗಿಂತ ನಿಶ್ಯಬ್ದವಾಗಿ ಸುಗಮವಾದ ಚಾಲನಾ ಅನುಭವವನ್ನು ನೀಡುತ್ತದೆ. ಇತರ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ಕಾರು ಡ್ರೈವ್ ಮಾಡಲು ಹೆಚ್ಚು ಆರಾಮದಾಯಕವಾಗಿದೆ.

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಬ್ಯಾಟರಿ ಕಾರ್ಯಕ್ಷಮತೆ

ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಕಾರ್ಯಕ್ಷಮತೆಯು ಇತರ ವಾಹನಗಳಿಗಿಂತ ಕಡಿಮೆಯಾಗಿರುತ್ತದೆ. ಇನ್ನು ಕಡಿಮೆ ವೋಲ್ಟೇಜ್‌ನಿಂದಾಗಿ ಬ್ಯಾಟರಿಯ ಕಾರ್ಯಕ್ಷಮತೆ ಪರಿಣಾಮ ಬೀರುತ್ತದೆ. ಇದನ್ನು ಕೂಡ ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವಾಗ ಗಮನಿಸಬೇಕು.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಫೇಮ್-II ಯೋಜನೆಯಡಿ ಸಬ್ಸಿಡಿ

ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಫೇಮ್-II ಯೋಜನೆಯಡಿ ಈಗಾಗಲೇ ಕೇಂದ್ರ ಸರ್ಕಾರ ಸಬ್ಸಿಡಿ ಕೂಡ ಘೋಷಿಸಿದೆ. ಹೀಗಾಗಿ ಹೊಸ ಎಲೆಕ್ಟ್ರಿಕ್ ವಾಹನ ಖರೀದಿ ಸುಲಭವಾಗಲಿದೆ. ಇದರೊಂದಿಗೆ ಎಲೆಕ್ಟ್ರಿಕ್ ಕಾರುಗಳ ಮೇಲೆ ಹಲವು ರಿಯಾಯಿತಿಗಳನ್ನು ಕೂಡ ಪಡೆಯಬಹುದು. ಆದರೆ ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ವಾಹನಗಳನ್ನು ಖರೀದಿಸುವಾಗ ಈ ವಿಷಯವನ್ನು ಕೂಡ ಯೋಚನೆ ಮಾಡಿ,

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಚಾರ್ಜಿಂಗ್ ಸೌಲಭ್ಯ

ಎಲೆಕ್ಟ್ರಿಕ್ ವಾಹನಗಳಿಗೆ ಸರಿಯಾದ ಸಾರ್ವಜನಿಕ ಚಾರ್ಜಿಂಗ್ ನೆಟ್‌ವರ್ಕ್ ಇಲ್ಲದಿರುವುದು ವಾಹನದ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ. ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಶನ್ ಗಳನ್ನು ಹುಡುಕುವುದು ತಲೆನೋವಾಗಿದೆ. ಆದರೆ ಮುಂದುವರೆದ ನಗರ ಪ್ರದೇಶಗಳಲ್ಲಿ ಚಾರ್ಜಿಂಗ್ ಸೌಲಭ್ಯ ಸಮಸ್ಯೆಗಳು ಎದುರಾಗುವುದಿಲ್ಲ.

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಕಡಿಮೆ ಸುಧಾರಿತ ತಂತ್ರಜ್ಞಾನ

ಸಾಮಾನ್ಯ ಎಲೆಕ್ಟ್ರಿಕ್ ವಾಹನಗಳ ಇವಿಗಳಿಗೆ ಬಂದಾಗ ತಂತ್ರಜ್ಞಾನವು ಇತ್ತೀಚೆಗೆ ಅಭಿವೃದ್ಧಿ ಪಡಿಸಲಾಗುತ್ತಿದೆ, ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನ ಮತ್ತಷ್ಟು ಮುಂದುವರೆಯಬೇಕಾಗಿದೆ, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನದಲ್ಲಿ ಸುಧಾರಣೆಯನ್ನು ಕಾಣಬಹುದು. ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವ ಈ ವಿಷಯವನ್ನು ಕೂಡ ಪರಿಗಣಿಸಿ.

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಬ್ಯಾಟರಿ ಲೈಫ್

ಎಲೆಕ್ಟ್ರಿಕ್ ವಾಹನಗಳಲ್ಲಿ ಕೆಲವು ಸಂದರ್ಭಗಳಲ್ಲಿ ಬ್ಯಾಟರಿ ಲೈಫ್ ದೀರ್ಘಕಾಲಾದವರೆಗೆ ಉಳಿಯುವುದಿಲ್ಲ. ಅದ್ದರಿಂದ ನೀವು ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಾಗ ಬ್ಯಾಟರಿ ಸ್ಥಿತಿಯ ಬಗ್ಗೆ ಪರಿಶೀಲಿಸಿದರೆ ಉತ್ತಮ. ಬ್ಯಾಟರಿ ಲೈಫ್ಟ್ ಎಲೆಕ್ಟ್ರಿಕ್ ವಾಹನದಲ್ಲಿ ಪ್ರಮುಖ ವಿಷಯವಾಗಿದೆ.

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ರಿಸೇಲ್ ವ್ಯಾಲ್ಯೂ

ಇತರ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ರಿಸೇಲ್ ವ್ಯಾಲ್ಯೂ ತುಂಬಾ ಕಡಿಮೆಯಾಗಿದೆ. ಇದು ಇತರ ಪೆಟ್ರೋಲ್ ಅಥವಾ ಡೀಸೆಲ್ ವಾಹನಗಳಿಗಿಂತ ಅಗ್ಗದ ದರದಲ್ಲಿರುತ್ತದೆ. ಇದರಿಂದ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸುವಾಗ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿ.

Most Read Articles

Kannada
English summary
Looking To Buy A Used Electric Vehicle? Here Are The Things You Need Know. Read In Kananda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X